Home
ಸುದ್ದಿಜಾಲ

ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಹಾನರ್‌ ಫೋನ್‌ ಖರೀದಿಸಲು ಇದೇ ಬೆಸ್ಟ್‌ ಆಫರ್‌!

ಜನಪ್ರಿಯ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಅಮೆಜಾನ್‌ ಮೊಬೈಲ್‌ ಫೋನ್‌ಗಳಿಗೆ ವಿಶೇಷ ರಿಯಾಯಿತಿ ಲಭ್ಯ ಮಾಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಅಗ್ಗದ ಫೋನ್‌ಗಳಿಂದ ಹಿಡಿದು ದುಬಾರಿ ಹೈ ಎಂಡ್ ಮಾದರಿಯ ಮೊಬೈಲ್‌ಗಳಿಗೂ ಆಕರ್ಷಕ ಡಿಸ್ಕೌಂಟ್‌ ಘೋಷಿಸಿರುತ್ತದೆ. ಈ ನಿಟ್ಟಿನಲ್ಲಿ ಅನೇಕರು ಹೊಸ ಫೋನ್‌ ಖರೀದಿಸುವಾಗ ಅಮೆಜಾನ್‌ ವೆಬ್‌ಸೈಟ್‌ಗೆ ಭೇಟಿ ನೀಡುತ್ತಾರೆ. ಸದ್ಯ ಹಾನರ್‌ ಮೊಬೈಲ್‌ ಸಂಸ್ಥೆಯು ಇತ್ತೀಚಿಗಿನ ಹಾನರ್‌ X9b 5G ಫೋನ್‌ ಬೊಂಬಾಟ್‌ ರಿಯಾಯಿತಿ ಪಡೆದಿದ್ದು, ಖರೀದಿದಾರರನ್ನು ತನ್ನತ್ತ ಸೆಳೆಯುತ್ತಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಹಾನರ್‌ X9b 5G ಮೊಬೈಲ್‌ ಶೇ. 26% ರಷ್ಟು ನೇರ ಡಿಸ್ಕೌಂಟ್‌ ಪಡೆದಿದ್ದು, ಈ ಫೋನ್‌ 8GB + 256GB ಮಾದರಿಯ ಫೋನ್‌ 22,999ರೂ. ಗಳ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇದರೊಂದಿಗೆ ಗ್ರಾಹಕರಿಗೆ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಲಭ್ಯ ಆಗಲಿವೆ.

ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಹಾನರ್‌ ಫೋನ್‌ ಖರೀದಿಸಲು ಇದೇ ಬೆಸ್ಟ್‌ ಆಫರ್‌!

ಇನ್ನು ಹಾನರ್‌ ಸಂಸ್ಥೆಯ ಈ ಮೊಬೈಲ್‌ ಸ್ನಾಪ್‌ಡ್ರಾಗನ್‌ 6 ಜೆನ್‌ 1 ಚಿಪ್‌ಸೆಟ್‌ ಪ್ರೊಸೆಸರ್‌ ಸೌಲಭ್ಯ ಒಳಗೊಂಡಿದ್ದು, ಇದರ ಜೊತೆಗೆ 5,800mAh ಸಾಮರ್ಥ್ಯದ ಬ್ಯಾಟರಿ ಸಪೋರ್ಟ್‌ ಪಡೆದುಕೊಂಡಿದೆ. ಅಲ್ಲದೇ ಇದು 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಇನ್ನುಳಿದಂತೆ ಹಾನರ್‌ X9b 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಹಾನರ್‌ X9b 5G ಫೋನ್‌ ಫೀಚರ್ಸ್‌

ಹಾನರ್‌ X9b 5G ಫೋನ್‌ 6.78 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಅನ್ನು ಸಪೋರ್ಟ್‌ ಮಾಡಲಿದೆ.

ಹಾನರ್‌ X9b 5G ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 6 ಜೆನ್‌ 1 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಫೋನ್‌ ಆಂಡ್ರಾಯ್ಡ್‌ 13 ಆಧಾರಿತ MagicOS 7.2 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ.

ಹಾನರ್‌ X9b 5G ಫೋನ್‌ ಮೂರು ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 108 ಮೆಗಾ ಪಿಕ್ಸೆಲ್‌ ಸೆನ್ಸಾರ್‌ನಲ್ಲಿ ಇದೆ. ದ್ವಿತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಸೆನ್ಸಾರ್‌ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಹಾನರ್‌ X9b 5G ಮೊಬೈಲ್‌ 5,800mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 35W ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್‌ ಪಡೆದುಕೊಂಡಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್‌, ವೈಫೈ, ಹಾಟ್‌ಸ್ಪಾಟ್‌, ಯುಎಸ್‌ಬಿ ಟೈಪ್‌ ಸಿ ಪೋರ್ಟ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸರ್, ಗೈರೊಸ್ಕೋಪ್, ಕಂಪಾಸ್‌, ಆಂಬಿಯೆಂಟ್ ಲೈಟ್ ಸೆನ್ಸರ್ ಆಯ್ಕೆಗಳು ಇವೆ.

ಹಾನರ್‌ X9b 5G ಮೊಬೈಲ್‌ 8 GB + 256 GB ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. ಹಾಗೆಯೇ ಈ ಮೊಬೈಲ್‌ ಮಿಡ್‌ನೈಟ್ ಬ್ಲಾಕ್ ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಕಲರ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇದ್ದು, ಆಸಕ್ತ ಗ್ರಾಹಕರು ಅಮೆಜಾನ್‌ ತಾಣದಲ್ಲಿ ಖರೀದಿ ಮಾಡಬಹುದು.

Best Mobiles in India

English summary
Substantial Price Cut on HONOR X9b 5G on Amazon India website. know more about offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+