ಸ್ಯಾಮ್‌ಸಂಗ್‌ನಿಂದ ಎರಡು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ಜಾಗತಿಕ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಜನಪ್ರಿಯ ಬ್ರ್ಯಾಂಡ್‌ಗಳಲ್ಲಿ ಒಂದಾಗಿದೆ. ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ನೆಚ್ಚಿನ ಆಯ್ಕೆಯಾಗಿ ಗುರುತಿಸಿಕೊಂಡಿದೆ. ಅದರಂತೆ ಸ್ಯಾಮ್‌ಸಂಗ್‌ ಕಂಪೆನಿ ಕೂಡ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಇದೀಗ ಸ್ಯಾಮ್‌ಸಂಗ್‌ W23 5G ಮತ್ತು ಸ್ಯಾಮ್‌ಸಂಗ್‌ W23 ಫ್ಲಿಪ್ ಫೋನ್‌ಗಳನ್ನು ಬಿಡುಗಡೆಯಾಗಿವೆ.

ಸ್ಯಾಮ್‌ಸಂಗ್‌

ಹೌದು, ಸ್ಯಾಮ್‌ಸಂಗ್‌ ಕಂಪೆನಿ ಸ್ಯಾಮ್‌ಸಂಗ್‌ W23 5G ಮತ್ತು ಸ್ಯಾಮ್‌ಸಂಗ್‌ W23 ಫ್ಲಿಪ್ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಎರಡೂ ಸ್ಮಾರ್ಟ್‌ಫೋನ್‌ಗಳು ಕೂಡ ಚಿನ್ನದ ಲೇಪಿತ ಎಡ್ಜ್ ಮತ್ತು ಹಿಂಜ್‌ ಅನ್ನು ಹೊಂದಿವೆ. W23 ಮತ್ತು W23 ಫ್ಲಿಪ್ ಎರಡೂ ಕೂಡ ಫೋನ್‌ ಮಧ್ಯದಲ್ಲಿ 'ಹಾರ್ಟ್ ಟು ದಿ ವರ್ಲ್ಡ್' ಎಂದು ಓದುವ ಲೋಗೋದೊಂದಿಗೆ ಬರುತ್ತವೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನಿದೆ? ಇದೆಲ್ಲದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ W23 5G

ಸ್ಯಾಮ್‌ಸಂಗ್‌ W23 5G

ಸ್ಯಾಮ್‌ಸಂಗ್‌ W23 ಸ್ಮಾರ್ಟ್‌ಫೋನ್‌ 7.6 ಇಂಚಿನ ಡೈನಾಮಿಕ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1812 x 2176 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಅನ್ನು ಪಡೆದಿದೆ. ಜೊತೆಗೆ ಡಿಸ್‌ಪ್ಲೇ 373 ಪಿಪಿಐ ಪಿಕ್ಸೆಲ್‌ ಸಾಂದ್ರತೆಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ ವಿಕ್ಟಸ್‌ ಪ್ರೊಟೆಕ್ಷನ್‌ ಪಡೆದುಕೊಂಡಿದೆ. ಇನ್ನುಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 ಪ್ಲಸ್ ಜನ್ 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ಟ್ರಿಪಲ್‌

ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ W23 ಫ್ಲಿಪ್‌

ಸ್ಯಾಮ್‌ಸಂಗ್‌ W23 ಫ್ಲಿಪ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ W23 ಫ್ಲಿಪ್‌ ಸ್ಮಾರ್ಟ್‌ಫೋನ್‌ 6.7 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಮಡಿದೆ. ಇದು ಸ್ನಾಪ್‌ಡ್ರಾಗನ್‌ 8+ Gen 1 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ವೈಡ್ ಆಂಗಲ್ ಲೆನ್ಸ್ ಮತ್ತು ಎರಡನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 10 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 3,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸ್ಯಾಮ್‌ಸಂಗ್‌ W23 5G ಮತ್ತು ಸ್ಯಾಮ್‌ಸಂಗ್‌ W23 ಫ್ಲಿಪ್ ಸ್ಮಾರ್ಟ್‌ಫೋನ್‌ ಸ್ಮಾರ್ಟ್‌ಫೋನ್‌ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರಲ್ಲಿ ಸ್ಯಾಮ್‌ಸಂಗ್‌ W23 5G ಸ್ಮಾರ್ಟ್‌ಫೋನ್‌ 16GB + 512GB ಆಯ್ಕೆಗೆ RMB 15,999 (ಅಂದಾಜು 1,82,303ರೂ)ಬೆಲೆಯಿದೆ. ಇನ್ನು ಸ್ಯಾಮ್‌ಸಂಗ್‌ W23 ಫ್ಲಿಪ್ ಸ್ಮಾರ್ಟ್‌ಫೋನ್‌ 12GB + 512GB ರೂಪಾಂತರದ ಆಯ್ಕೆಗೆ RMB 9,999 (ಅಂದಾಜು 1,13,935ರೂ) ಬೆಲೆಯನ್ನು ಪಡೆದುಕೊಂಡಿದೆ. ಈ ಎರಡೂ ಸಾಧನಗಳು ಸ್ಯಾಮ್‌ಸಂಗ್‌ನ ಅಧಿಕೃತ ವೆಬ್‌ಸೈಟ್‌ನಿಂದ ಫ್ರೀ-ಆರ್ಡರ್‌ಗಳಿಗೆ ಸಿದ್ಧವಾಗಿದ್ದು, ಅಕ್ಟೋಬರ್ 28 ರಿಂದ ಸೇಲ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಭಾರತಕ್ಕೆ ಬರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

Read more about:
English summary
Samsung W23 5G and W23 Flip Smartphones launched

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X