ಮಾರುಕಟ್ಟೆಗೆ ಸೋನಿ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಬಿಡುಗಡೆ!
ಸೋನಿ ಕಂಪನಿಯು ಎಕ್ಸಪಿರಿಯಾ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಸಂಸ್ಥೆಯು ಈ ಹಿಂದೆ ಎಕ್ಸ್‌ಪಿರಿಯಾ 5 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿತ್ತು. ಇದೀಗ ಅದೇ ಸರಣಿಯಲ್ಲಿ ಮತ್ತೆ ಹೊಸದಾಗಿ ಸೋನಿ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸೋನಿ ಸಂಸ್ಥೆಯು ಇದೀಗ ಎಕ್ಸ್‌ಪಿರಿಯಾ 5 II ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇನ್ನು ಈ ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್, OLED ಡಿಸ್‌ಪ್ಲೇ, ಹಾಗೂ 8GB RAM ಮತ್ತು 128GB ಸ್ಟೋರೇಜ್ ನಂತಹ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನುಳಿದಂತೆ ಎಕ್ಸ್‌ಪಿರಿಯಾ 5 II ಫೋನ್ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

OLED ಡಿಸ್‌ಪ್ಲೇ
ಈ ಸ್ಮಾರ್ಟ್‌ಫೋನ್ ಅಧಿಕ ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು 1,080x2,520 ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಡಿಸ್‌ಪ್ಲೇಯ ಅನುಪಾತವು 21:9 ಇದ್ದು, 120Hz ರೀಫ್ರೇಶ್ ರೇಟ್ ಒಳಗೊಂಡಿದೆ. ಹಾಗೆಯೇ ಡಿಸ್‌ಪ್ಲೇಯು ಸಿನಿಮಾ ವೈಲ್ಡ್ ಅನುಪಾತ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನ್ಯಾಪ್‌ಡ್ರಾಗನ್ 865 SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಆಂಡ್ರಾಯ್ಡ್ 10 ಓಎಸ್ ಹಾಗೂ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯದ ವೇರಿಯಂಟ್ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸಿಕೊಳ್ಳುವ ಬಗ್ಗೆ ಮಾಹಿತಿ ಇಲ್ಲ.

ಕ್ಯಾಮೆರಾ ವಿಶೇಷತೆ
ಈ ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು ಸೇರಿದಂತೆ ಸೆಕೆಂಡರಿ ಮತ್ತು ತೃತೀಯ ಕ್ಯಾಮೆರಾಗಳು ಸಹ 12ಎಂಪಿ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಫ್ರಂಟ್ ಸೆಲ್ಫಿ ಕ್ಯಾಮೆರಾವು 8ಎಂಪಿ ಸೆನ್ಸಾರ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಸೌಲಭ್ಯಗಳು
ಈ ಸ್ಮಾರ್ಟ್‌ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಒಳಗೊಂಡಿದೆ. ಕೇವಲ 30 ನಿಮಿಷದಲ್ಲಿ ಶೇ.50% ಚಾರ್ಜಿಂಗ್ ಪಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಬ್ಲೂಟೂತ್ 5, ಎನ್‌ಎಫ್‌ಸಿ, ಯುಎಸ್‌ಬಿ 3.1, ಯುಎಸ್‌ಬಿ ಟೈಪ್-ಸಿ ಪೋರ್ಟ್, ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಡಾಲ್ಬಿ ಸೌಂಡ್, ಆಡಿಯೊ ಜಾಕ್ ಸೇರಿದಂತೆ ಸ್ಟಿರಿಯೊ ಸ್ಪಿಕರ್ಸ್‌ಗಳ ಸೌಲಭ್ಯಗಳಿವೆ.

ಬೆಲೆ ಮತ್ತು ಲಭ್ಯತೆ
ಈ ಸ್ಮಾರ್ಟ್‌ಫೋನ್ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು EUR 899 ಆಗಿದೆ. (ಭಾರತದಲ್ಲಿ ಅಂದಾಜು 78,000ರೂ. ಎನ್ನಲಾಗಿದೆ). ಇನ್ನು ಈ ಫೋನ್ ಬ್ಲ್ಯಾಕ್, ಬ್ಲೂ, ಗ್ರೇ ಹಾಗೂ ಪಿಂಕ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ.


Click it and Unblock the Notifications








