ಸೋನಿ ಎಕ್ಸ್‌ಪೀರಿಯಾ 1 II ಮತ್ತು 10 II ಸ್ಮಾರ್ಟ್‌ಫೋನ್‌ ಫೀಚರ್ಸ್‌ ಲೀಕ್‌!

|

ಜಾಗತಿಕವಾಗಿ ಉತ್ತಮ ಬ್ರ್ಯಾಂಡ್‌ ನೇಮ್‌ ಪಡೆದುಕೊಂಡಿರುವ ಸೋನಿ ಕಂಪೆನಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯಾವುದೇ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿರಲಿಲ್ಲ. ಆದರೆ ಇದೀಗ ಸೋನಿ ಸ್ಮಾರ್ಟ್‌ಫೋನ್‌ ಪ್ರಿಯರಿಗೆ ಸಿಹಿ ಸುದ್ದಿಯೊಂದನ್ನ ನೀಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಗಳು ನೆಕ್ಸ್ಟ್‌ ಜನರೇಶನ್‌ ಫ್ಲ್ಯಾಗ್‌ಶಿಪ್‌ನಲ್ಲಿ ಮಾರುಕಟ್ಟೆಗೆ ಲಗ್ಗೆ ಹಾಕಲಿವೆ ಎಂದು ನಿರೀಕ್ಷಿಸಲಾಗಿದೆ.

ಹೌದು

ಹೌದು, ಗುಣಮಟ್ಟದ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ದಿ ಪಡೆದಿರುವ ಸೋನಿ ಕಂಪೆನಿ ತನ್ನ ಸೋನಿ ಎಕ್ಸ್‌ಪೀರಿಯಾ 1 II, 10 IIಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಲಿದೆ. ಸದ್ಯ ಬಿಡುಗಡೆಯ ದಿನಾಂಕ ಇನ್ನು ನಿಗದಿ ಪಡಿಸಿಲ್ಲ ಆದರೆ ಈ ಸ್ಮಾರ್ಟ್‌ಪೋನ್‌ಗಳು ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿರಲಿದೆ ಅನ್ನೊದು ಆನ್‌ಲೈನ್‌ನಲ್ಲಿ ಲೀಕ್‌ ಆಗಿದೆ. ಇನ್ನು ಸೋನಿ ಎಕ್ಸ್ಪೀರಿಯಾ 1 II ಸೋನಿ ಕಂಪೆನಿಯ ಮೊದಲ 5G ಸ್ಮಾರ್ಟ್‌ಫೋನ್ ಆಗಿರಲಿದೆ ಎಂದು ಹೇಳಲಾಗ್ತಿದೆ. ಸದ್ಯ ಲೀಕ್‌ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಸೋನಿ ಎಕ್ಸ್‌ಪೀರಿಯಾ 1 II ಡಿಸ್‌ಪ್ಲೇ ಮಾದರಿ

ಸೋನಿ ಎಕ್ಸ್‌ಪೀರಿಯಾ 1 II ಡಿಸ್‌ಪ್ಲೇ ಮಾದರಿ

ಸೋನಿ ಎಕ್ಸ್‌ಪೀರಿಯಾ 1 II ಸ್ಮಾರ್ಟ್‌ಫೋನ್‌ 6.5 ಇಂಚಿನ 4K HDR OLED ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 21:9 ಆಸ್ಪೆಕ್ಟ್‌ ರೆಶೀಯೋ ಹೊಂದಿದ್ದು, ಮೋಷನ್ ಬ್ಲರ್ ರಿಡಕ್ಷನ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಇದಲ್ಲದೆ ಈ ಡಿಸ್‌ಪ್ಲೇ ಪ್ಯಾನೆಲ್‌ 90Hzಗೆ ಸಮನಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಜೊತೆಗೆ ಈ ಡಿಸ್‌ಪ್ಲೇಯು ಉತ್ತಮ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ ಎಂದು ಹೇಳಲಾಗ್ತಿದೆ.

ಸೋನಿ ಎಕ್ಸ್‌ಪೀರಿಯಾ 1 II ಪ್ರೊಸೆಸರ್‌

ಸೋನಿ ಎಕ್ಸ್‌ಪೀರಿಯಾ 1 II ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮೆಮೊರಿ ಕಾರ್ಡ್‌ ಮೂಲಕ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯದ ಬಗ್ಗೆ ಯಾವುದೇ ಮಾಹಿತಿ ಇನ್ನು ಲಭ್ಯವಾಗಿಲ್ಲ.

