ಭಾರತದಲ್ಲಿ ಟೆಕ್ನೋ ಕ್ಯಾಮನ್ 17 ಪ್ರೊ ಮತ್ತು ಕ್ಯಾಮನ್ 17 ಸ್ಮಾರ್ಟ್‌ಫೋನ್ ಲಾಂಚ್!
ಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ನೋ ಕಂಪೆನಿ ಪ್ರಸಿದ್ಧಿ ಪಡೆದುಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸ್ಮಾರ್ಟ್‌ಫೋನ್ ಪ್ರಿಯರ ಮನಗೆದ್ದಿದೆ. ಸದ್ಯ ಇದೀಗ ಭಾರತದಲ್ಲಿ ಟೆಕ್ನೋ ಕ್ಯಾಮನ್ 17 ಪ್ರೊ ಮತ್ತು ಟೆಕ್ನೋ ಕ್ಯಾಮನ್ 17 ಫೋನ್‌ಗಳು ಬಿಡುಗಡೆಯಾಗಿವೆ. ಇನ್ನು ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿವೆ.

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಕ್ಯಾಮನ್ 17 ಪ್ರೊ ಮತ್ತು ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದರಲ್ಲಿ ಟೆಕ್ನೋ ಕ್ಯಾಮನ್ 17 ಪ್ರೊ 48 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದ್ದರೆ, ಟೆಕ್ನೋ ಕ್ಯಾಮನ್ 17 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಟೆಕ್ನೋ 17ಪ್ರೊ ಸ್ಮಾರ್ಟ್‌ಫೋನ್ ಹಿಲಿಯೊ G95 SoC ಮತ್ತು ಟೆಕ್ನೋ ಕ್ಯಾಮನ್ 17 ಹಿಲಿಯೊ G85 SoC ಪ್ರೊಸೆಸರ್ ಪಡೆದುಕೊಂಡಿದೆ. ಇನ್ನುಳಿದಂತೆ ಈ ಎರಡು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಕ್ಯಾಮನ್ 17 ಪ್ರೊ ಡಿಸ್‌ಪ್ಲೇ
ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್ 1,080x2,460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.8-ಇಂಚಿನ ಫುಲ್ ಹೆಚ್‌ಡಿ + ಐಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 180Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 20.5:9 ರಚನೆಯ ಅನುಪಾತವನ್ನು ಒಳಗೊಂಡಿದೆ.

ಟೆಕ್ನೋ ಕ್ಯಾಮನ್ 17 ಪ್ರೊ ಪ್ರೊಸೆಸರ್
ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು ಟೆಕ್ನೋ ಡ್ಯುಯಲ್ ಫ್ಲ್ಯಾಷ್ ಬೆಂಬಲವನ್ನು ನೀಡುತ್ತದೆ.

ಬ್ಯಾಟರಿ ಮತ್ತು ಇತರೆ
ಟೆಕ್ನೋ ಕ್ಯಾಮನ್ 17 ಪ್ರೊ ಸ್ಮಾರ್ಟ್‌ಫೋನ್ 5,000WAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 37 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ನೀಡುತ್ತದೆ ಎಂದು ಹೇಳಲಾಗಿದೆ. ಈ ಫೋನ್ ಸೈಡ್-ಮೌಂಟೆಡ್ ಫಿಂಗರ್ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4ಜಿ ಎಲ್ ಟಿಇ, ವೈ-ಫೈ (2.4GHz ಮತ್ತು 5GHz), ಬ್ಲೂಟೂತ್ ವಿ 5, ಅನ್ನು ಬೆಂಬಲಿಸಲಿದೆ.

ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್
ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಹೊಳಪನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಹಿಯೋಸ್ ವಿ 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 6 GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ಟೆಕ್ನೋ ಕ್ಯಾಮನ್ 17 ಪ್ರೊ ಭಾರತದಲ್ಲಿ ಏಕೈಕ 8GB RAM + 128GB ಶೇಖರಣಾ ಮಾದರಿಗೆ 16,999 ರೂ.ಬೆಲೆ ಹೊಂದಿದೆ. ಇದು ಒಂದೇ ಆರ್ಕ್ಟಿಕ್ ಡೌನ್ ಬಣ್ಣ ಆಯ್ಕೆಯಲ್ಲಿ ಬರುತ್ತದೆ. ಇನ್ನು ಲಾಂಚ್ ಆಫರ್‌ಗಳಲ್ಲಿ ರೂ. 1,999 ಕ್ಯಾಶ್‌ಬ್ಯಾಕ್ ದೊರೆಯಲಿದೆ. ಇಎಂಐಗಳನ್ನು ಒಳಗೊಂಡಂತೆ ಎಚ್‌ಡಿಎಫ್‌ಸಿ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್ ವಹಿವಾಟಿನ ಮೇಲೆ 10 ಪ್ರತಿಶತದಷ್ಟು ತ್ವರಿತ ರಿಯಾಯಿತಿ ದೊರೆಯಲಿದೆ.
ಇನ್ನು ಟೆಕ್ನೋ ಕ್ಯಾಮನ್ 17 ಭಾರತದಲ್ಲಿ ಏಕೈಕ 6GB RAM + 128GB ಶೇಖರಣಾ ಮಾದರಿಗೆ 12,999 ರೂ. ಬೆಲೆ ಹೊಂದಿದೆ. ಇದು ಫ್ರಾಸ್ಟ್ ಸಿಲ್ವರ್, ಸ್ಪ್ರೂಸ್ ಗ್ರೀನ್ ಮತ್ತು ಮ್ಯಾಗ್ನೆಟ್ ಬ್ಲ್ಯಾಕ್ ಎಂಬ ಮೂರು ಬಣ್ಣಗಳಲ್ಲಿ ಬರುತ್ತದೆ. ಲಾಂಚ್ ಕೊಡುಗೆಗಳಲ್ಲಿ ಎಚ್‌ಡಿಎಫ್‌ಸಿ ಡೆಬಿಟ್ ಮತ್ತು ಇಎಂಐಗಳನ್ನು ಒಳಗೊಂಡಂತೆ ಕ್ರೆಡಿಟ್ ಕಾರ್ಡ್ ವಹಿವಾಟಿನ ಮೇಲೆ ಶೇಕಡಾ 10 ರಷ್ಟು ತ್ವರಿತ ರಿಯಾಯಿತಿ ಇರುತ್ತದೆ. ಈ ಎರಡೂ ಫೋನ್‌ಗಳ ಮಾರಾಟ ಜುಲೈ 26 ರಿಂದ ಪ್ರಾರಂಭವಾಗಲಿದೆ.


Click it and Unblock the Notifications








