TCL ಸಂಸ್ಥೆಯ TCL 10L, 105G, 10 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಬಹಿರಂಗ!
ಟೆಕ್ ವಲಯದಲ್ಲಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಟಿಸಿಎಲ್ ಕಂಪೆನಿ ಹೆಸರುವಾಸಿಯಾಗಿದೆ. ಈಗಾಗಲೇ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನದೇ ಆದ ಸಂಚಲನ ಸೃಷ್ಟಿಸಿದೆ. ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳ ಮೂಲಕ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ಸದ್ಯ ಇದೀಗ ತನ್ನ 10 ನೇ ಆವೃತ್ತಿಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆಗೊಳಿಸುವುದಾಗಿ ಘೊಷಣೆ ಮಾಡಿದೆ. ಅಷ್ಟೆ ಅಲ್ಲ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆಗಳನ್ನ ಹೊಂದಿರಲಿದೆ ಅನ್ನೊದನ್ನ ಸಹ ಬಹಿರಂಗ ಪಡಿಸಿದೆ.

ಹೌದು, ಜನಪ್ರಿಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿರುವ ಟಿಸಿಎಲ್ ಕಂಪೆನಿ ತನ್ನ 10ನೇ ಆವೃತ್ತಿಯ ಸ್ಮಾರ್ಟ್‌ಫೋ ನ್‌ಗಳನ್ನ ಬಿಡುಗಡೆಗೊಳಿಸುವುದಾಗಿ ಈ ಹಿಂದೆ ನಡೆದ CES2020 ರಲ್ಲಿ ಹೇಳಿಕೊಂಡಿತ್ತು. ಆದರಂತೆ ಇದೀಗ TCL 10L, 105G, 10 ಪ್ರೊ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್‌ಗಳೇನು ಅನ್ನೊದನ್ನ ಬಹಿರಂಗ ಪಡಿಸಿದೆ. ಅದರ ಪ್ರಕಾರ ಈ ಸ್ಮಾರ್ಟ್‌ಫೋನ್‌ಗಳು HDR10 ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಕಂಪೆನಿ ಹೇಳಿಕೊಂಡಿದೆ. ಸದ್ಯ ಟಿಸಿಎಲ್ ಕಂಪೆನಿ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಬನ್ನಿರಿ.

TCL 10ಪ್ರೊ ಡಿಸ್‌ಪ್ಲೇ
TCL 10 ಪ್ರೊ ಸ್ಮಾರ್ಟ್‌ಫೋನ್ 6.80-ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 1080p + ರೆಸಲ್ಯೂಶನ್ ಅನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು HDR10 ಅನ್ನು ಬೆಂಬಲಿಸಲಿದೆ. ಜೊತೆಗೆ ಹೆಚ್ಚುವರಿಯಾಗಿ, ಇದು ನೆಟ್‌ಫ್ಲಿಕ್ಸ್-ಪ್ರಮಾಣೀಕೃತ ಡಿಸ್‌ಪ್ಲೇ ಆಗಿದೆ. ಅಲ್ಲದೆ ಎಸ್‌ಡಿಆರ್-ಟು-ಎಚ್‌ಡಿಆರ್ ಟೋನ್ ಮ್ಯಾಪಿಂಗ್ ಮಾಡುವ ಎನ್‌ಎಕ್ಸ್ ಟಿವಿಷನ್ ಚಿಪ್ ಅನ್ನು ಹೊಂದಿದೆ. ಇನ್ನು ಟಿಸಿಎಲ್ ಸ್ಮಾರ್ಟ್‌ಫೋನ್ ಬಾಗಿದ ಡಿಸ್‌ಪ್ಲೇ ಮತ್ತು ವಾಟರ್‌ಡ್ರಾಪ್ ಶೈಲಿಯ ವಿನ್ಯಾಸವನ್ನ ಹೊಂದಿರಲಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 675 ಪ್ರೊಸೆಸರ್ ವೇಗವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಒಳಗೊಂಡಿದೆ. ಜೊತೆಗೆ ಮೆಮೊರಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶವನ್ನ ನೀಡಲಾಗಿದೆ.

