Home
ಸುದ್ದಿಜಾಲ

smartphone: 108 MP ಗೂ ಹೆಚ್ಚಿನ ಸಾಮರ್ಥ್ಯದ ಕ್ಯಾಮೆರಾ ಫೋನ್‌ಗಳಿವು! 15,000ರೂ. ಒಳಗೆ ಲಭ್ಯ!

ಸ್ಮಾರ್ಟ್‌ಫೋನ್‌ಗಳು (Smartphone) ವಿವಿಧ ರೀತಿಯಲ್ಲಿ ಮಾರುಕಟ್ಟೆಯಲ್ಲಿ ಲಭ್ಯ ಇವೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕ್ಯಾಮೆರಾ ಪ್ರಿಯರ ಸಂಖ್ಯೆ ಹೆಚ್ಚುತ್ತಿದ್ದು, ಹೆಚ್ಚಿನ ಮೆಗಾಪಿಕ್ಸೆಲ್‌ ಇರುವ ಸ್ಮಾರ್ಟ್‌ಫೋನ್‌ಗಳನ್ನು ಜನರು ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಇದರೊಂದಿಗೆ ಸ್ಮಾರ್ಟ್‌ಫೋನ್‌ ತಯಾರಿಕಾ ಕಂಪೆನಿಗಳು ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನೂ ಸಹ ಅನಾವರಣ ಮಾಡಿಕೊಂಡು ಬರುತ್ತಿವೆ.

ಹೌದು, ಭಾರತದಲ್ಲಿ ಸ್ಮಾರ್ಟ್‌ಫೋನ್‌ ಖರೀದಿ ಮಾಡುವ ಅದೆಷ್ಟೋ ಜನರು ಉತ್ತಮ ಕ್ಯಾಮೆರಾ ಫೀಚರ್ಸ್‌ ಇರುವ ಫೋನ್‌ಗಳ ಕಡೆ ಹೆಚ್ಚಾಗಿ ಕಣ್ಣಾಯಿಸುತ್ತಾರೆ. ಈ ನಡುವೆ ನೀವೇನಾದರೂ ಕ್ಯಾಮೆರಾ ಸ್ಮಾರ್ಟ್‌ಫೋನ್‌ (Camera smartphone) ಪ್ರಿಯರಾಗಿದ್ದರೆ ಅದರಲ್ಲೂ 15,000ರೂ.ಗಳ ಒಳಗೆ ಖರೀದಿ ಮಾಡಲು ಮುಂದಾಗಿದ್ರೆ ಇಲ್ಲಿವೆ ನೋಡಿ ಅತ್ಯುತ್ತಮವಾದ ಸ್ಮಾರ್ಟ್‌ಫೋನ್‌ಗಳು. ಅದೂ ಸಹ 108 MP ಗೂ ಅಧಿಕ ಕ್ಯಾಮೆರಾ ಸೌಲಭ್ಯ ಹೊಂದಿರುವ ಫೋನ್‌ಗಳು.

108 MP ಗೂ ಹೆಚ್ಚಿನ ಸಾಮರ್ಥ್ಯದ ಕ್ಯಾಮೆರಾ ಫೋನ್‌ಗಳಿವು! 15,000ರೂ. ಒಳಗೆ ಲಭ್ಯ!

ರಿಯಲ್‌ಮಿ C53: ಈ ಸ್ಮಾರ್ಟ್‌ಫೋನ್ (Realme C53) ಅನ್ನು ನೀವು 9,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಈ ಫೋನ್‌ 6.74 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹಾಗೂ 90 Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಇನ್ನು 4 GB RAM, 128 GB ಇಂಟರ್‌ ಸ್ಟೋರೇಜ್‌ ಆಯ್ಕೆಯೊಂದಿಗೆ ಟೈಗರ್ T612 ಆಕ್ಟಾ ಕೋರ್ ಪ್ರೊಸೆಸರ್ ಬಲ ಪಡೆದಿದ್ದು, 108 MP + 2 MP ಡ್ಯುಯಲ್ ರಿಯರ್ ಕ್ಯಾಮೆರಾ ಹಾಗೂ 8 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ಇನ್ಫಿನಿಕ್ಸ್ ನೋಟ್ 30 5G: ಈ ಸ್ಮಾರ್ಟ್‌ಫೋನ್ (Infinix Note 30 5G) ನಿಮಗೆ 14,699ರೂ.ಗಳ ಬೆಲೆಯಲ್ಲಿ ಸಿಗಲಿದೆ. ಇದು 8GB RAM + 256GB ಸ್ಟೋರೇಜ್‌ನ ಆಯ್ಕೆ ಹೊಂದಿದ್ದು, ಇದರೊಂದಿಗೆ 6.78 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಅಲ್ಲದೆ 1080 x 2460  ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹಾಗೂ 120 Hz ರಿಫ್ರೆಶ್‌ ರೇಟ್‌ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಡೈಮೆನ್ಸಿಟಿ 6080, ಆಕ್ಟಾ ಕೋರ್ ಪ್ರೊಸೆಸರ್‌ ಬಲ, 108 MP ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ರಿಯರ್ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಇದೆ.

