ಸೋನಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ ಬಿಡುಗಡೆ! ಡ್ಯುಯಲ್ ಕ್ಯಾಮೆರಾ!
ಸೋನಿ ಕಂಪನಿಯು ತನ್ನ ಎಕ್ಸಪಿರಿಯಾ ಸ್ಮಾರ್ಟ್‌ಫೋನ್ ಸರಣಿಯಲ್ಲಿ ಹಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರಿಂದ ಸೈ ಅನಿಸಿಕೊಂಡಿದೆ. ಕಂಪನಿಯ ಎಕ್ಸ್‌ಪಿರಿಯಾ ಸರಣಿಯ ಫೋನ್‌ಗಳು ಗುಣಮಟ್ಟ ಹಾಗೂ ಡಿಸೈನ್‌ನಿಂದ ಹೆಚ್ಚು ಗುರುತಿಸಿಕೊಂಡಿವೆ. ಸಂಸ್ಥೆಯು ಎಕ್ಸ್‌ಪಿರಿಯಾ ಸರಣಿಯಲ್ಲಿಯೇ ಈಗ ಹೊಸದಾಗಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ಜನಪ್ರಿಯ ಸೋನಿ ಸಂಸ್ಥೆಯು ಇದೀಗ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ. ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದ್ದು, ಬ್ಲ್ಯಾಕ್, ಬ್ಲೂ ಹಾಗೂ ವೈಟ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ
ಸೋನಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ 720x1,496 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5.5 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ನಾಚ್ ರಚನೆಯನ್ನು ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ
ಸೋನಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೋ P35 SoC ಪ್ರೊಸೆಸರ್ ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಓಎಸ್ ಸಪೋರ್ಟ್ ಅನ್ನು ಪಡೆದಿದೆ. 4GB RAM ಮತ್ತು 64GB ಸ್ಟೋರೇಜ್ ವೇರಿಯಂಟ್ ಆಯ್ಕೆ ಇದ್ದು, ಜೊತೆಗೆ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೂ ಬಾಹ್ಯ ಮೆಮೊರಿ ವಿಸ್ತರಿಸುವ ಅವಕಾಶ ಪಡೆದಿದೆ.

ಕ್ಯಾಮೆರಾ ವಿಶೇಷತೆ
ಸೋನಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಮುಖ್ಯ ಕ್ಯಾಮೆರಾವು 13 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಫ್ರಂಟ್ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಸೌಲಭ್ಯಗಳು
ಸೋನಿ ಎಕ್ಸ್‌ಪಿರಿಯಾ ಏಸ್ 2 ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಶಕ್ತಿಯನ್ನು ಒಳಗೊಂಡಿದೆ. ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸ್ಕ್ಯಾನರ್ ಇದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್ ವಿ 5.0, ಜಿಪಿಎಸ್, 4 ಜಿ, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಆನ್‌ಬೋರ್ಡ್‌ನಲ್ಲಿ ಸಂವೇದಕಗಳು ಆಂಬಿಯೆಂಟ್ ಲೈಟ್ ಸೆನ್ಸರ್, ಸಾಮೀಪ್ಯ ಸಂವೇದಕ ಮತ್ತು ಅಕ್ಸೆಲೆರೊಮೀಟರ್ ಅನ್ನು ಒಳಗೊಂಡಿವೆ.


Click it and Unblock the Notifications