ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ ಲಾಂಚ್!
ಅಗ್ಗದ ಬೆಲೆಯಲ್ಲಿನ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದ್ದೇ ಇದೆ. ಅಗ್ಗದ ಫೋನ್‌ಗಳನ್ನು ಪರಿಚಯಿಸುವ ಕಂಪನಿಗಳ ಪೈಕಿ ಟೆಕ್ನೋ ಸಹ ಒಂದಾಗಿದೆ. ಈ ಸಂಸ್ಥೆಯು ಈಗಾಗಲೇ ಕಡಿಮೆ ಬೆಲೆಯಲ್ಲಿ ಹಲವು ಫೋನ್‌ಗಳನ್ನು ಪರಿಚಯಿಸಿದ್ದು, ಇದೀಗ ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 48ಎಂಪಿ ಕ್ಯಾಮೆರಾ ಪಡೆದಿದೆ.

ಹೌದು, ಟೆಕ್ನೊ ಕಂಪೆನಿ ಹೊಸದಾಗಿ ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದ್ದು, ಮೀಡಿಯಾ ಟೆಕ್ ಹಿಲಿಯೊ G90T ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 8GB + 128GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಇತರೆ ಯಾವೆಲ್ಲಾ ಫೀಚರ್ಸ್ ಹೊಂದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಡಿಸ್‌ಪ್ಲೇ ಮಾದರಿ
ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ 1,080x2,460 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯ ದೊಂದಿಗೆ 6.9 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯು ಪಿಪಿಐ ಸ್ಕ್ರೀನ್ ರೆಸಲ್ಯೂಶನ್ ಹೊಂದಿದ್ದು, ವಿಡಿಯೋ ವೀಕ್ಷಣೆಯಲ್ಲಿ ಉತ್ತಮ ಅನುಭವ ನೀಡಲಿದೆ.

ಪ್ರೊಸೆಸರ್ ಬಲ
ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G90T ಪ್ರೊಸೆಸರ್ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB + 128GB ವೇರಿಯಂಟ್ ಆಯ್ಕೆಯನ್ನು ಪಡೆದಿದೆ.

ಕ್ಯಾಮೆರಾ ವಿನ್ಯಾಸ
ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ , ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್, ಮೂರನೇ ಮತ್ತು ನಾಲ್ಕನೇ ಕ್ಯಾಮೆರಾ 2-ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಅನ್ನು ಒಳಗೊಂಡಿದೆ. ಡ್ಯುಯಲ್ ಸೆಲ್ಫಿ ಕ್ಯಾಮೆರಾ ಇದ್ದು, ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೂ ಎರಡನೇ ಕ್ಯಾಮೆರಾ 8 ಎಂಪಿ ಸೆನ್ಸಾರ್‌ನಲ್ಲಿದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಆಪ್ ಹೊಂದಿದ್ದು, ಇದರೊಂದಿಗೆ 33W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಈ ಎರಡು ಸ್ಮಾರ್ಟ್‌ಫೋನ್‌ಗಳು ಬ್ಲೂಟೂತ್, ಹಾಟ್‌ಸ್ಪಾರ್ಟ್, ವೈಫೈ, ಯುಎಸ್‌ಬಿ ಟೈಪ್‌ಸಿ ಪೋರ್ಟ್ ಅನ್ನು ಬೆಂಬಲಿಸಲಿವೆ.


Click it and Unblock the Notifications