108 MP ಗೂ ಹೆಚ್ಚಿನ ಸಾಮರ್ಥ್ಯದ ಕ್ಯಾಮೆರಾ ಫೋನ್‌ಗಳಿವು! 15,000ರೂ. ಒಳಗೆ ಲಭ್ಯ!

ಮೊಟೊರೊಲಾ ಮೊಟೊ G60: ಈ ಸ್ಮಾರ್ಟ್‌ಫೋನ್‌ (Motorola Moto G60) ಅನ್ನು ನೀವು ಆನ್‌ಲೈನ್‌ ಮೂಲಕ 14,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದು 6.78 ಇಂಚಿನ ಡಿಸ್‌ಪ್ಲೇ ಪಡೆದುಕೊಂಡಿದ್ದು, 1080 x 2460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದ್ದು, 120 Hz ರಿಫ್ರೆಶ್‌ ರೇಟ್‌ ಆಯ್ಕೆ ಪಡೆದುಕೊಂಡಿದೆ. ಇದರೊಂದಿಗೆ ಸ್ನಾಪ್‌ಡ್ರಾಗನ್ 732G ಪ್ರೊಸೆಸರ್‌ ಬಲ ಪಡೆದುಕೊಂಡಿದ್ದು, 6 GB RAM ಹಾಗೂ 128 GB ಇಂಟರ್ ಸ್ಟೋರೇಜ್‌ ಹೊಂದಿದೆ. ಉಳಿದಂತೆ ಈ ಫೋನ್‌ 108 MP + 8 MP + 2 MP ಟ್ರಿಪಲ್ ರಿಯರ್ ಕ್ಯಾಮೆರಾ ಹಾಗೂ 32 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.

ಶಿಯೋಮಿ ರೆಡ್ಮಿ ನೋಟ್‌ 11S: ಈ ಫೋನ್ (Xiaomi Redmi Note 11S) ಅನ್ನು 12,399ರೂ.ಗಳಿಗೆ ಖರೀದಿ ಮಾಡಬಹುದಾಗಿದ್ದು, ಇದು 6.43 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದೆ. ಈ ಡಿಸ್‌ಪ್ಲೇ 1080 x 2400 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದ್ದು, 90 Hz ರಿಫ್ರೆಶ್‌ ರೇಟ್‌ ಮೂಲಕ ಉತ್ತಮ ಅನುಭವ ನೀಡಲಿದೆ. ಇದರೊಂದಿಗೆ ಹಿಲಿಯೊ G96 ಪ್ರೊಸೆಸರ್ ಬಲ ಪಡೆದುಕೊಂಡಿದ್ದು, 6 GB RAM ಹಾಗೂ 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದಿದೆ. ಪ್ರಮುಖವಾಗಿ ಈ ಫೋನ್ 108 MP ಮುಖ್ಯ ಕ್ಯಾಮೆರಾದೊಂದಿಗೆ ಕ್ವಾಡ್ ರಿಯರ್ ಕ್ಯಾಮೆರಾ ಹಾಗೂ 16 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ.

108 MP ಗೂ ಹೆಚ್ಚಿನ ಸಾಮರ್ಥ್ಯದ ಕ್ಯಾಮೆರಾ ಫೋನ್‌ಗಳಿವು! 15,000ರೂ. ಒಳಗೆ ಲಭ್ಯ!

ಪೊಕೊ M6 ಪ್ರೊ: ಈ ಸ್ಮಾರ್ಟ್‌ ಫೋನ್‌ (Poco M6 Pro) ಅನ್ನು ನೀವು 12,990ರೂ.ಗಳಿಗೆ ಖರೀದಿ ಮಾಡಬಹುದಾಗಿದೆ. ಇದು 6.73 ಇಂಚಿನ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, ಇದು 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಹಾಗೂ 120 Hz ರಿಫ್ರೆಶ್ ರೇಟ್‌ ಸೌಲಭ್ಯ ಪಡೆದಿದೆ. ಇದರೊಂದಿಗೆ ಹಿಲಿಯೊ G99 ಪ್ರೊಸೆಸರ್‌ ಬಲ ಪಡೆದುಕೊಂಡಿದ್ದು, 8 GB RAM ಹಾಗೂ 128 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದಿದೆ. ಉಳಿದಂತೆ ಈ ಫೋನ್ 108 MP + 13 MP + 2 MP ಟ್ರಿಪಲ್ ರಿಯರ್ ಕ್ಯಾಮೆರಾ ಹಾಗೂ 32 MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ. ಈ ಫೋನ್‌ ಕೆಲವೇ ದಿನಗಳಲ್ಲಿ ಲಾಂಚ್‌ ಆಗಲಿದೆ.

Best Mobiles in India

English summary
If you are a camera smartphone lover, especially if you are planning to buy under Rs 15,000 then here are the best smartphones. That too with over 108 MP camera facility.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+