Home
ಸುದ್ದಿಜಾಲ

ಅತ್ಯಧಿಕ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ಗಳು 10,000ರೂ.ಗಳಲ್ಲಿ ಲಭ್ಯ: ವಿವರ ಇಲ್ಲಿದೆ!

ಸ್ಮಾರ್ಟ್‌ಫೋನ್‌ಗಳು ವಿವಿಧ ರೀತಿಯಲ್ಲಿ ಬಳಕೆದಾರರಿಗೆ ಲಭ್ಯ ಆಗುತ್ತಿದ್ದು, ಈ ನಡುವೆ ಬಳಕೆದಾರರು ಸಹ ಫೋನ್‌ಗಳ ಕ್ಯಾಮೆರಾ, ಬ್ಯಾಟರಿ ಹಾಗೂ ಇನ್ನಿತರೆ ಫೀಚರ್ಸ್‌ಗಳ ಕಡೆ ಹೆಚ್ಚು ಕಣ್ಣಾಯಿಸುತ್ತಾರೆ. ಅದರಲ್ಲೂ ಇತ್ತೀಚೆಗೆ ಹೆಚ್ಚಿನ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ಗಳು ಹೆಚ್ಚು ಸೇಲ್‌ ಆಗುತ್ತಿದೆ. ಈ ನಡುವೆ ನೀವು ಕೇವಲ 10,000ರೂ. ಒಳಗೆ ಹೆಚ್ಚಿನ ಸ್ಟೋರೇಜ್‌ ಇರುವ ಸ್ಮಾರ್ಟ್‌ಫೋನ್‌ ಅನ್ನು ಖರೀದಿ ಮಾಡಬಹುದು.

ಹೌದು, ಸ್ಮಾರ್ಟ್‌ಫೋನ್‌ಗಳ ಬೆಲೆ ಪ್ರಮುಖವಾಗಿ ಅದರ ಸ್ಟೋರೇಜ್‌ ವೇರಿಯಂಟ್‌ ಮೇಲೆ ನಿಗದಿ ಆಗುತ್ತದೆ. ಅದರಲ್ಲೂ10,000ರೂ. ಒಳಗೆ ಸ್ಮಾರ್ಟ್‌ಫೋನ್‌ ಖರೀದಿ ಮಾಡಲು ಬಯಸಿದರೆ ನಿಮಗೆ 4GB RAM ಹಾಗೂ 64 GB ಸ್ಟೋರೇಜ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗುತ್ತದೆ. ಆದರೆ, ನಾವಿಂದು ಇದೇ ಬೆಲೆಯಲ್ಲಿ 128GB ಸ್ಟೋರೇಜ್‌ ಸಾಮರ್ಥ್ಯ ಇರುವ ಸ್ಮಾರ್ಟ್‌ಫೋನ್‌ಗಳ ವಿವರವನ್ನು ತಿಳಿಸಿದ್ದೇವೆ ಓದಿರಿ.

 ಅತ್ಯಧಿಕ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ಗಳು 10,000ರೂ.ಗಳಲ್ಲಿ ಲಭ್ಯ ...

ಇನ್ಫಿನಿಕ್ಸ್ ಹಾಟ್‌30i : ಈ ಸ್ಮಾರ್ಟ್‌ಫೋನ್ 6.6 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಪಡೆದಿದೆ. ಹಾಗೆಯೇ ಮೀಡಿಯಾ ಟೆಕ್ ಹಿಲಿಯೊ G37 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 8GB RAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ 50MP ಪ್ರಾಥಮಿಕ ಕ್ಯಾಮೆರಾ ಹಾಗೂ 5MP ಸೆಲ್ಫಿ ಕ್ಯಾಮೆರಾ ಸೆನ್ಸರ್‌ ಹೊಂದಿದೆ. ಇದರೊಂದಿಗೆ 5000 mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್ ಪ್ಯಾಕ್‌ ಆಗಿದೆ.