ಕ್ಯಾಮೆರಾ
ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 16 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಕಡಿಮೆ ಬೆಳಕಿನ ಕ್ಯಾಮೆರಾ, ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 24 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾ ವನ್ನು ಸಹ ನೀಡಲಾಗಿದೆ.

ಟಿಸಿಎಲ್ 10 5G
ಈ ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್ಸಿಡಿ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 1080p + ರೆಸಲ್ಯೂಶನ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನ ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ ಎಚ್‌ಡಿಆರ್ 10 ಅನ್ನು ಸಹ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನ್ಯಾಪ್‌ಡ್ರಾಗನ್ 765G ಚಿಪ್‌ಸೆಟ್ ಪ್ರೊಸೆಸರ್ ಹೊಂದಿದ್ದು,ಅಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 6GB RAM + 128GB ಇಂಟರ್ ಸ್ಟೋರೇಜ್ ಅನ್ನು ಒಳಗೊಂಡಿದೆ. ಅಲ್ಲದೆ ಇದು ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾವೈಡ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಮ್ಯಾಕ್ರೋ ಕ್ಯಾಮೆರಾ ಹಾಗೂ ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಸಹ ಹೊಂದಿದೆ. ಜೊತೆಗೆ ಪಂಚ್‌ಹೋಲ್ ಮಾದರಿ ಹೊಂದಿರುವ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಟಿಸಿಎಲ್ 10 L
ಈ ಸ್ಮಾರ್ಟ್‌ಫೋನ್ 6.53-ಇಂಚಿನ ಎಲ್ಸಿಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 665 ಪ್ರೊಸೆಸರ್ ಹೊಂದಿದ್ದು, ಅಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೆ 6GB RAM ಮತ್ತು 128GB ಇಂಟರ್ ಸ್ಟೋರೆಜ್ ಸಾಮರ್ಥ್ಯವನ್ನ ಹೊಂದಿದೆ. ಇನ್ನು ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಜಿಎಂ 1 ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಮೂರು ಸ್ಮಾರ್ಟ್‌ಫೋನ್‌ಗಳಲ್ಲಿ TCL 10 ಪ್ರೊ ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ 3.0 ಅನ್ನು ಬೆಂಬಲಿಸುತ್ತದೆ. ಇನ್ನು TCL 105G ಸ್ಮಾರ್ಟ್‌ಫೋನ್ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ,. ಹಾಗೇಯೆ TCL 10L ಸ್ಮಾರ್ಟ್‌ಫೋನ್ ವೇಗದ ಚಾರ್ಜಿಂಗ್ ಬೆಂಬಲ ಇಲ್ಲದ 4,000 mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ಇನ್ನು TCL 10 ಪ್ರೊ ಸ್ಮಾರ್ಟ್‌ಫೋನ್ USD450 (ಸುಮಾರು 34,160 ರೂ.) ಬೆಲೆಯನ್ನ ಹೊಂದಿದೆ. ಹಾಗೇ TCL 10 5G ಸ್ಮಾರ್ಟ್‌ಫೋನ್ EUR400 ( ಸುಮಾರು 32,849. ರೂ,) ಬೆಲೆಯನ್ನ ಹೊಂದಿದೆ. ಇನ್ನು TCL 10L ಸ್ಮಾರ್ಟ್‌ಫೋನ್ EUR250( ಅಂದಾಜು 20,530.ರೂ,) ಬೆಲೆಯನ್ನ ಒಳಗೊಂಡಿರಲಿದೆ ಎನ್ನಲಾಗಿದೆ. ಹಾಗೇಯೆ ಈ ಸ್ಮಾರ್ಟ್‌ಫೋನ್‌ಗಳು ಇದೇ ವರ್ಷ ಎರಡನೇ ತ್ರೈಮಾಸಿಕದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗ್ತಿದೆ.


Click it and Unblock the Notifications




