ಬಜೆಟ್‌ ಬೆಲೆಯಲ್ಲಿ ಲಾಂಚ್ ಆಯ್ತು 'ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌!

|

ದೇಶಿಯ ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಅನೇಕ ಕಂಪನಿಗಳು ಎಂಟ್ರಿ ನೀಡಿವೆ. ಆದ್ರೆ, ಅವುಗಳಲ್ಲಿ ಕೆಲವು ಕಂಪನಿಗಳು ಮಾತ್ರ ಗ್ರಾಹಕರಿಂದ ಗುರುತಿಸಿಕೊಂಡಿವೆ. ಆ ಪೈಕಿ ಟೆಕ್ನೋ ಕಂಪನಿಯು ಸಹ ಒಂದಾಗಿದ್ದು, ಈಗಾಗಲೇ ಕೆಲವು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿದೆ. ಇದೀಗ ಕಂಪನಿಯು ಮತ್ತಷ್ಟು ಅಪ್‌ಡೇಟ್‌ ಫೀಚರ್ಸ್‌ಗಳಿರುವ ಹೊಸದೊಂದು ಸ್ಮಾರ್ಟ್‌ಫೋನ್‌ ಅನ್ನು ಬಜೆಟ್‌ ಬೆಲೆಯಲ್ಲಿ ಬಿಡುಗಡೆ ಮಾಡಿದೆ.

ಪಂಚ್ ಹೋಲ್ ಡಿಸ್‌ಪ್ಲೇ

ಹೌದು, ಟೆಕ್ನೋ ಕಂಪನಿಯು ಭಾರತೀಯ ಮಾರುಕಟ್ಟೆಗೆ ಹೊಸದಾಗಿ 'ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ ಅನ್ನು ಲಾಂಚ್ ಮಾಡಿದೆ. ಈ ಸ್ಮಾರ್ಟ್‌ ಫೋನ್ ಪಂಚ್ ಹೋಲ್ ಡಿಸ್‌ಪ್ಲೇ ಜೊತೆಗೆ ತ್ರಿವಳಿ ಕ್ಯಾಮೆರಾ ಫೀಚರ್ಸ್‌ಗಳನ್ನು ಒಳಗೊಂಡಿದ್ದು, 4,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿರುವುದು ವಿಶೇಷ. ಹಾಗೆಯೇ ಈ ಸ್ಮಾರ್ಟ್‌ಫೋನ್ 9,999ರೂ.ಗಳ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿದ್ದು, ಗ್ರಾಹಕರನ್ನು ಆಕರ್ಷಿಸಲಿದೆ. ಹಾಗಾದರೇ ಟೆಕ್ನೋ ಕ್ಯಾಮನ್ 12 ಏರ್‌ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ 720x1600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.55 ಇಂಚಿನ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದ್ದು, ಪಂಚ್ ಹೋಲ್ ಡಿಸ್‌ಪ್ಲೇ ಮಾದರಿಯನ್ನು ಹೊಂದಿದೆ. ಡಿಸ್‌ಪ್ಲೇಯ ಅನುಪಾತವು 20:9 ಆಗಿದ್ದು, ಡಿಸ್‌ಪ್ಲೇಯಿಂದ ಬಾಹ್ಯ ಬಾಡಿಯ ನಡುವಿನ ಅಂತರವು ಶೇ.90.3% ಆಗಿದೆ. ಡಿಸ್‌ಪ್ಲೇಯ ಬ್ರೈಟ್ನೆಸ್‌ 500 nits ಸಾಮರ್ಥ್ಯವನ್ನು ಹೊಂದಿದ್ದು, ಪ್ರಖರತೆಯು ಉತ್ತಮವಾಗಿದೆ.

ಪ್ರೊಸೆಸರ್‌ ವೇಗ

ಪ್ರೊಸೆಸರ್‌ ವೇಗ

ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ P22 ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 9 ಪೈ ಓಎಸ್‌ ಬೆಂಬಲ ನೀಡಲಾಗಿದೆ. 4GB RAM + 64GB ಸ್ಟೋರೇಜ್‌ನ ಒಂದೇ ವೇರಿಯಂಟ್‌ ಆಯ್ಕೆಯನ್ನು ಹೊಂದಿದ್ದು, ಬಾಹ್ಯ ಮೆಮೊರಿ ಸಂಗ್ರಹಕ್ಕಾಗಿ ಎಸ್‌ಡಿ ಕಾರ್ಡ್‌ ಮೂಲಕ 128GB ವರೆಗೂ ವಿಸ್ತರಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಮೂರು ಕ್ಯಾಮೆರಾ

ಮೂರು ಕ್ಯಾಮೆರಾ

ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ ಮೂರು ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು f/1.8 ಅಪರ್ಚರ್‌ನೊಂದಿಗೆ 16ಎಂಪಿ ಸೆನ್ಸಾರ್‌ ಪಡೆದಿದೆ. ಸೆಕೆಂಡರಿ ಕ್ಯಾಮೆರಾವು 2.5cm ಮೈಕ್ರೋ ಶೂಟ್‌ ಸಾಮರ್ಥ್ಯದ 2ಎಂಪಿ ಸೆನ್ಸಾರ್‌ನಲ್ಲಿದೆ ಇನ್ನು ತೃತೀಯ ಕ್ಯಾಮೆರಾವು ವೈಲ್ಡ್‌ ಆಂಗಲ್ ಲೆನ್ಸ್‌ ಒಳಗೊಂಡ 5ಎಂಪಿ ಸೆನ್ಸಾರ್‌ನಲ್ಲಿದೆ. ಹಾಗೆಯೇ ಸೆಲ್ಫಿಗಾಗಿ AI ಆಧಾರಿತ 16ಎಂಪಿ ಕ್ಯಾಮೆರಾ ನೀಡಲಾಗಿದೆ.

ಬ್ಯಾಟರಿ ಲೈಫ್

ಬ್ಯಾಟರಿ ಲೈಫ್

ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ 4,000mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಅತ್ಯುತ್ತಮ ಚಾರ್ಜರ್ ಸೌಲಭ್ಯವನ್ನು ನೀಡಲಾಗಿದೆ. ಸುಮಾರು 12ಗಂಟೆಗಳ ವಿಡಿಯೊ ಪ್ಲೇ ಬ್ಯಾಕ್‌ ಒದಗಿಸುವ ಸಾಮರ್ಥ್ಯವನ್ನು ಬ್ಯಾಟರಿ ಹೊಂದಿದೆ. ಇನ್ನುಳಿದಂತೆ ಬ್ಲೂಟೂತ್, ವೈಫೈ, 3.5ಎಂಎಂ ಆಡಿಯೊ ಜಾಕ್, ಆಯಂಟಿ ಆಯಲ್‌ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಕ್ಯಾಮನ್ 12 ಏರ್‌' ಸ್ಮಾರ್ಟ್‌ಫೋನ್‌ 4GB RAM + 64GB ವೇರಿಯಂಟ್‌ 9,999ರೂ.ಗಳಿಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಬ್ಲೂ ಮತ್ತು ಸ್ಟೆಲ್ಲರ್ ಪರ್ಪಲ್ ಬಣ್ಣಗಳ ಆಯ್ಕೆಗಳನ್ನು ಹೊಂದಿದೆ. ಆಫ್‌ಲೈನ್ ಸ್ಟೋರ್‌ಗಳಲ್ಲಿ ಖರೀದಿಗೆ ದೊರೆಯುತ್ತದೆ.

Best Mobiles in India

English summary
Tecno Camon 12 Air features a 6.55-inch HD+ dot-in display with 20:9 aspect ratio. to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X