ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ ಬಿಡುಗಡೆ!
ದಕ್ಷಿಣ ಕೊರಿಯಾದ ಟೆಕ್ ಕಂಪನಿ ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ ಅನ್ನು ಇದೀಗ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹಾಗೂ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865+ ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲ ನಂತಹ ಹೈ ಎಂಡ್ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ.

ಹೌದು, ಸ್ಯಾಮ್‌ಸಂಗ್ ಸಂಸ್ಥೆಯು ತನ್ನ ನೂತನ ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನಿನ ಮೂರು ಕ್ಯಾಮೆರಾಗಳು 12ಎಂಪಿ ಸೆನ್ಸಾರ್‌ನಲ್ಲಿದ್ದು, ಸೆಲ್ಫಿ ಕ್ಯಾಮೆರಾವು 10ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ 12GB RAM ಮತ್ತು 512GB ವೇರಿಯಂಟ್ ಆಯ್ಕೆ ಪಡೆದಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್ W21 5G ಫೋನಿನ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ವಿನ್ಯಾಸ
ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ 1,768x2,208 ಪಿಕ್ಸಲ್ ರೆಸಲ್ಯೂಶನ್ ಹೊಂದಿರುವ 7.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಜೊತೆಗೆ ಡೈನಾಮಿಕ್ AMOLED ಡಿಸ್‌ಪ್ಲೇ ಹೊಂದಿದೆ. ಹಾಗೆಯೇ 120Hz ರೀಫ್ರೇಶ್ ರೇಟ್ ಹೊಂದಿದೆ. ಇನ್ನು ಸೆಕೆಂಡ್ ಸ್ಕ್ರೀನ್ 6.2 ಇಂಚಿನ ಡಿಸ್‌ಪ್ಲೇಯನ್ನು ಒಳಗೊಂಡಿದೆ.

ಪ್ರೊಸೆಸರ್ ದಕ್ಷತೆ
ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865+ ಪ್ರೊಸೆಸರ್ ಹೊಂದಿದ್ದು, ಒನ್UI ಜೊತೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ 12GB RAM ಮತ್ತು 512GB ವೇರಿಯಂಟ್ ಆಂತರಿಕ ಸ್ಟೋರೇಜ್ ಆಯ್ಕೆ ಪಡೆದಿದೆ.

ಟ್ರಿಪಲ್ ಸೆನ್ಸಾರ್
ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 12ಎಂಪಿ ಸೆನ್ಸಾರ್ ಸಾಮರ್ಥ್ಯದಲ್ಲಿದ್ದು, ಇನ್ನು ತೃತೀಯ ಕ್ಯಾಮೆರಾವು 12ಎಂಪಿ ಸೆನ್ಸಾರ್ ಬಲವನ್ನು ಪಡೆದಿವೆ. ಇದರೊಂದಿಗೆ ಸೆಲ್ಫಿಗಾಗಿ 10ಎಂಪಿ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಸ್ಯಾಮ್‌ಸಂಗ್ W21 5G ಸ್ಮಾರ್ಟ್‌ಫೋನ್ 4,500 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರೊಂದಿಗೆ ಸೈಡ್ ಮೌಂಟ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಆಂಡ್ರಾಯ್ಡ್ 10 ಓಎಸ್, 4G VoLTE, ವೈಫೈ, ಬ್ಲೂಟೂತ್, ಜಿಪಿಎಸ್ ಆಡಿಯೊ ಜಾಕ್ ಸೇರಿದಂತೆ ಇತ್ತೀಚಿನ ಅಗತ್ಯ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ
ಸ್ಯಾಮ್‌ಸಂಗ್ W21 5G ಬೆಲೆ 12GB RAM ಮತ್ತು 512GB ರೂಪಾಂತರಕ್ಕೆ 19,999 Yuan (ಅಂದಾಜು 2,23,278ರೂ ಎನ್ನಲಾಗಿದೆ) ಆಗಿದೆ.


Click it and Unblock the Notifications








