Home
ಸುದ್ದಿಜಾಲ

ಸೋನಿ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಲೀಕ್!

ಸೋನಿ ಕಂಪನಿಯ ಎಕ್ಸಪಿರಿಯಾ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಸಂಸ್ಥೆಯು ಕಳೆದ ವರ್ಷ ಈ ಸರಣಿಯಲ್ಲಿ ಎಕ್ಸ್‌ಪಿರಿಯಾ 5 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಈ ಸರಣಿಯಲ್ಲಿ ಈಗ ಮತ್ತೆ ಹೊಸದೊಂದು ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಅದುವೇ ಸೋನಿ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್.

ಎಕ್ಸ್‌ಪಿರಿಯಾ 5 II

ಹೌದು, ಜನಪ್ರಿಯ ಸೋನಿ ಸಂಸ್ಥೆಯು ಇದೀಗ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 17ರಂದು ಲಾಂಚ್ ಆಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್, OLED ಡಿಸ್‌ಪ್ಲೇ, ಹಾಗೂ 8GB RAM ಮತ್ತು 128GB ಸ್ಟೋರೇಜ್‌ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ. ಇನ್ನುಳಿದಂತೆ ಲೀಕ್ ಮಾಹಿತಿಯಂತೆ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಸೋನಿ

ಹೌದು, ಜನಪ್ರಿಯ ಸೋನಿ ಸಂಸ್ಥೆಯು ಇದೀಗ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್ ಇದೇ ಸೆಪ್ಟಂಬರ್ 17ರಂದು ಲಾಂಚ್ ಆಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್, OLED ಡಿಸ್‌ಪ್ಲೇ, ಹಾಗೂ 8GB RAM ಮತ್ತು 128GB ಸ್ಟೋರೇಜ್‌ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದುಬಂದಿದೆ. ಇನ್ನುಳಿದಂತೆ ಲೀಕ್ ಮಾಹಿತಿಯಂತೆ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಈ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ OLED ಡಿಸ್‌ಪ್ಲೇಯನ್ನು ಹೊಂದಿರಲಿದೆ. ಡಿಸ್‌ಪ್ಲೇಯ ಅನುಪಾತವು 21:9 ಇರಲಿದ್ದು, 120Hz ರೀಫ್ರೇಶ್‌ ರೇಟ್ ಒಳಗೊಂಡಿರಲಿದೆ. ಹಾಗೆಯೇ ಡಿಸ್‌ಪ್ಲೇಯು ಸಿನಿಮಾ ವೈಲ್ಡ್‌ ಅನುಪಾತ ಹೊಂದಿರಲಿದೆ.

ಪ್ರೊಸೆಸರ್‌ ಸಾಮರ್ಥ್ಯ

ಪ್ರೊಸೆಸರ್‌ ಸಾಮರ್ಥ್ಯ

ಈ ಸ್ಮಾರ್ಟ್‌ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿರಲಿದೆ. ಆಂಡ್ರಾಯ್ಡ್‌ 10 ಓಎಸ್‌ ಹಾಗೂ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಪಡೆದುಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ. ಹಾಗೆಯೇ ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡುವ ನಿರೀಕ್ಷೆಗಳು ಇವೆ.

ಕ್ಯಾಮೆರಾ ವಿಶೇಷತೆ

ಕ್ಯಾಮೆರಾ ವಿಶೇಷತೆ

ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದ್ದು, ಮುಖ್ಯ ಕ್ಯಾಮೆರಾವು 12ಎಂಪಿ ಸೆನ್ಸಾರ್‌ನಲ್ಲಿರುವ ಸಾಧ್ಯತೆಗಳಿವೆ. ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾವು ಸಹ 12ಎಂಪಿ ಸೆನ್ಸಾರ್‌ನಲ್ಲಿರಲಿವೆ. ಎನ್ನಲಾಗಿದೆ. ಇನ್ನು ಫ್ರಂಟ್ ಕ್ಯಾಮೆರಾ ಬಗ್ಗೆ ಮಾಹಿತಿ ನೀಡಿಲ್ಲ.

ಬ್ಯಾಟರಿ ಮತ್ತು ಸೌಲಭ್ಯಗಳು

ಬ್ಯಾಟರಿ ಮತ್ತು ಸೌಲಭ್ಯಗಳು

ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಒಳಗೊಂಡಿರಲಿದ್ದು, ಜೊತೆಗೆ ಯುಎಸ್‌ಬಿ ಸಪೋರ್ಟ್‌ ಇರುವ ಎಕ್ಸ್‌ಪಿರಿಯಾ ಚಾರ್ಜರ್ ನೀಡುವ ನಿರೀಕ್ಷೆಗಳಿವೆ. ಇದರೊಂದಿಗೆ ಬ್ಲೂಟೂತ್ 5, ಎನ್‌ಎಫ್‌ಸಿ, ಯುಎಸ್‌ಬಿ 3.1, ಯುಎಸ್‌ಬಿ ಟೈಪ್-ಸಿ ಪೋರ್ಟ್‌, ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಸೌಂಡ್, ಆಡಿಯೊ ಜಾಕ್ ಸೇರಿದಂತೆ ಸ್ಟಿರಿಯೊ ಸ್ಪಿಕರ್ಸ್‌ಗಳ ಸೌಲಭ್ಯಗಳಿರಲಿವೆ.

Best Mobiles in India

English summary
Sony Xperia 5 II Specifications and Renders leaked. This Phone Comes with Qualcomm Snapdragon 865 SoC.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+