ಮಾರುಕಟ್ಟೆಯಲ್ಲಿ 25,000 ರೂ, ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!
ಟೆಕ್ ವಲಯದಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಾಗುತ್ತಲೇ ಇರುತ್ತವೆ. ಪ್ರತಿನಿತ್ಯ ಹೊಸ ಹೊಸ ಫೀಚರ್ಸ್ ಒಳಗೊಂಡ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇರುತ್ತವೆ. ಇನ್ನು ಲಭ್ಯವಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಅನ್ನುವ ಗೊಂದಲ ಬಳಕೆದಾರರಲ್ಲಿ ಇದ್ದೆ ಇರುತ್ತದೆ. ಬಜೆಟ್ ಬೆಲೆಯ ಮತ್ತು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳ ಕಡೆಗೂ ಹೆಚ್ಚಿನ ಗಮನವನ್ನ ಸ್ಮಾರ್ಟ್‌ಫೋನ್ ಪ್ರಿಯರು ನೀಡುತ್ತಾರೆ. ಹಾಗಾದ್ರೆ ಸ್ಮಾರ್ಟ್‌ಫೋನ್ ಪ್ರಿಯರು 25,000ರೂ ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ತಿಳಿದುಕೊಳ್ಳೋಣ ಬನ್ನಿರಿ.

ಹೌದು, ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯಿಂದ ಹಿಡಿದು ಎಂಟ್ರಿ ಲೆವೆಲ್, ಪ್ರಿಮಿಯಂ ಮತ್ತು ಬಿಗ್ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿವೆ. ಅದರೂ ಸ್ಮಾರ್ಟ್‌ಫೋನ್ ಪ್ರಿಯರು ಮಾತ್ರ ತಮ್ಮ ನೆಚ್ಚಿನ ಬ್ರಾಂಡ್ ಕಂಪೆನಿಗಳ ಸ್ಮಾರ್ಟ್‌ಫೋನ್‌ಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ. ಹಾಗಾದ್ರೆ ಮಾರುಕಟ್ಟೆಯಲ್ಲಿ 25,000ರೂ ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್ ಗಳನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಮಧ್ಯ ಶ್ರೇಣಿಯ ವಿಭಾಗದಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ m51 ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.7 ಇಂಚಿನ ಹೆಚ್‌ಡಿ + ರೆಸಲ್ಯೂಶನ್ ಹೊಂದಿರುವ ಸ್ಯಾಮೋಲ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಇನ್ಫಿನಿಟಿ-ಒ ಡಿಸ್‌ಪ್ಲೇ ಆಗಿದೆ. ಇದು ಗ್ಯಾಲಕ್ಸಿ m51 ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 730G ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 7,000mAh ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 24,999 ರೂ ಆರಂಭಿಕ ಬೆಲೆಗೆ ಲಭ್ಯವಿದೆ.

ರಿಯಲ್‌ಮಿ x3
ರಿಯಲ್‌ಮಿ x3 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು 120Hz ರಿಫ್ರೆಶ್ ರೆಟ್ ಹೊಂದಿರುವ ಡಿಸ್‌ಪ್ಲೇ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 855+ ಆಕ್ಟಾ-ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. ಜೊತೆಗೆ ಇದು ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ತಾಮೆರಾ 20x ಹೈಬ್ರಿಡ್ ಜೂಮ್ + 12 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8-ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ,ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GW1 ಕ್ಯಾಮೆರಾವನ್ನು ನಾಲ್ಕನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 24,999 ರೂ ಆರಂಭಿಕ ಬೆಲೆಗೆ ಲಭ್ಯವಿದೆ.

ರೆಡ್ಮಿ K20 ಪ್ರೊ
ಶಿಯೋಮಿಯ ರೆಡ್‌ಮಿ k20 ಪ್ರೊ ಸ್ಮಾರ್ಟ್‌ಫೋನ್ ಯೋಗ್ಯವಾದ ಕ್ಯಾಮೆರಾ ಮತ್ತು ಕಾರ್ಯಕ್ಷಮತೆಯನ್ನು ನೀಡುವ ಸಮಗ್ರ ಪ್ಯಾಕೇಜ್ ಅನ್ನು ಹುಡುಕುವವರಿಗೆ ಇದು ಉತ್ತಮ ಆಯ್ಕೆಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.39-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 855 ಪ್ರೊಸೆಸರ್, ಅನ್ನು ಹೊಂದಿದೆ. ಹಾಗೇಯೇ ಇದು 8GB RAM ಮತ್ತು 256GB ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 4,000 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು, ಪ್ರಸ್ತುತ ಈ ಸ್ಮಾರ್ಟ್‌ಫೋನ್ 22,999 ರೂ, ಆರಂಭಿಕ ಬೆಲೆಗೆ ಆನ್‌ಲೈನ್‌ನಲ್ಲಿ ಲಭ್ಯವಿದೆ.

ಇದಲ್ಲದೆ ಮಾರುಕಟ್ಟೆಯಲ್ಲಿ 25,000 ರೂ ಗಳಿಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ V19, ಪೊಕೊ X2, ಹಾನರ್ 20, ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ. ಈ ಸ್ಮಾರ್ಟ್‌ಫೋನ್‌ಗಳು ಕೂಡ ಸ್ಮಾರ್ಟ್‌ಫೋನ್ ಪ್ರಿಯರಿಗೆ ಉತ್ತಮ ಆಯ್ಕೆಯಾಗಿವೆ.


Click it and Unblock the Notifications