ಟೆಕ್ನೋ ಕ್ಯಾಮನ್‌ 16 ಪ್ರೀಮಿಯರ್‌ ಸ್ಮಾರ್ಟ್‌ಫೋನ್‌! ಡ್ಯುಯೆಲ್‌ ಸೆಲ್ಫಿ ವಿಶೇಷ!

|

ಟೆಕ್ನೋ ಸ್ಮಾರ್ಟ್‌ಫೋನ್‌ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಇದೀಗ ತನ್ನ ಹೊಸ ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಡ್ಯುಯಲ್ ಸೆಲ್ಫಿ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ತನ್ನ ಟೆಕ್ನೋ ಕ್ಯಾಮನ್‌ 16 ಪ್ರೀಮಿಯರ್‌ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇದು 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದಲ್ಲದೆ ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ 6.9-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ 1,080x2,460 ಪಿಕ್ಸೆಲ್‌ ಸಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.85-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮಾತ್ರೆ ಆಕಾರದ ಪಂಚ್ ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20.5: 9 ರಚನೆಯ ಅನುಪಾತ ಮತ್ತು 480 ನಿಟ್ಸ್ ಗರಿಷ್ಠ ಬ್ರೈಟ್‌ನೆಶ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು 2.05GHz ಮೀಡಿಯಾಟೆಕ್ ಹಿಲಿಯೊ G 90T ಆಕ್ಟಾ-ಕೋರ್ SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ HIOS v7 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇದು 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಬಳಸಿ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾ, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು 2 ಮೆಗಾಪಿಕ್ಸೆಲ್ ಲೋ ಕ್ವಾಡ್-ಎಲ್ಇಡಿ ಫ್ಲ್ಯಾಷ್‌-ಲೈಟ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 48 ಮೆಗಾಪಿಕ್ಸೆಲ್ ಪ್ರೈಮರಿ ಸೆನ್ಸಾರ್‌ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇದಲ್ಲದೆ, ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ 4,500mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ 5, ವೈ-ಫೈ, 3.5mm ಆಡಿಯೊ ಜ್ಯಾಕ್, ಜಿಪಿಎಸ್ ಅನ್ನು ಬೆಂಬಲಿಸಲಿದೆ. ಜೊತೆಗೆ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಕ್ಯಾಮನ್ 16 ಪ್ರೀಮಿಯರ್ ಸ್ಮಾರ್ಟ್‌ಫೋನ್‌ ಭಾರತದಲ್ಲಿ 16,999 ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಗ್ಲೇಸಿಯರ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇದು ಜನವರಿ 16 ರಂದು ಮಧ್ಯಾಹ್ನ 12 ಗಂಟೆಗೆ (ಮಧ್ಯಾಹ್ನ) ಫ್ಲಿಪ್ಕಾರ್ಟ್ ಮೂಲಕ ಮಾರಾಟವಾಗಲಿದೆ.

Best Mobiles in India

English summary
Tecno Camon 16 Premier will go on sale via Flipkart on January 16.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X