Home
ಸುದ್ದಿಜಾಲ

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ TCL 505 ಸ್ಮಾರ್ಟ್‌ಫೋನ್‌: ಕ್ಯಾಮೆರಾ ಸೆಟಪ್‌ ಏನು?

ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ ಕಂಪೆನಿ TCL ಸದ್ದಿಲ್ಲದೆ ಹೊಸ ಮೊಬೈಲ್‌ ಪರಿಚಯಿಸಿದೆ. ಇದನ್ನು TCL 505 ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದ್ದು, ಕೈಗೆಟಕುವ ಬೆಲೆಯಲ್ಲಿ ಬರಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾಗಳನ್ನು ಹೊಂದಿದ್ದು, ಫ್ಲಾಟ್ ವಿನ್ಯಾಸವನ್ನು ಹೊಂದಿದೆ.

ಹೌದು, TCL 505 ಸ್ಮಾರ್ಟ್‌ಫೋನ್‌ ಜಾಗತಿಕ ಮಾರುಕಟ್ಟೆಯಲ್ಲಿ ಅನಾವರಣಗೊಂಡಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಬೆಂಬಲಿಸುವ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಜೊತೆಗೆ 5,010mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಹಾಗಾದ್ರೆ TCL 505 ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ TCL 505 ಫೋನ್‌: ಕ್ಯಾಮೆರಾ ಸೆಟಪ್‌ ಏನು

TCL 505 ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
TCL 505 ಸ್ಮಾರ್ಟ್‌ಫೋನ್‌ 6.75 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 400 ನಿಟ್ಸ್‌ ಬ್ರೈಟ್‌ನೆಸ್‌ನಲ್ಲಿದ್ದು, 85.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿದೆ. ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಹೊಂದಿದೆ.

TCL 505 ಪ್ರೊಸೆಸರ್‌ ಯಾವುದು?
TCL 505 ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G36 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಬಳಕೆದಾರರು RAM ಅನ್ನು ಹೆಚ್ಚುವರಿ 4GB ಯಷ್ಟು ಹೆಚ್ಚಿಸುವ ಆಯ್ಕೆಯನ್ನು ನೀಡಲಿದೆ. ಇದರೊಂದಿಗೆ ಮೈಕ್ರೊ SD ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ನೀಡಲಾಗಿದೆ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ TCL 505 ಫೋನ್‌: ಕ್ಯಾಮೆರಾ ಸೆಟಪ್‌ ಏನು

TCL 505 ಕ್ಯಾಮೆರಾ ಸೆಟಪ್‌
TCL 505 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ಯಾಮೆರಾ ಸಾಕಷ್ಟು ಅತ್ಯಾಕರ್ಷಕವಾಗಿದ್ದು, ಬಳಕೆದಾರರ ಗಮನಸೆಳೆಯುತ್ತಿದೆ. ಇದು ಮೊಬೈಲ್‌ ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನ ಮೂಡಿಸುವ ಸೂಚನೆ ನೀಡಿದೆ.

TCL 505 ಬ್ಯಾಟರಿ ಮತ್ತು ಇತರೆ
TCL 505 ಸ್ಮಾರ್ಟ್‌ಫೋನ್‌ 5,010mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 10W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಮೂಲಕ ಸಿಂಗಲ್‌ ಚಾರ್ಜ್‌ನಲ್ಲಿ ದಿನವಿಡೀ ಬ್ಯಾಕಪ್ ನೀಡಲಿದೆ ಎಂದು ಹೇಳಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಅನ್ನು ಹೊಂದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೋಮೀಟರ್‌, ಕಂಪಾಸ್‌ ಅನ್ನು ಹೊಂದಿದೆ. ಇದು ಮೀಡಿಯಾ ಪ್ಲೇಬ್ಯಾಕ್ ಟೈಂನಲ್ಲಿ ಹೆಚ್ಚು ತಲ್ಲೀನಗೊಳಿಸುವ ಆಡಿಯೊ ಅನುಭವಕ್ಕಾಗಿ ಫೋನ್ ಡ್ಯುಯಲ್ ಸ್ಪೀಕರ್‌ಗಳನ್ನು ಸಹ ಹೊಂದಿದೆ.

ಸದ್ದಿಲ್ಲದೆ ಮಾರುಕಟ್ಟೆಗೆ ಎಂಟ್ರಿ ಕೊಟ್ಟ TCL 505 ಫೋನ್‌: ಕ್ಯಾಮೆರಾ ಸೆಟಪ್‌ ಏನು

TCL 505 ಬೆಲೆ ಮತ್ತು ಲಭ್ಯತೆ
TCL 505 ಸ್ಮಾರ್ಟ್‌ಫೋನ್‌ ಬೆಲೆ ಎಷ್ಟಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್‌ ಕೈಗೆಟಕುವ ಬೆಲೆಯಲ್ಲಿ ಬರುವ ನಿರೀಕ್ಷೆಯಿದೆ. ಸದ್ಯ ಜಾಗತಿಕ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಭಾರತದ ಮಾರುಕಟ್ಟೆಗೆ ಯಾವಾಗ ಬರಲಿದೆ ಅನ್ನೊದು ತಿಳಿದುಬಂದಿಲ್ಲ. ಈ ಸ್ಮಾರ್ಟ್‌ಫೋನ್‌ ಬೆಲೆಯ ವಿವರಗಳು ಶೀಘ್ರದಲ್ಲೇ ಬಹಿರಂಗವಾಗುವ ಸಾಧ್ಯತೆಯಿದೆ. ಇದು ಓಷನ್ ಬ್ಲೂ ಮತ್ತು ಸ್ಪೇಸ್ ಗ್ರೇ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
TCL 505 smartphone with 5010mAh battery launched: Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+