ಪೊಕೊ C55: ಪೊಕೊ ಫೋನ್‌ಗಳು ಇತ್ತೀಚೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ನಿರ್ಮಾಣ ಮಾಡಿವೆ. ಅದರಂತೆ ಈ ಫೋನ್ 6.71 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದರೊಂದಿಗೆ 6GBRAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಗಮನಿಸಬಹುದು. ಹಾಗೆಯೇ 50MP+2MP ಡ್ಯುಯಲ್ ರಿಯರ್‌ ಕ್ಯಾಮೆರಾ ಹಾಗೂ 5MP ಸೆಲ್ಫಿ ಕ್ಯಾಮೆರಾದ ಆಯ್ಕೆ ಹೊಂದಿದೆ. ಇನ್ನುಳಿದಂತೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಮೊಟೊ G13: ಈ ಫೋನ್‌ 6.5 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 90Hz ರಿಫ್ರೆಶ್ ರೇಟ್‌ ಪಡೆದಿದೆ. ಜೊತೆಗೆ ಮೀಡಿಯಾ ಟೆಕ್ ಹಿಲಿಯೊ G85 ಪ್ರೊಸೆಸರ್‌ ಬಲ ಹೊಂದಿದ್ದು, 4GBRAM ಹಾಗೂ 128GB ಇಂಟರ್‌ ಸ್ಟೋರೇಜ್‌ನಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 50MP+2MP+2MP ಟ್ರಿಪಲ್ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, 8MP ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ.

 ಅತ್ಯಧಿಕ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ಗಳು 10,000ರೂ.ಗಳಲ್ಲಿ ಲಭ್ಯ ...

ಟೆಕ್ನೋ ಸ್ಪಾರ್ಕ್ 9: ಈ ಫೋನ್‌ 6.6 ಇಂಚಿನ IPS LCD ಡಿಸ್‌ಪ್ಲೇ ಹೊಂದಿದ್ದು, 90 Hz ರಿಫ್ರೆಶ್ ರೇಟ್‌ ಪಡೆದುಕೊಂಡಿದೆ. ಜೊತೆಗೆ ಮೀಡಿಯಾ ಟೆಕ್ ಹಿಲಿಯೊ G37 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 6GBRAM ಹಾಗೂ 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ 13MP ಪ್ರಾಥಮಿಕ ಕ್ಯಾಮೆರಾ ಹಾಗೂ 8MP ಸೆಲ್ಫಿ ಕ್ಯಾಮೆರಾ ಆಯ್ಕೆ ಹೊಂದಿದೆ. ಈ ಫೋನ್ ಸಹ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್‌ ಆಗಿದೆ.

 ಅತ್ಯಧಿಕ ಸ್ಟೋರೇಜ್‌ ಸಾಮರ್ಥ್ಯದ ಫೋನ್‌ಗಳು 10,000ರೂ.ಗಳಲ್ಲಿ ಲಭ್ಯ ...

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M04: ಈ ಫೋನ್ 6.5 ಇಂಚಿನ PLS LCD ಡಿಸ್‌ಪ್ಲೇ ಹೊಂದಿದ್ದು, ಮೀಡಿಯಾ ಟೆಕ್ ಹಿಲಿಯೊ P35 ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಹಾಗೆಯೇ 4GBRAM ಹಾಗೂ 128GB ಇಂಟರ್‌ ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದ್ದು, 13MP+2 MP ಡ್ಯುಯಲ್ ರಿಯರ್‌ ಕ್ಯಾಮೆರಾ ಹಾಗೂ 5MP ಸೆಲ್ಫಿ ಕ್ಯಾಮೆರಾದ ಆಯ್ಕೆ ಹೊಂದಿದೆ. ಇದರೊಂದಿಗೆ 5000mAh ಸಾಮರ್ಥ್ಯದ ಬ್ಯಾಟರಿಯಿಂದ ಈ ಫೋನ್‌ ಹೆಚ್ಚಿನ ಬ್ಯಾಟರಿ ಬ್ಯಾಕಪ್‌ ನೀಡಲಿದೆ.

Best Mobiles in India

English summary
The price of smartphones is mainly determined by its storage variant. but These smartphones available under Rs 10000 with 128GB storage capacity.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+