ಸೋನಿ ಎಕ್ಸ್‌ಪೀರಿಯಾ 1 II ಕ್ಯಾಮೆರಾ ವಿನ್ಯಾಸ

ಸೋನಿ ಎಕ್ಸ್‌ಪೀರಿಯಾ 1 II ಕ್ಯಾಮೆರಾ ವಿನ್ಯಾಸ

ಸೋನಿ ಎಕ್ಸ್‌ಪೀರಿಯಾ 1 II ಸ್ಮಾರ್ಟ್‌ಫೋನ್‌ ಟ್ರಿಪಲ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡು ಮತ್ತು ಮೂರನೇ ಕ್ಯಾಮೆರಾ ಕೂಡ 12 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌, ಡೆಪ್ತ್‌ ಸೆನ್ಸಾರ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್‌ ನಮೀಡಲಾಗಿದ್ದು, ವೈರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ ಸಾಧ್ಯತೆ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸಪಾಟ್‌, ವೈಫೈ, ಬ್ಲೂಟೂತ್‌, ಅನ್ನು ಬೆಂಬಲಿಸಲಿದೆ. ಇದಲ್ಲದೆ 3.5 ಎಂಎಂ ಹೆಡ್‌ಫೋನ್‌ ಜ್ಯಾಕ್, ಫ್ರಂಟ್-ಫೈರಿಂಗ್ ಸ್ಟಿರಿಯೊ ಸ್ಪೀಕರ್‌ಗಳು, ಡಾಲ್ಬಿ ಅಟ್ಮೋಸ್ ಮತ್ತು ಹೈ-ರೆಸ್ ಆಡಿಯೋ, ಆಡಿಯೊ ಇಂಟಿಗ್ರೇಷನ್ ಮತ್ತು 360 ರಿಯಾಲಿಟಿ ಆಡಿಯೋ ಟೆಕ್ನಾಲಜಿಯನ್ನು ಒಳಗೊಂಡಿದೆ.

ಸೋನಿ ಎಕ್ಸ್‌ಪೀರಿಯಾ 10 II

ಸೋನಿ ಎಕ್ಸ್‌ಪೀರಿಯಾ 10 II

ಈ ಸ್ಮಾರ್ಟ್‌ಫೋನ್‌ 6-ಇಂಚಿನ ಫುಲ್‌ ಎಚ್‌ಡಿ ಪ್ಲಸ್‌ ಒಎಲ್ಇಡಿ ಡಿಸ್‌ಪ್ಲೇ ಹೊಂದಿದ್ದು, 21: 9 ಆಸ್ಪೆಕ್ಟ್‌ ರೆಶೀಯೋ ಹೊಂದಿರಲಿದೆ.ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 665 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಸಹ ಹೊಂದಿದೆ. ಇದಲ್ಲದೆ, ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 12ಮೆಗಾ ಪಿಕ್ಸೆಲ್‌, 2 ಮತ್ತು 3ನೇ ಕ್ಯಾಮೆರಾ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಒಳಗೊಂಡಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 3,600mAh ಬ್ಯಾಟರಿ ಪ್ಯಾಕ್‌ಆಪ್‌ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಸದ್ಯ ಬಿಡುಗಡೆಯಾಗಬೇಕಿರುವ ಈ ಎರಡು ಸ್ಮಾರ್ಟ್‌ಫೋನ್‌ಗಳು ಯಾವ ಬೆಲೆಯನ್ನು ಹೊಂದಿರಲಿವೆ ಅನ್ನೊದರ ಬಗ್ಗೆ ಇನ್ನು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡುವ ನಿರೀಕ್ಷೆ ಇದ್ದು ಬಿಡುಗಡೆಯ ದಿನಾಂಕವನ್ನು ಸಹ ಕಂಪೆನಿ ಎಲ್ಲಿಯೂ ಬಿಟ್ಟುಕೊಟ್ಟಿಲ್ಲ. ಆದರೆ ಈ ಎರಡು ಸ್ಮಾರ್ಟ್‌ಫೋನ್‌ಗಳು ಬ್ಲ್ಯಾಕ್‌ ಆಂಡ್‌ ವೈಟ್‌ ಕಲರ್‌ನಲ್ಲಿ ಖರೀದಿಸಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Sony is hosting an online press conference later today where we could see the launch of the new Xperia phones.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X