ಟಾಟಾಸ್ಕೈ ಬಿಂಜ್‌ ಪ್ಲಸ್‌ ಸೆಟ್‌ಅಪ್‌ ಬಾಕ್ಸ್‌ ಈಗ ಡಿಸ್ಕೌಂಟ್‌ನಲ್ಲಿ ಲಭ್ಯ!

|

ದೇಶದ ಡಿಟಿಎಚ್‌ ವಲಯದಲ್ಲಿ ಲೀಡಿಂಗ್‌ನಲ್ಲಿ ಕಾಣಿಸಿಕೊಂಡಿರುವ ಟಾಟಾಸ್ಕೈ ಸಂಸ್ಥೆಯು ಭಿನ್ನ ಆಯ್ಕೆಗಳಲ್ಲಿ ಸೆಟ್‌ಅಪ್‌ ಬಾಕ್ಸ್‌ ನೀಡಿದೆ. ಸದ್ಯ ಟಾಟಾಸ್ಕೈನ ಬಿಂಜ್ ಪ್ಲಸ್‌ ಸೆಟ್‌ಟಾಪ್‌ ಹೆಚ್ಚು ಟ್ರೆಂಡ್‌ನಲ್ಲಿದ್ದು, ಆಕರ್ಷಕ ಸೌಲಭ್ಯಗಳನ್ನು ಇದು ಒಳಗೊಂಡಿದೆ. ಇದೀಗ ಟಾಟಾಸ್ಕೈ ತನ್ನ ಬಿಂಜ್ ಪ್ಲಸ್‌ ಸೆಟ್‌ಅಪ್‌ ಬಾಕ್ಸ್‌ ದರದಲ್ಲಿ ಇಳಿಕೆ ಮಾಡಿದ್ದು, ಗ್ರಾಹಕರಿಗೆ ಸರ್‌ಪ್ರೈಸ್‌ ನೀಡಿದೆ.

ಟಾಟಾಸ್ಕೈ

ಟಾಟಾಸ್ಕೈ ಸಂಸ್ಥೆಯ ಟಾಟಾಸ್ಕೈ ಬಿಂಜ್ ಪ್ಲಸ್‌ ಸೆಟ್‌ಟಾಪ್‌ನ ಬೆಲೆಯಲ್ಲಿ ಇದೀಗ 1000ರೂ. ಇಳಿಕೆ ಆಗಿದ್ದು, ಹೊಸ ಗ್ರಾಹಕರಿಗೆ ಕೇವಲ 2999ರೂ.ಗಳಿಗೆ ಲಭ್ಯವಾಗಲಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ಗ್ರಾಹಕರುಗಳು ಮಲ್ಟಿ ಟಿವಿ ಕನೆಕ್ಷನ್‌ ಅನ್ನು 2,499ರೂ. ಗಳಿಗೆ ಪಡೆಯಬಹುದಾಗಿದೆ. ಇನ್ನು ಹೊಸದಾಗಿ ಈ ಡಿವೈಸ್‌ ಮಾರುಕಟ್ಟೆಗೆ ಲಾಂಚ್ ಆದಾಗ 5,999ರೂ. ಪ್ರೈಸ್‌ಟ್ಯಾಗ್‌ ಅನ್ನು ಹೊಂದಿತ್ತು.

