Home
ಸುದ್ದಿಜಾಲ

ಭಾರತದಲ್ಲಿ ಟೆಕ್ನೋ ಕ್ಯಾಮನ್ 16 ಸ್ಮಾರ್ಟ್‌ಫೋನ್‌ ಬಿಡುಗಡೆ!ಬೆಲೆ 10,999 ರೂ!

ಟೆಕ್ನೋ ಸಂಸ್ಥೆ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಈಗಾಗಲೇ ಹಲವು ಸರಣಿಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿರುವ ಟೆಕ್ನೋ ಸಂಸ್ಥೆ ಇದೀಗ ತನ್ನ ಹೊಸ ಟೆಕ್ನೋ ಕ್ಯಾಮನ್ 16 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ ಇದು ಪಂಚ್-ಹೋಲ್‌ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದೆ.

ಟೆಕ್ನೋ

ಹೌದು, ಟೆಕ್ನೋ ಸಂಸ್ಥೆ ತನ್ನ ಹೊಸ ಟೆಕ್ನೋ ಕ್ಯಾಮನ್ 16 ಸ್ಮಾರ್ಟ್‌ಫೋನ್‌ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇದು ಮೀಡಿಯಾ ಟೆಕ್ ಹಿಲಿಯೊ G79 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4GB RAM+64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನು ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ಇನ್ನು ಈ ಸ್ಮಾರ್ಟ್‌ಫೋನ್ 1080 x 2340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇದು 6.8-ಇಂಚಿನ HD+ ಪಂಚ್ ಹೋಲ್‌ ಡಿಸ್‌ಪ್ಲೇಯನ್ನು ಹೊಂದಿದೆ. ಅಲ್ಲದೆ ಈ ಡಿಸ್‌ಪ್ಲೇ ಶೇಕಡಾ ಸ್ಕ್ರೀನ್-ಟು-ಬಾಡಿ 89.1 ಅನುಪಾತವನ್ನು ಹೊಂದಿದೆ.

ಪ್ರೊಸೆಸರ್‌ ಬಲ

ಪ್ರೊಸೆಸರ್‌ ಬಲ

ಟೆಕ್ನೋ ಕ್ಯಾಮನ್ 16 ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಹಿಲಿಯೊ G79 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ಹಿಯೋಸ್ 7.0 ಆಪರೇಟಿಂಗ್ ಸಿಸ್ಟಂನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೇಯೇ 4GB RAM+64GB ಇಂಟರ್‌ ಸ್ಟೋರೇಜ್‌ ಅನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ನಾಲ್ಕನೇ ಕ್ಯಾಮೆರಾ ಎಐ ಲೆನ್ಸ್ ಹೊಂದಿದೆ. ಇದರೊಂದಿಗೆ AI ಫ್ಲ್ಯಾಷ್ ಇರುತ್ತದೆ. ಅಲ್ಲದೆ ಆಟೋ ಐ ಫೋಕಸಿಂಗ್, ವಿಡಿಯೋ ಬೊಕೆ, 2 ಕೆ ಕ್ಯೂಹೆಚ್‌ಡಿ ವಿಡಿಯೋ ಬೆಂಬಲ, ಮತ್ತು ನೈಟ್ ಪೋರ್ಟ್ರೇಟ್, ಸೂಪರ್ ನೈಟ್ ಶಾಟ್, ಮ್ಯಾಕ್ರೋ, ಬಾಡಿ ಶೇಪಿಂಗ್, 10Xಕ್ಸ್ ಜೂಮ್, ಸ್ಲೋ ಮೋಷನ್ ನಂತಹ ಪ್ರೊ ಫೋಟೋಗ್ರಫಿ ಮೋಡ್‌ಗಳನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಕ್ಯಾಮನ್ 16 ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಅಲ್ಲದೆ ಇದು 29 ದಿನಗಳ ಸ್ಟ್ಯಾಂಡ್‌ಬೈ ಟೈಂ, 34 ಗಂಟೆಗಳ ಕಾಲ್‌ ಟೈಂ, 16 ಗಂಟೆಗಳ ವೆಬ್ ಬ್ರೌಸಿಂಗ್, 22 ಗಂಟೆಗಳ ವೀಡಿಯೊ ಪ್ಲೇಬ್ಯಾಕ್, 15 ಗಂಟೆಗಳ ಗೇಮ್ ಪ್ಲೇಯಿಂಗ್ ಮತ್ತು 180 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಅನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಬ್ಲೂಟೂತ್‌, ವೈಫೈ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಕ್ಯಾಮನ್‌ 16 ಸ್ಮಾರ್ಟ್‌ಫೋನ್‌ 10,999 ರೂ. ಬೆಲೆಯನ್ನು ಹೊಂದಿದೆ. ಇದು ಇದೇ ಅಕ್ಟೋಬರ್ 16 ರಿಂದ ಫ್ಲಿಪ್ಕಾರ್ಟ್‌ನ ಬಿಗ್ ಬಿಲಿಯನ್ ಡೇಸ್ ಸೇಲ್‌ ಸಮಯದಲ್ಲಿ ಮೊದಲು ಲಭ್ಯವಿರುತ್ತದೆ. ಇದು ಕ್ಲೌಡ್ ವೈಟ್ ಮತ್ತು ಪ್ಯೂರಿಸ್ಟ್ ಬ್ಲೂ ಎಂಬ ಎರಡು ಬಣ್ಣಗಳಲ್ಲಿ ಮಾರಾಟವಾಗಲಿದೆ.

Best Mobiles in India

English summary
Tecno Camon 16 has launched in India as the latest smartphone offering in the company. The new phone comes with a quad rear camera setup with a 64-megapixel main sensor.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+