ಸೋನಿ ಎಕ್ಸ್ಪೀರಿಯಾ 5 V ಬಿಡುಗಡೆ ದಿನಾಂಕ ಬಹಿರಂಗ.. ಡಿಸೈನ್ ಹೇಗಿದೆ?
ಮೊಬೈಲ್ ಮಾರುಕಟ್ಟೆಯಲ್ಲಿ ಸೈಲೆಂಟ್ ಆಗಿದ್ದ ಸೋನಿ ಇತ್ತೀಚಿಗೆ ಸೌಂಡ್ ಮಾಡಲು ಶುರುಮಾಡಿದೆ. ಹೊಸ ಆವತಾರದಲ್ಲಿ ತನ್ನ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿರುವ ಸೋನಿ ಮತ್ತೆ ಸಂಚಲನ ಸೃಷ್ಟಿಸಿದೆ. ಇದರ ಮುಂದುವರಿದ ಭಾಗವೆಂಬಂತೆ ಇದೀಗ ಹೊಸ ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿದೆ.
ಹೌದು, ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಎಂಟ್ರಿ ನೀಡಲಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನೊಂದಿಗೆ ಬರಲಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ ಎನ್ನಲಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಒಳಗೊಂಡಿರಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಹೊಂದಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸೋನಿ ಎಕ್ಸ್ಪೀರಿಯಾ 5 V ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ 6.3 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080 x 2520 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇನ್ನು ಡಿಸ್‌ಪ್ಲೇ 80.9 % ಸ್ಕ್ರೀನ್ ಟು ಬಾಡಿ ಅನುಪಾತವನ್ನು ಪಡೆದಿರಲಿದೆ ಎಂದು ಅಂದಾಜಿಸಲಾಗಿದೆ.
ಸೋನಿ ಎಕ್ಸ್ಪೀರಿಯಾ 5 V ಪ್ರೊಸೆಸರ್ ಯಾವುದು?
ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಬರಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಬೆಂಬಲದೊಂದಿಗೆ ಬರುವ ನಿರೀಕ್ಷೆಯಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಸೋನಿ ಎಕ್ಸ್ಪೀರಿಯಾ 5 V ಕ್ಯಾಮೆರಾ ಸೆಟ್‌ಅಪ್
ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿರಲಿದೆ. ಇದರ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಇರಬಹುದು ಎಂದು ಹೇಳಲಾಗಿದೆ. ಹಿಂಬದಿಯ ಕ್ಯಾಮೆರಾಗಳನ್ನು LED ಫ್ಲ್ಯಾಷ್ ಜೊತೆಗೆ ಹಿಂಭಾಗದಲ್ಲಿ ಲಂಬವಾಗಿ ಇರಿಸಲಾಗುತ್ತದೆ.
ಸೋನಿ ಎಕ್ಸ್ಪೀರಿಯಾ 5 V ಬ್ಯಾಟರಿ ಮತ್ತು ಇತರೆ
ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ ಎಂದು ಅಂದಾಜಿಸಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ. ಇದು ಲೈಟ್ ಸೆನ್ಸರ್, ಪ್ರಾಕ್ಸಿಮಿಟಿ ಸೆನ್ಸರ್, ಅಕ್ಸಿಲೆರೊಮೀಟರ್, ಕಂಪಾಸ್, ಜಿರೋಸ್ಕೋಪ್ ನಂತಹ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಸೋನಿ ಎಕ್ಸ್ಪೀರಿಯಾ 5 V ಬೆಲೆ ಮತ್ತು ಲಭ್ಯತೆ
ಸೋನಿ ಎಕ್ಸ್ಪೀರಿಯಾ 5 V ಸ್ಮಾರ್ಟ್‌ಫೋನ್ ಸೆಪ್ಟೆಂಬರ್ 1 ರಂದು ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣದ ಆಯ್ಕೆಯಲ್ಲಿ ದೊರೆಯಲಿದೆ. ಇನ್ನು ಸ್ಮಾರ್ಟ್‌ಫೋನ್ ಮ್ಯಾಟ್ ಫಿನಿಶ್ ಮತ್ತು ಹಿಂಭಾಗದಲ್ಲಿ ಸೋನಿಯ ಬ್ರ್ಯಾಂಡಿಂಗ್‌ನೊಂದಿಗೆ ಬರುತ್ತದೆ ಎಂದು ವದಂತಿಯಿದೆ. ಈ ಸ್ಮಾರ್ಟ್‌ಫೋನ್ ಭಾರತಕ್ಕೆ ಯಾವಾಗ ಎಂಟ್ರಿ ನೀಡಲಿದೆ ಅನ್ನೊದು ಇನ್ನು ಸಹ ಬಹಿರಂಗವಾಗಿಲ್ಲ.


Click it and Unblock the Notifications