ಟಾಟಾಸ್ಕೈ ಬಿಂಜ್ ಪ್ಲಸ್‌ ಸೌಲಭ್ಯಗಳು

ಟಾಟಾಸ್ಕೈ ಬಿಂಜ್ ಪ್ಲಸ್‌ ಸೌಲಭ್ಯಗಳು

ಟಾಟಾಸ್ಕೈ ಬಿಂಜ್ ಪ್ಲಸ್‌ ಸೆಟ್‌ಟಾಪ್‌ ಬಾಕ್ಸ್‌, ಸಾಮಾನ್ಯ ಡಿಟಿಎಚ್ ಸೆಟ್‌ಟಾಪ್‌ಗಳಿಗಿಂತ ಭಿನ್ನವಾಗಿದೆ. ಬಿಂಜ್ ಪ್ಲಸ್‌ ಸೆಟ್‌ಟಾಪ್‌ ಬಾಕ್ಸ್‌ನಲ್ಲಿ ಇಂಟರ್ನೆಟ್ ಆಧಾರಿತ ಸೇವೆಗಳು ದೊರೆಯುತ್ತವೆ. ಗೂಗಲ್ ಪ್ಲೇ ಸ್ಟೋರ್ ಸೌಲಭ್ಯ ಇರುತ್ತದೆ ಹಾಗೂ ಅಸಿಸ್ಟಂಟ್ ಅಸಿಸ್ಟಂಟ್ ಆಧಾರಿತ ವಾಯಿಸ್ ಸರ್ಚ್ ಆಯ್ಕೆಯು ಒಳಗೊಂಡಿರುತ್ತದೆ. ಹೀಗಾಗಿ ಸೆಟ್‌ಟಾಪ್‌ ಬಾಕ್ಸ್‌ ಅನ್ನು ವಾಯಿಸ್‌ ಮೂಲಕವೇ ನಿಯಂತ್ರಣ ಮಾಡಬಹುದಾಗಿದೆ.

OTT ಆಪ್ಸ್‌ ಸೌಲಭ್ಯ

OTT ಆಪ್ಸ್‌ ಸೌಲಭ್ಯ

ಟಾಟಾಸ್ಕೈ ಬಿಂಜ್ ಪ್ಲಸ್‌ ಸೆಟ್‌ಟಾಪ್‌ ಬಾಕ್ಸ್‌ ವಿಡಿಯೊ ಸ್ಟ್ರೀಮಿಂಗ್ ಒದಗಿಸುವ OTT ಆಪ್ಸ್‌ಗಳ ಸಪೋರ್ಟ್‌ ಒಳಗೊಂಡಿದೆ. ಹಾಟ್‌ಸ್ಟಾರ್, ಸನ್‌ನೆಕ್ಸ್ಟ್, ಎರೊಸ್ ನವ್, ಜೀ5 ಮತ್ತು ಹಂಗಾಮಾ ಪ್ಲಸ್‌ ಅಪ್ಲಿಕೇಶನ್ ಗಳ ಸೌಲಭ್ಯ ಇದೆ. ಈ ಆಪ್ಸ್‌ ಅತ್ಯುತ್ತಮ ವಿಡಿಯೊ ಕಂಟೆಂಟ್ ಅಪ್ಲಿಕೇಶನ್‌ಗಳಾಗಿವೆ. ಕೆಲವು ಲೈವ್ ವಿಡಿಯೊ ವೀಕ್ಷಣೆಗೂ ಅನುಕೂಲ ಒದಗಿಸಲಿವೆ.

ಇತರೆ ಸೌಲಭ್ಯಗಳು

ಇತರೆ ಸೌಲಭ್ಯಗಳು

ಟಾಟಾಸ್ಕೈ ಬಿಂಜ್ ಪ್ಲಸ್‌ ಸೆಟ್‌ಟಾಪ್‌ ಬಾಕ್ಸ್‌ ಸುಮಾರು 5000 ಅಪ್ಲಿಕೇಶನ್ ಹಾಗೂ ಗೇಮ್ಸ್‌ಗಳು ಗೂಗಲ್ ಆಪ್‌ನಲ್ಲಿ ಲಭ್ಯವಾಗಲಿವೆ. ಇನ್ನು ಈ ಸೆಟ್‌ಟಾಪ್‌ ಬಾಕ್ಸ್‌ 2GB RAM ಮತ್ತು 8GB ಸ್ಟೋರೇಜ್ ಸ್ಥಳಾವಕಾಶವನ್ನು ಪಡೆದಿದೆ. ಅಪ್ಲಿಕೇಶನ್ ಡೌನ್‌ಲೋಡ್‌ ಸಹ ಮಾಡಿಕೊಳ್ಳಬಹುದಾಗಿದೆ.

Most Read Articles
Best Mobiles in India

English summary
Tata Sky Binge+ multi-TV connection price has reportedly been reduced from Rs. 3,999 to Rs. 2,499.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X