ಈ ಅಗ್ಗದ ಸ್ಟೈಲಿಶ್ ಸ್ಮಾರ್ಟ್‌ಫೋನ್ ಡಿಸ್ಕೌಂಟ್ ಬೆಲೆ ತಿಳಿದ್ರೆ, ವಾವ್ ಅಂತೀರಾ!
ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ಲಾಟ್‌ಫಾರ್ಮ್ ಮೊಬೈಲ್‌ಗಳಿಗೆ ವಿಶೇಷ ರಿಯಾಯಿತಿ ನೀಡುತ್ತಾ ಸಾಗಿದೆ. ಅವುಗಳಲ್ಲಿ ಕೆಲವು ಅಗ್ಗದ ಫೋನ್‌ಗಳು ಸಹ ಬಲು ಆಕರ್ಷಕ ಡಿಸ್ಕೌಂಟ್ ಪಡೆದಿರುತ್ತವೆ. ಸದ್ಯ ಐಟೆಲ್ ಮೊಬೈಲ್ ಸಂಸ್ಥೆಯ ಐಟೆಲ್ A70 ಸ್ಮಾರ್ಟ್‌ಫೋನ್ ಭರ್ಜರಿ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರನ್ನು ಸೆಳೆದಿದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ನಲ್ಲಿ ಐಟೆಲ್ A70 ಸ್ಮಾರ್ಟ್‌ಫೋನ್ ಶೇ. 32% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 4GB RAM + 128GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 6,799ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ರಿಯಾಯಿತಿ ಸಹ ಪಡೆದುಕೊಳ್ಳಬಹುದಾಗಿದೆ.

ಈ ಎಂಟ್ರಿ ಲೆವೆಲ್ ಫೋನ್ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಹಾಗೆಯೇ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಪಡೆದಿದೆ. ಇನ್ನು ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ಐಟೆಲ್ A70 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ಐಟೆಲ್ A70 - ಫೀಚರ್ಸ್
ಐಟೆಲ್ A70 ಮೊಬೈಲ್ 6.6 ಇಂಚಿನ HD+ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ವರೆಗಿನ ರಿಫ್ರೆಶ್ ರೇಟ್ ಸಪೋರ್ಟ್ ಇದ್ದು, 500 ನಿಟ್ಸ್‌ನ ಬ್ರೈಟ್‌ನೆಸ್ ಲೆವೆಲ್ ಅನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಆಪಲ್‌ನ ಡೈನಾಮಿಕ್ ಐಲ್ಯಾಂಡ್‌ನಂತೆಯೇ ಡೈನಾಮಿಕ್ ಬಾರ್ ಫೀಚರ್ಸ್ ಲಭ್ಯ.
ಐಟೆಲ್ A70 ಫೋನ್ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದು ಆಂಡ್ರಾಯ್ಡ್ 13 ಗೋ ಆವೃತ್ತಿ ಆಧಾರಿತ ಐಟೆಲ್ ಓಎಸ್ 13 ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರಲ್ಲಿ RAM ಅನ್ನು ವಾಸ್ತವಿಕವಾಗಿ ಹೆಚ್ಚುವರಿ 8GB ಯಿಂದ 12GB ವರೆಗೆ ವಿಸ್ತರಿಸಬಹುದಾಗಿದೆ. ಇದರೊಂದಿಗೆ ಮೆಮೊರಿ ಕಾರ್ಡ್ ಮೂಲಕ 2TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದೆ.
ಐಟೆಲ್ A70 ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಅಲ್ಲದೇ ಇದರ ಸೆಕೆಂಡರಿ ಕ್ಯಾಮೆರಾವು ಬೇಸಿಕ AI-ಬೆಂಬಲಿತ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಐಟೆಲ್ A70 ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಪಡೆದುಕೊಂಡಿದ್ದು, 10W ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಇದು 4G, Wi-Fi 802.11, ಬ್ಲೂಟೂತ್ 5.0, GPS/GLONASS, ಮತ್ತು USB ಟೈಪ್-C ಹಾಗೂ ಹೆಡ್‌ಫೋನ್ ಜ್ಯಾಕ್ ಕನೆಕ್ಷನ್ ಪಡೆದುಕೊಂಡಿದೆ. ಇದರೊಂದಿಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಸೌಲಭ್ಯ ಸಹ ಲಭ್ಯ.
ಐಟೆಲ್ A70 ಫೋನ್ ಅನ್ನು ಭಾರತದಲ್ಲಿ ಬೇಸ್ ಮಾಡೆಲ್ 4GB + 64GB ಆಯ್ಕೆ, 4GB + 128GB ಸ್ಟೋರೇಜ್ ಆಯ್ಕೆ ಹಾಗೂ 4GB + 256GB ವೇರಿಯಂಟ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದು. ಇನ್ನು ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ದೊರೆಯುತ್ತದೆ. ಅಮೆಜಾನ್ ತಾಣದಲ್ಲಿ ಖರೀದಿಸಬಹುದು.


Click it and Unblock the Notifications








