Home
ಸುದ್ದಿಜಾಲ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಶಕ್ತಿ ಸ್ಮಾರ್ಟ್‌ಕಾರ್ಡ್‌' ಕಡ್ಡಾಯ!

ಸರ್ಕಾರಿ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ (KSRTC Bus) ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುವ ಶಕ್ತಿ ಯೋಜನೆಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಸರ್ಕಾರ ಇಂದು (ಸೋಮವಾರ) ಹೊರಡಿಸಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು 'ಶಕ್ತಿ ಸ್ಮಾರ್ಟ್​​ಕಾರ್ಡ್' (Shakti smart card) ಹೊಂದುವುದು ಕಡ್ಡಾಯ ಆಗಿದೆ.

ಹೌದು, ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳಲ್ಲಿ ಒಂದಾದ (ಶಕ್ತಿ ಯೋಜನೆ) ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್‌ಕಾರ್ಡ್‌ ನೀಡುವುದಾಗಿ ಎಂದು ತಿಳಿಸಿದೆ. ಸರ್ಕಾರಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು, ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಳನ್ನು ಪಡೆಯಬಹುದು. ಕಾರ್ಡ್​​ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸತಕ್ಕದ್ದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಶಕ್ತಿ ಸ್ಮಾರ್ಟ್‌ಕಾರ್ಡ್‌' ಕಡ್ಡಾಯ!

ಸ್ಮಾರ್ಟ್​​ಕಾರ್ಡ್ ಲಭ್ಯವಾಗುವ ವರೆಗೆ ಉಚಿತ ಪ್ರಯಾಣ ಸಾಧ್ಯವೇ?
ಉಚಿತ ಬಸ್ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್‌ಕಾರ್ಡ್‌ ಅನ್ನು ವಿತರಿಸುವವರೆಗೆ ಭಾರತ ಸರ್ಕಾರ ಅಥವಾ ಕರ್ನಾಟಕ ಸರ್ಕಾರದ ಇಲಾಖೆ ಅಥವಾ ಸರ್ಕಾರಿ ಸ್ವಾಮ್ಯದ ಕಛೇರಿಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಉಚಿತ ಟಿಕೆಟ್‌ ವಿತರಿಸುವ ಸ೦ದರ್ಭದಲ್ಲಿ ಪರಿಗಣಿಸಬೇಕು ಎಂದು ಅಧಿಸೂಚನೆ ಯಲ್ಲಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಂಸ್ಥೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದ್ದು, ಕೆಲವೊಂದು ಷರತ್ತುಗಳೊಂದಿಗೆ ಸೌಲಭ್ಯ ಒದಗಿಸಲು ಆದೇಶಿಸಲಾಗಿದೆ. ಶಕ್ತಿ ಸ್ಮಾರ್ಟ್‌ಕಾರ್ಡ್‌ ಬಸ್‌ ಪಾಸ್‌ ಮಾದರಿಯಂತೆ ಇರಲಿವೆ.

ರಾಜ್ಯದ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ), ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ (ಬೆ೦.ಮ.ಸಾ.ಸ೦ಸ್ಥೆ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ (ವಾ.ಕ.ರ.ಸಾ.ಸ೦ಸ್ಥೆ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ) ಸಾರಿಗೆಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ 'ಶಕ್ತಿ ಸ್ಮಾರ್ಟ್‌ಕಾರ್ಡ್‌' ಕಡ್ಡಾಯ!

ನಗರ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಅಧಿಸೂಚನೆ ತಿಳಿಸಿದೆ.

ಉಚಿತ ಪ್ರಯಾಣಕ್ಕೆ ಮಿತಿ ಇದೆಯಾ?
ಕಾಂಗ್ರೆಸ್‌ ಸರ್ಕಾರ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯಾವುದೇ ನಿಗದಿತ ಕಿಲೋಮೀಟರ್ ಮಿತಿ ಹೊಂದಿಲ್ಲ. ಮಹಿಳೆಯರು ರಾಜ್ಯದಲ್ಲಿ ಎಲ್ಲಿಂದ ಎಲ್ಲಿಗಾದರೂ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ.

ಗೃಹಲಕ್ಷ್ಮೀ ಗ್ಯಾರಂಟಿ : ಗೃಹಲಕ್ಷ್ಮೀ ಯೋಜನೆಯು ಪ್ರಯೋಜನ ಪ್ರತಿ ಮನೆಯ ಯಜಮಾನಿಗೆ ಲಭ್ಯವಾಗಲಿದೆ. ಈ ಯೋಜನೆಯಲ್ಲಿ ಮನೆ ಯಜಮಾನಿಯ ಖಾತೆಗೆ ನೇರವಾಗಿ 2000 ರೂ. ಜಮೆ ಮಾಡಲಾಗುತ್ತದೆ. ಇನ್ನು ಈ ಯೋಜನೆಗೆ ಯಾವುದೇ ಷರತ್ತುಗಳಿಲ್ಲ ಅನ್ನೊದನ್ನ ಸರ್ಕಾರ ಹೇಳಿದೆ. ಆದರೆ ಇದಕ್ಕಾಗಿ ಹೊಸ ಸಾಫ್ಟ್‌ವೇರ್‌ ಅಭಿವೃದ್ದಿ ಪಡಿಸಬೇಕಿರುವುದರಿಂದ ಜೂನ್‌ 15 ರಿಂದ ಅರ್ಜಿ ಕರೆಯುವುದಾಗಿ ಸರ್ಕಾರ ತಿಳಿಸಿದೆ. ಎಪಿಎಲ್‌ (APL) ಮತ್ತು ಬಿಪಿಎಲ್‌ (BPL) ಎಂಬ ಯಾವುದೇ ಬೇದ ಭಾವವಿಲ್ಲದೇ ಎಲ್ಲರಿಗೂ ಪ್ರಯೋಜನ ಸಿಗಲಿದೆ.

ಗೃಹಲಕ್ಷ್ಮೀ ಯೋಜನೆಗೆ ಈ ಕೆಳಗಿನ ದಾಖಲೆಗಳು ಅಗತ್ಯ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಮನೆ ಯಜಮಾನಿ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ಅಲ್ಲದೆ ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್‌ ಲಿಂಕ್‌ ಮಾಡಿರುವುದು ಕೂಡ ಕಡ್ಡಾಯ ಎಂದು ಸರ್ಕಾರ ಹೇಳಿದೆ. ಆದರಿಂದ ಗೃಹಲಕ್ಷ್ಮೀ ಯೋಜನೆಗೆ ಅಕೌಂಟ್​ ನಂಬರ್, ಆಧಾರ್​ ನಂಬರ್​, ಕಡ್ಡಾಯವಾಗಿದೆ. ಇನ್ನು ಈ ಯೋಜನೆಯ ಅರ್ಜಿಯನ್ನು ಜೂನ್‌ 15 ರಿಂದ ಪ್ರಾರಂಭಿಸಿ ಜುಲೈ 15 ರ ತನಕ ತೆಗೆದುಕೊಳ್ಳಲಾಗುವುದು ಎಂದು ಹೇಳಲಾಗಿದೆ.

Best Mobiles in India

English summary
Shakti Smart Card for women to free travel in ksrtc bus mandatory. how to apply and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+