Home
ಸುದ್ದಿಜಾಲ

ಟೆಕ್‌ ವಲಯದಲ್ಲಿ ಹೊಸ ಫೋನ್‌ನೊಂದಿಗೆ ಬಿರುಗಾಳಿ ಎಬ್ಬಿಸಿದ ಸೋನಿ ಕಂಪೆನಿ!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಸೋನಿ ಕಂಪೆನಿ ಮತ್ತೆ ಸೌಂಡ್‌ ಮಾಡಲು ಶುರುಮಾಡಿದೆ. ತನ್ನ ಹೊಸ ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವ ಮೂಲಕ ಟೆಕ್‌ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಈ ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದ್ದು, Exmor T ಹೊಂದಿರುವುದು ಮೇನ್‌ ಹೈಲೈಟ್‌ ಆಗಿದೆ.

ಹೌದು, ಸೋನಿ ಕಂಪೆನಿ ಹೊಸದಾಗಿ ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಅನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್‌ ವಲಯದಲ್ಲಿ ಹೊಸ ಫೋನ್‌ನೊಂದಿಗೆ ಬಿರುಗಾಳಿ ಎಬ್ಬಿಸಿದ ಸೋನಿ ಕಂಪೆನಿ!

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇ

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ 6.5 ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 21:9 ಸಿನಿಮಾವೈಡ್ 4K HDR ಅನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದಲ್ಲದೆ ಡಿಸ್‌ಪ್ಲೇ 240Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಕೂಡ ಬೆಂಬಲಿಸಲಿದೆ.

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಪ್ರೊಸೆಸರ್‌

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದು ಮೆಮೊರಿ ಕಾರ್ಡ್‌ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಟೆಕ್‌ ವಲಯದಲ್ಲಿ ಹೊಸ ಫೋನ್‌ನೊಂದಿಗೆ ಬಿರುಗಾಳಿ ಎಬ್ಬಿಸಿದ ಸೋನಿ ಕಂಪೆನಿ!

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಕ್ಯಾಮೆರಾ

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದೆ. ಮುಖ್ಯವಾಗಿ ಕ್ಯಾಮೆರಾ ಸೆಟ್‌ಟಾಪ್‌ನಲ್ಲಿ ಎಕ್ಸ್‌ಮೋರ್ ಟಿ ಸ್ಟ್ಯಾಕ್ಡ್ ಸೆನ್ಸಾರ್ ಅನ್ನು ಅಳವಡಿಸಲಾಗಿದೆ. ಇನ್ನು ಈ ಫೋನ್‌ ಮುಖ್ಯ ಕ್ಯಾಮೆರಾ 52-ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 12-ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಟೆಲಿಫೋಟೋ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ತನ್ನ ಅಲ್ಟ್ರಾ-ವೈಡ್ ಕ್ಯಾಮೆರಾದಲ್ಲಿ 4K ವೀಡಿಯೊ ರೆಕಾರ್ಡಿಂಗ್ ಅನ್ನು ಸಹ ಬೆಂಬಲಿಸುತ್ತದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಬ್ಯಾಟರಿ

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W (USB PD) ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ವೈರ್‌ಲೆಸ್ ಚಾರ್ಜಿಂಗ್ ಮತ್ತು ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಸಹ ಒಳಗೊಂಡಿದೆ. ಇನ್ನು ಕನೆಕ್ಟಿವಿಟ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, 3.5 mm ಆಡಿಯೊ ಜಾಕ್ ಅನ್ನು ಬೆಂಬಲಿಸಲಿದೆ.

ಟೆಕ್‌ ವಲಯದಲ್ಲಿ ಹೊಸ ಫೋನ್‌ನೊಂದಿಗೆ ಬಿರುಗಾಳಿ ಎಬ್ಬಿಸಿದ ಸೋನಿ ಕಂಪೆನಿ!

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಬೆಲೆ ಮತ್ತು ಲಭ್ಯತೆ

ಸೋನಿ ಎಕ್ಸ್‌ಪೀರಿಯಾ 1 V ಸ್ಮಾರ್ಟ್‌ಫೋನ್‌ ಯುರೋಪ್ ಮಾರುಕಟ್ಟೆಯಲ್ಲಿ 12GB RAM + 256GB ಸ್ಟೋರೇಜ್ ಆಯ್ಕೆಗೆ $1,399 (ಅಂದಾಜು 1,14,700ರೂ)ಬೆಲೆ ಹೊಂದಿದೆ. ಇದು ಹಸಿರು ಮತ್ತು ಕಪ್ಪು, ಪ್ಲಾಟಿನಂ ಬೆಳ್ಳಿ ಮತ್ತು ಖಾಕಿ ಹಸಿರು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.

Best Mobiles in India

English summary
Sony Xperia 1 V With Exmor T Image Sensor Launched: Price and specs details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+