Home
ಸುದ್ದಿಜಾಲ

ಶೀಘ್ರದಲ್ಲೇ ಎಂಟ್ರಿ ಕೊಡಲಿದೆ ಟೆಕ್ನೋ ಕ್ಯಾಮನ್‌15 ಸ್ಮಾರ್ಟ್‌ಫೋನ್‌!

ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಯಾವಾಗಲೂ ಆಕ್ಟಿವ್‌ ಆಗಿರುತ್ತೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಗುತ್ತಲೇ ಇರುತ್ತೆ. ಇದೀಗ ಟೆಕ್ನೋ ಸ್ಮಾರ್ಟ್‌ಫೋನ್‌ ಕಂಪೆನಿ ಭಾರತದಲ್ಲಿ ತನ್ನ ಕ್ಯಾಮನ್ ಆವೃತ್ತಿಯಲ್ಲಿ ಹೊಸ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದೇ ಫೆಬ್ರವರಿ 20 ರಂದು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡುವ ಪ್ಲ್ಯಾನ್‌ ರೂಪಿಸಿಕೊಂಡಿದ್ದು, ಲಾಂಚ್‌ ಕಾರ್ಯಕ್ರಮಕ್ಕಾಗಿ ಆಹ್ವಾನ ಪತ್ರಿಕೆಗಳನ್ನ ಕಳುಹಿಸಿದೆ.

ಹೌದು

ಹೌದು, ಹಾಂಗ್‌ಕಾಂಗ್‌ ಮೂಲದ ಟೆಕ್ನೋ ಸ್ಮಾರ್ಟ್‌ಫೋನ್‌ ಕಂಪೆನಿ ತನ್ನ ಹೊಸ ಕ್ಯಾಮನ್‌15 ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಕುರಿತು ಟೀಸರ್‌ ಒಂದನ್ನ ಬಿಡುಗಡೆ ಮಾಡಿದ್ದು, ಟೀಸರ್‌ನಲ್ಲಿ "ನೈಟ್ ಈಸ್ ನಾಟ್ ಡಾರ್ಕ್" ಅನ್ನುವ ಟ್ಯಾಗ್‌ಲೈನ್‌ ನೀಡಲಾಗಿದೆ. ಅಂದರೆ ಈ ಹೊಸ ಸ್ಮಾರ್ಟ್‌ಫೋನ್‌ ನೈಟ್‌ಮೋಡ್‌ ಹೊಂದಿರುವ ಕ್ಯಾಮೆರಾ ಫೀಚರ್ಸ್‌ ನಲ್ಲಿ ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿ.

ಡಿಸ್‌ಪ್ಲೇ ವಿನ್ಯಾಸ

ಡಿಸ್‌ಪ್ಲೇ ವಿನ್ಯಾಸ

ಟೆಕ್ನೊ ಕ್ಯಾಮನ್‌15 ಸ್ಮಾರ್ಟ್‌ಫೋನ್‌ 720 x 1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಹೊಂದಿರುವ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಪಂಚ್‌ ಹೋಲ್‌ ವಿನ್ಯಾಸದ ಡಿಸ್‌ಪ್ಲೇ ಆಗಿದ್ದು, 270PPI ಪಿಕ್ಸೆಲ್‌ ಸಾಂದ್ರತೆಯನ್ನ ಒಳಗೊಂಡಿದೆ. ಜೊತೆಗೆ ಇದು ಐಪಿಎಸ್‌ ಎಲ್‌ಸಿಡಿ ಡಿಸ್‌ಪ್ಲೇ ಆಗಿದ್ದು, ಕ್ಯಾಪಸಿಟಿವ್‌ ಟಚ್‌ಸ್ಕ್ರೀನ್‌ ಹಾಗೂ ಮಲ್ಟಿಟಚ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 665 ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಅಲ್ಲದೆ ಇದು 2 GHz, ಕ್ವಾಡ್ ಕೋರ್,ಅನ್ನು ಹೊಂದಿದ್ದು ಉತ್ತಮ ವೇಗವನ್ನ ಹೊಂದಿದೆ. ಜೊತೆಗೆ 3GB RAM ಮತ್ತು 32GB ಶೇಖರಣಾ ಸಾಮರ್ಥ್ಯವನ್ನು ಹೊಂದಿದ್ದು, ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮಾದರಿ

ಕ್ಯಾಮೆರಾ ಮಾದರಿ

ಟೆಕ್ನೊ ಕ್ಯಾಮನ್‌15 ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಆಪ್‌ ಹೊಂದಿದೆ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ ಮೊದಲನೇ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಡಿಜಿಟಲ್ ಜೂಮ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌, ವೈಡ್ ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌, ಅಲ್ಟ್ರಾ-ವೈಡ್ ಆಂಗಲ್ ಸೆನ್ಸಾರ್‌ ಹಾಗೂ ನಾಲ್ಕನೇ ಕ್ಯಾಮೆರಾ 2ಮೆಗಾ ಪಿಕ್ಸೆಲ್‌ ಡೆಪ್ತ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ. ಜೊತೆಗೆ 8ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್‌ 4000 mAh ಬ್ಯಾಟರಿ ಪ್ಯಾಕ್‌ ಆಪ್‌ ಹೊಂದಿರುವ ನಿರೀಕ್ಷೆ ಇದ್ದು, ವೇಗದ ಚಾರ್ಜಿಂಗ್‌ ಬೆಂಬಲದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇನ್ನ ಈ ಸ್ಮಾರ್ಟ್‌ಫೊನ್‌ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್‌ 5.0, ಹಾಟ್‌ಸ್ಪಾಟ್‌, ವೈಫೈ, ಮೈಕ್ರೋ ಯುಎಸ್‌ಬಿ 2.0 ಅನ್ನು ಬೆಂಬಲಿಸಲಿದೆ. ಜೊತೆಗೆ ಲೈಟ್‌ ಸೆನ್ಸಾರ್‌, ಪ್ರಾಕ್ಷಿಮಿಟಿ ಸೆನ್ಸಾರ್‌, ಆಕ್ಸೆಲೆರೋಮೀಟರ್‌ ಸೆನ್ಸಾರ್‌ ಅನ್ನು ಒಳಗೊಂಡಿದೆ.

ಬೆಲೆ

ಬೆಲೆ

ಸದ್ಯ ಈ ಸ್ಮಾರ್ಟ್‌ಫೋನ್‌ ಫೆಬ್ರವರಿ 20ರಂದು ಬಿಡುಗಡೆಯಾಗಲಿದ್ದು, ಬಜೆಟ್‌ ಬೆಲೆಯ ಶ್ರೇಣಿಯಲ್ಲಿ ಈ ಸ್ಮಾರ್ಟ್‌ಫೋನ್‌ ಲಭ್ಯವಾಗುವ ಸಾಧ್ಯತೆ ಇದೆ. ಲಭ್ಯ ಮಾಹಿತಿ ಪ್ರಕಾರ ಈ ಸ್ಮಾರ್ಟ್‌ಫೋನ್‌ 10,000ರೂ ಒಳಗಿನ ಬೆಲೆಯಲ್ಲಿ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Tecno Camon 15 could be a sub-Rs 10,000 smartphone with punch-hole display and 48-megapixel quad camera setup.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+