ಮಾರುಕಟ್ಟೆಯಲ್ಲಿ ಅಬ್ಬರಿಸಿದ ಈ VIVO ಮೊಬೈಲ್ ಬೆಲೆಯಲ್ಲಿ ಈಗ ಭಾರೀ ಇಳಿಕೆ!
ದೀಪಾವಳಿ ಹಬ್ಬದ ಪ್ರಯುಕ್ತ ಆನ್‌ಲೈನ್ ತಾಣಗಳು ರಿಯಾಯತಿ ಘೋಷಿಸಿವೆ. ಹಾಗೆಯೇ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಸಹ ಆಯ್ದ ಮೊಬೈಲ್‌ಗಳಿಗೆ ಅತ್ಯುತ್ತಮ ಡಿಸ್ಕೌಂಟ್ ಲಭ್ಯ ಮಾಡಿದೆ. ಆ ಪೈಕಿ ವಿವೋ ಸಂಸ್ಥೆಯು ವಿವೋ T3 5G (vivo T3 5G) ಫೋನ್ ಭರ್ಜರಿ ಡಿಸ್ಕೌಂಟ್ ಬೆಲೆ ಪಡೆದುಕೊಂಡಿದೆ. ಇನ್ನು ಈ ಫೋನ್ 8GB RAM + 256GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಪಡೆದಿದ್ದು, ಇದರ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅಗಿದೆ.
ಹೌದು, ಫ್ಲಿಪ್‌ಕಾರ್ಟ್ ಪ್ಲಾಟ್‌ಫಾರ್ಮ್‌ನಲ್ಲಿ ದೀಪಾವಳಿ ಹಬ್ಬದ ಸೇಲ್‌ನಲ್ಲಿ ವಿವೋ T3 5G (vivo T3 5G) ಫೋನ್ ಶೇ. 19% ರಷ್ಟು ನೇರ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 18,499ರೂ. ಗಳ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್ ಕೂಡಾ ಪಡೆಯಬಹುದಾಗಿದೆ.

ಅಲ್ಲದೇ ವಿವೋದ ಈ ಫೋನ್ ಅನ್ನು ಗ್ರಾಹಕರು ಇದನ್ನು ಕಾಸ್ಮಿಕ್ ಬ್ಲೂ ಮತ್ತು ಸಿಸ್ಟಲ್ ಫ್ಲೇಕ್ ಕಲರ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದೆ. ಹಾಗೆಯೇ ಇದು ಡ್ಯುಯಲ್ ಕ್ಯಾಮೆರಾ ರಚನೆ ಪಡೆದಿದ್ದು, 50 ಮೆಗಾ ಪಿಕ್ಸಲ್ ಪ್ರಾಥಮಿಕ ಕ್ಯಾಮೆರಾ ರಚನೆ ಸಹ ಹೊಂದಿದೆ. ಇನ್ನುಳಿದಂತೆ ಈ ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ತಿಳಿಯಲು ಮುಂದೆ ಓದಿರಿ.
ವಿವೋ T3 5G - ಫೀಚರ್ಸ್
ವಿವೋ T3 5G ಫೋನ್ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್ ಹಾಗೂ 360Hz ಟಚ್ ಸ್ಯಾಂಪ್ಲಿಂಗ್ ರೇಟ್, ಹೆಚ್‌ಡಿಆರ್ 10+ ಸೌಲಭ್ಯ, 1800 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಕೂಡಾ ಪಡೆದಿದೆ.
ವಿವೋ T3 5G ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 7200 4nm ಪ್ರೊಸೆಸರ್ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್ 14 ಓಎಸ್ ಬೆಂಬಲ ಕೂಡಾ ಪಡೆದಿದೆ. ಇದರೊಂದಿಗೆ 8GB RAM, 128GB ಹಾಗೂ 256GB ಆಂತರೀಕ ಸ್ಟೋರೇಜ್ ವೇರಿಯಂಟ್ ಆಯ್ಕೆ ಇವೆ. ಹಾಗೆಯೇ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸ್ಟೋರೇಜ್ ವಿಸ್ತರಿಸುವ ಸೌಲಭ್ಯ ಪಡೆದಿದೆ.
ವಿವೋ T3 5G ಫೋನ್ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಈ ಫೋನಿನ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ.
ವಿವೋ T3 5G ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 44W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಮೊಬೈಲ್ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸರ್ ಆಯ್ಕೆಗಳನ್ನು ಪಡೆದುಕೊಂಡಿದೆ.


Click it and Unblock the Notifications








