ಒಪ್ಪೋ K12x 5G ಮೊಬೈಲ್ ಬೆಲೆಯಲ್ಲಿ ಜಬರ್ದಸ್ತ್ ಇಳಿಕೆ; ಈ ಚಾನ್ಸ್ ಕಳ್ಕೋಬೇಡಿ!
ಎಂಟ್ರಿ ಲೆವೆಲ್ ವಿಭಾಗದಲ್ಲಿ ಗುರುತಿಸಿಕೊಂಡಿರುವ ಒಪ್ಪೋ ಸಂಸ್ಥೆಯ ಇತ್ತೀಚಿನ ಒಪ್ಪೋ K12x 5G (OPPO K12x 5G) ಸ್ಮಾರ್ಟ್‌ಫೋನ್ ಕೆಲವು ಆಕರ್ಷಕ ಫೀಚರ್ಸ್‌ಗಳ ಮೂಲಕ ಸಹ ಸದ್ದು ಮಾಡಿದೆ. ಇದೀಗ ಈ ಮೊಬೈಲ್ ದೈತ್ಯ ಇ ಕಾಮರ್ಸ್ ಫ್ಲಿಪ್‌ಕಾರ್ಟ್ ತಾಣದಲ್ಲಿ ಸಖತ್ ಬೆಲೆ ಇಳಿಕೆ ಪಡೆದಿದ್ದು, ಈ ಮೂಲಕ ಮತ್ತೆ ಮೊಬೈಲ್ ಪ್ರಿಯರನ್ನು ತನ್ನತ್ತ ಸೆಳೆದಿದೆ.
ಹೌದು, ಜನಪ್ರಿಯ ಫ್ಲಿಪ್‌ಕಾರ್ಟ್ ( Flipkart ) ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಒಪ್ಪೋ K12x 5G ( OPPO K12x 5G ) ಫೋನ್ ಶೇ. 23% ರಷ್ಟು ನೇರ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 6 GB RAM + 128 GB ವೇರಿಯಂಟ್ 12,999ರೂ. ಗಳ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇದರ ಜೊತೆಗೆ ಎಕ್ಸ್‌ಚೇಂಜ್ ರಿಯಾಯಿತಿ ಸಹ ಪಡೆದುಕೊಂಡರೆ, ಇನ್ನಷ್ಟು ಕಡಿಮೆ ದರದಲ್ಲಿ ಫೋನ್ ಖರೀದಿಸಲು ಅವಕಾಶ ಇದೆ.

ಅಂದಹಾಗೆ ಗ್ರಾಹಕರು ಒಪ್ಪೋ K12x 5G ಫೋನ್ ಅನ್ನು 8GB RAM + 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿಯೂ ಖರೀದಿಸಬಹುದು. ಇನ್ನು ಈ ಮೊಬೈಲ್ 5,100 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದೆ. ಹಾಗೆಯೇ ಇದರ ಮೊದಲ ಕ್ಯಾಮೆರಾವು 32 ಮೆಗಾಪಿಕ್ಸಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ಒಪ್ಪೋ K12x 5G ಫೋನಿನ ಇತರೆ ಫೀಚರ್ಸ್ ಯಾವುವು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಒಪ್ಪೋ K12x 5G ಫೀಚರ್ಸ್ ಮಾಹಿತಿ
ಒಪ್ಪೋ K12x 5G ಸ್ಮಾರ್ಟ್‌ಫೋನ್ 6.67 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಫೋನ್ ಡಿಸ್‌ಪ್ಲೇ 1,612 x 720 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಪಡೆದಿದೆ. 120 Hz ರಿಫ್ರೆಶ್ ರೇಟ್ ಹಾಗೂ 1000 nits ಬ್ರೈಟ್ನೆಸ್ ಆಯ್ಕೆಯೊಂದಿಗೆ, ಪಾಂಡಾ ಗ್ಲಾಸ್ 3 ರಕ್ಷಣೆ ಸಹ ಪಡೆದುಕೊಂಡಿದೆ.
ಒಪ್ಪೋ K12x 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 5G ಚಿಪ್‌ಸೆಟ್ ಪ್ರೊಸೆಸರ್ ಮೂಲಕ ಕೆಲಸ ನಿರ್ವಹಿಸಲಿದ್ದು, ಆಂಡ್ರಾಯ್ಡ್ 14 ಓಎಸ್ ಅನ್ನು ಸಪೋರ್ಟ್ ಸಹ ಪಡೆದಿದೆ. ಇದರ ಜೊತೆಗೆ ಇದು 6 + 128GB ಮತ್ತು 8 + 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಒಳಗೊಂಡಿದೆ.
ಒಪ್ಪೋ K12x 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದೆ. ಇದರ ಮೊದಲ ಕ್ಯಾಮೆರಾವು 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದ್ದು, ಹಾಗೆಯೇ ದ್ವಿತೀಯ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸೆಟ್‌ಅಪ್ ಅನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಹಾಗೂ ವಿಡಿಯೋ ಕರೆಗಾಗಿ ಈ ಫೋನ್ 8 ಮೆಗಾ ಪಿಕ್ಸೆಲ್ ಕ್ಯಾಮೆರಾ ಒದಗಿಸಲಾಗಿದೆ.
ಒಪ್ಪೋ K12x 5G ಸ್ಮಾರ್ಟ್‌ಫೋನ್ 5,100 mAh ಬ್ಯಾಟರಿ ಬ್ಯಾಕ್‌ಅಪ್ ಬೆಂಬಲದ ಜೊತೆಗೆ 45W SuperVOOC ಚಾರ್ಜಿಂಗ್ ಸಪೋರ್ಟ್ ಕೂಡಾ ಹೊಂದಿದೆ. ಅಲ್ಲದೇ ಇದು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈ ಫೈ, ಜಿಪಿಎಸ್, ಬ್ಲೂಟೂತ್ 5.0 ಮತ್ತು ಯುಎಸ್‌ಬಿ ಟೈಪ್ - ಸಿ ಆಯ್ಕೆಗಳನ್ನು ಪಡೆದಿದೆ. ಇನ್ನು ಈ ಮೊಬೈಲ್ ಬ್ರೀಜ್ ಬ್ಲೂ, ಪಿಂಕ್ ಮತ್ತು ಮೀಡ್‌ನೈಟ್ ವೈಲೆಟ್ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








