ಹೊಸ ಮೊಬೈಲ್ ಖರೀದಿಸಬೇಕೆ? ಇಲ್ಲಿವೆ 25,000ರೂ ಒಳಗಿನ ಟಾಪ್ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಕಂಪೆನಿಗಳಿಗೆ ಭಾರತ ಅತಿದೊಡ್ಡ ಮಾರುಕಟ್ಟೆಯಾಗಿದೆ. ಇದೇ ಕಾರಣಕ್ಕೆ ಹಲವು ಜನಪ್ರಿಯ ಬ್ರ್ಯಾಂಡ್‌ಗಳು ಭಾರತದಲ್ಲಿ ವಿವಿಧ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಇದರಲ್ಲಿ ಹೈ ಎಂಡ್ ಪ್ರೈಸ್‌ಟ್ಯಾಗ್ ಸ್ಮಾರ್ಟ್‌ಫೋನ್‌ಗಳು ಮಾತ್ರವಲ್ಲ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್ ಹಾಗೂ ಬಜೆಟ್ ಪ್ರೈಸ್‌ಟ್ಯಾಗ್ ಫೋನ್‌ಗಳು ಕೂಡ ಸೇರಿವೆ.
ಭಾರತದಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳೊಂದಿಗೆ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್ ಒಳಗೊಂಡ ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಅದರಲ್ಲೂ 25,000ರೂ ಒಳಗಿನ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ಇದೇ ಕಾರಣಕ್ಕೆ ಹೆಚ್ಚಿನ ಬ್ರ್ಯಾಂಡ್‌ಗಳು 25,000ರೂ ಒಳಗಿನ ಸ್ಮಾರ್ಟ್‌ಫೋನ್‌ಗಳನ್ನು ಹೆಚ್ಚು ಹೆಚ್ಚು ಬಿಡುಗಡೆ ಮಾಡುತ್ತಿವೆ. ಸದ್ಯ ಡಿಸೆಂಬರ್ ತಿಂಗಳಿನಲ್ಲಿ 25,000ರೂ ಒಳಗಿನ ಫೋನ್ ಖರೀದಿಸಲು ಬಯಸಿದರೆ ಅತ್ಯುತ್ತಮ ಆಯ್ಕೆಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z7 ಪ್ರೊ 5G
ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಕೂಡ 25,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7200 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಕ್ಯಾಮೆರಾ ಐಕ್ಯೂ Z7 ಪ್ರೊ 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಜೊತೆಗೆ ಸ್ಮಾರ್ಟ್‌ಫೋನ್ 4,600mAh ಸಾಮರ್ಥ್ಯವನ್ನು ಹೊಂದಿದೆ. ಇದು 66W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಒನ್‌ಪ್ಲಸ್ ನಾರ್ಡ್ CE 3 5G
ಒನ್‌ಪ್ಲಸ್ ನಾರ್ಡ್ CE 3 5G ಸ್ಮಾರ್ಟ್‌ಫೋನ್‌ನ ಬೇಸ್ ಮಾಡೆಲ್ ಇದೀಗ 24,999ರೂ. ಬೆಲೆಯಲ್ಲಿ ಸೇಲ್ ಆಗುತ್ತಿದೆ. ಈ ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇಯನ್ನು ಹೊಂದಿದ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 782G SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಪಡೆದಿದೆ. ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಈ ಫೋನ್ ನೈಟ್‌ಸ್ಕೇಪ್ ಅಲ್ಟ್ರಾ, ನೈಟ್ ಪೋರ್ಟ್ರೇಟ್, ಒಐಎಸ್ ನಂತಹ ಕೆಲವು ವೈಶಿಷ್ಟ್ಯಗಳನ್ನು ಪಡೆದಿದೆ.

ಮೊಟೊರೊಲಾ ಎಡ್ಜ್ 40 ನಿಯೋ 5G
ಮೊಟೊರೊಲಾ ಎಡ್ಜ್ 40 ನಿಯೋ 5G ಫೋನ್ ಸದ್ಯ ಮಾರುಕಟ್ಟೆಯಲ್ಲಿ 25,000ರೂ ಒಳಗಿನ ಬೆಲೆಯಲ್ಲಿ ದೊರೆಯುತ್ತಿದೆ. ಈ ಸ್ಮಾರ್ಟ್‌ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಪೋಲೆಡ್ ಡಿಸ್‌ಪ್ಲೇ ಪಡೆದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7030 SoC ಪ್ರೊಸೆಸರ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲ ದೊಂದಿಗೆ ಕೆಲಸ ನಿರ್ವಹಿಸಲಿದೆ. ಇನ್ನು ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಆಗಿದೆ. ಇನ್ನು ಸೆಕೆಂಡರಿ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M34 5G ಸ್ಮಾರ್ಟ್‌ಫೋನ್ ಸಹ ಮಿಡ್‌ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಸಿಗಲಿದೆ. ಈ ಸ್ಮಾರ್ಟ್‌ಫೋನ್ 6.5 ಇಂಚಿನ ಹೆಚ್‌ಡಿ ಪ್ಲಸ್ ಅಮೊಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ Exynos 1280 SoC ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಹೊಂದಿದೆ. ಇನ್ನು ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ಜೊತೆಗೆ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಇದಕ್ಕೆ ಬೆಂಬಲವಾಗಿ 25W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆ ಸಹ ಒಳಗೊಂಡಿದೆ.


Click it and Unblock the Notifications








