ಮಾರುಕಟ್ಟೆಯಲ್ಲಿ 15,000 ಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ವಲಯದಲ್ಲಿ ಸಾಕಷ್ಟು ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈಗಾಗಲೇ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಬಳಕೆದಾರರ ಕೈಗಳಲ್ಲಿ ರಿಂಗಣಿಸುತ್ತಿವೆ. ಹಲವು ಕಂಪೆನಿಗಳು ತಮ್ಮ ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಂದ ಮಾರುಕಟ್ಟೆಯಲ್ಲಿ ಗುರುತಿಸಿಕೊಂಡಿವೆ. ಸದ್ಯ ಲಭ್ಯವಿರುವ ಉತ್ತಮ ಸ್ಮಾರ್ಟ್‌ಫೋನ್‌ಗಳು ಯಾವು, ಯಾವ ಸ್ಮಾರ್ಟ್‌ಫೋನ್‌ಗಳನ್ನ ಆಯ್ಕೆ ಮಾಡಿಕೊಂಡರೆ ಉತ್ತಮ ಅನ್ನುವ ಗೊಂದಲ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಇದ್ದೆ ಇರುತ್ತದೆ. ಸದ್ಯ ನಾವು ಈ ಲೇಖನದಲ್ಲಿ ಮಾರುಕಟ್ಟೆಯಲ್ಲಿ 15,000 ರೂ ಗಿಂತ ಕಡಿಮೆ ಬೆಲೆಗೆ ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ತಿಳಿಸಿಕೊಡ್ತೀವಿ ಓದಿರಿ.

ಸ್ಮಾರ್ಟ್‌ಫೋನ್‌

ಹೌದು,ಮಾರುಕಟ್ಟೆಯಲ್ಲಿ ಲಬ್ಯವಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಉತ್ತಮ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿರುವ ಹಾಗೂ 15,000 ಕ್ಕಿಂತ ಕಡಿಮೆ ಬಜೆಟ್ ಬೆಲೆಯಲ್ಲಿಯೂ ಸಹ ಉತ್ತಮ ಸ್ಮಾರ್ಟ್‌ಫೋನ್‌ಗಳನ್ನು ಪಡೆಯಬಹುದಾಗಿದೆ. ಉತ್ತಮ ಬ್ಯಾಟರಿ ಬ್ಯಾಕಪ್‌ನೊಂದಿಗೆ 15,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಬ್ಯವಾಗುವ ಐದು ಸ್ಮಾರ್ಟ್‌ಫೋನ್‌ಗಳ ಬಗ್ಗೆ ನಾವು ತಿಳಿಸಿಕೊಡ್ತೀವಿ ಓದಿರಿ. ಅಷ್ಟಕ್ಕೂ ಆ ಸ್ಮಾರ್ಟ್‌ಫೋನ್‌ಗಳು ಯಾವುವು? ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗ್ಯಾಲಕ್ಸಿ M30s

ಗ್ಯಾಲಕ್ಸಿ M30s

ಸ್ಯಾಮ್‌ಸಂಗ್ ಗ್ಯಾಲಕ್ಸಿ m30s ಸ್ಮಾರ್ಟ್‌ಫೋನ್‌ 6.4-ಇಂಚಿನ ಎಫ್‌ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದಲ್ಲದೆ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದಲ್ಲದೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M30s ಸ್ಮಾರ್ಟ್‌ಫೋನ್‌ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮೂಲಕ 15W ಫಾಸ್ಟ್ ಚಾರ್ಜಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕೇವಲ 15,000 ರೂ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ 4GB RAM ಮತ್ತು 64GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿರಲಿದೆ.

ರೆಡ್ಮಿ ನೋಟ್‌9 ಪ್ರೊ

ರೆಡ್ಮಿ ನೋಟ್‌9 ಪ್ರೊ

ಶಿಯೋಮಿ ರೆಡ್‌ಮಿ ನೋಟ್ 9 ಪ್ರೊ ಸ್ಮಾರ್ಟ್‌ಫೋನ್‌ 5,020mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಯುಎಸ್‌ಬಿ ಟೈಪ್-ಸಿ 18W ಫಾಸ್ಟ್ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 720G ಪ್ರೊಸೆಸರ್‌ ವೇಗವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ 13,999 ರೂ.ಹೊಂದಿದೆ.

ರಿಯಲ್‌ಮಿ ನಾರ್ಜೊ 10

ರಿಯಲ್‌ಮಿ ನಾರ್ಜೊ 10

ರಿಯಲ್‌ಮಿ ನಾರ್ಜೊ 10 ಸ್ಮಾರ್ಟ್‌ಫೋನ್‌ ಅನ್ನು 11,999ರೂ ಬೆಲೆಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೊ G80 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ B&W ಪೋರ್ಟ್ರೇಟ್‌ ಲೆನ್ಸ್‌ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ವಿವೋ ಯು 20

ವಿವೋ ಯು 20

ಇನ್ನು ವಿವೋ ಯು 20 ಸ್ಮಾರ್ಟ್‌ಫೋನ್‌ ಕೂಡ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5,000mAh ಬ್ಯಾಟರಿ ಪ್ಯಾಕ್‌ಅಪ್‌ ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇನ್ನು ವಿವೋ ಯು 20 ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 675 ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯುನಿರ್ವಹಿಸಲಿದೆ. ಹಾಗೇಯೇ 4GB RAM ಮತ್ತು 64GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ 12,990ರೂ ಹೊಂದಿದೆ.

ಮೋಟೋ ಜಿ 8 ಪವರ್ ಲೈಟ್

ಮೋಟೋ ಜಿ 8 ಪವರ್ ಲೈಟ್

ಮೋಟೋ ಜಿ 8 ಪವರ್ ಲೈಟ್ ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿಯೇ ಅತಿ ಕಡಿಮೆ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಕೇವಲ 8,999ರೂ ಆಗಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ನಿಡಲಾಗಿದ್ದು, ಇದು 10W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಒಂದೇ ಚಾರ್ಜ್‌ನಲ್ಲಿ ಈ ಸ್ಮಾರ್ಟ್‌ಫೋನ್ ಎರಡು ದಿನಗಳಿಗಿಂತ ಹೆಚ್ಚು ಕಾಲ ಬಾಳಿಕೆ ಬರಲಿದೆ ಎಂದು ಮೊಟೊರೊಲಾ ಹೇಳಿಕೊಂಡಿದೆ.

Best Mobiles in India

English summary
Here's a list of smartphones that offer good battery life and are priced under ₹15,000.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X