ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್‌ ಸರಣಿ ಬಿಡುಗಡೆ!..ವಿಶೇಷತೆ ಏನು?

|

ಅಗ್ಗದ ಬೆಲೆಯ ಮೊಬೈಲ್‌ಗಳ ಮೂಲಕ ಗುರುತಿಸಿಕೊಂಡಿರುವ ಟೆಕ್ನೋ ಸಂಸ್ಥೆಯ ಕೆಲವು ಸ್ಮಾರ್ಟ್‌ಫೋನ್ ಸರಣಿಗಳು ಜನಪ್ರಿಯವಾಗಿವೆ. ಆ ಪೈಕಿ ಕ್ಯಾಮನ್ ಫೋನ್ ಸರಣಿಯು ಒಂದಾಗಿದೆ. ಕಂಪನಿಯು ಈ ಸರಣಿಯಲ್ಲಿ ಈಗಾಗಲೇ ಕ್ಯಾಮನ್ 15 ಮತ್ತು ಕ್ಯಾಮನ್ 16 ಸರಣಿಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಸೈ ಅನಿಸಿಕೊಂಡಿದೆ. ಅದರ ಬೆನ್ನಲೇ ಈಗ ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ ಸರಣಿಯನ್ನು ಲಾಂಚ್ ಮಾಡಿದೆ.

ನೂತನವಾಗಿ

ಹೌದು, ಟೆಕ್ನೋ ಮೊಬೈಲ್ ಸಂಸ್ಥೆಯು ನೂತನವಾಗಿ ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್‌ ಸರಣಿಯನ್ನು ಈಗ ನೈಜೇರಿಯಾ ಮಾರುಕಟ್ಟೆಗೆ ಅನಾವರಣ ಮಾಡಿದೆ. ಈ ಸ್ಮಾರ್ಟ್‌ಫೋನ್ ಸರಣಿಯು ಒಟ್ಟು ಮೂರು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಒಳಗೊಂಡಿದ್ದು, ಅವುಗಳು ಕ್ರಮವಾಗಿ ಕ್ಯಾಮನ್ 17 ಪ್ರೊ, ಕ್ಯಾಮನ್ 17P ಮತ್ತು ಕ್ಯಾಮನ್ 17 ಆಗಿವೆ. ಈ ಮೂರು ಫೋನ್‌ಗಳು ಬಹುತೇಕ ಸಾಮ್ಯತೆಯ ಫೀಚರ್ಸ್‌ ಹೊಂದಿದ್ದರೂ, ಕೆಲವು ವೈಶಿಷ್ಟ್ಯಗಳಲ್ಲಿ ಭಿನ್ನತೆಗಳನ್ನು ಹೊಂದಿವೆ. ಹಾಗಾದರೆ ಟೆಕ್ನೋ ಕ್ಯಾಮನ್ 17 ಸ್ಮಾರ್ಟ್‌ಫೋನ್ ಸರಣಿಯ ಫೋನ್‌ಗಳ ಫೀಚರ್ಸ್‌ಗಳ ಬಗ್ಗೆ ಮುಂದೆ ನೋಡೋಣ ಬನ್ನಿರಿ.

ಟೆಕ್ನೋ ಕ್ಯಾಮನ್ 17 ಪ್ರೊ - ಫೀಚರ್ಸ್‌

ಟೆಕ್ನೋ ಕ್ಯಾಮನ್ 17 ಪ್ರೊ - ಫೀಚರ್ಸ್‌

ಹೊಸ ಟೆಕ್ನೋ ಕ್ಯಾಮನ್ 17 ಪ್ರೊ ಫೋನ್ 1080x2469 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.8 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಫೋನ್ ಡಿಸ್‌ಪ್ಲೇಯ ರೀಫ್ರೇಶ್ ರೇಟ್ 90Hz ಆಗಿದೆ. ಹಾಗೆಯೇ ಸ್ಕ್ರೀನಿನ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿದೆ ಹಾಗೂ ಡಿಸ್‌ಪ್ಲೇಯು 500 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G95 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ.

ಟೆಕ್ನೋ ಕ್ಯಾಮನ್ 17P - ಫೀಚರ್ಸ್‌

ಟೆಕ್ನೋ ಕ್ಯಾಮನ್ 17P - ಫೀಚರ್ಸ್‌

ಹೊಸ ಟೆಕ್ನೋ ಕ್ಯಾಮನ್ 17P ಫೋನ್ 1,080x2,460 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.8 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಫೋನ್ ಡಿಸ್‌ಪ್ಲೇಯ ರೀಫ್ರೇಶ್ ರೇಟ್ 90Hz ಆಗಿದೆ. ಹಾಗೆಯೇ ಸ್ಕ್ರೀನಿನ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 395ppi ಆಗಿದೆ ಹಾಗೂ ಡಿಸ್‌ಪ್ಲೇಯು 500 nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಕ್ವಾಡ್‌ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಫೋನ್ ಸಿಲ್ವರ್, ಬ್ಲ್ಯಾಕ್ ಹಾಗೂ ಗ್ರೀನ್ ಬಣ್ಣಗಳ ಆಯ್ಕೆ ಪಡೆದಿದೆ.

ಟೆಕ್ನೋ ಕ್ಯಾಮನ್ 17 - ಫೀಚರ್ಸ್‌

ಟೆಕ್ನೋ ಕ್ಯಾಮನ್ 17 - ಫೀಚರ್ಸ್‌

ಹೊಸ ಟೆಕ್ನೋ ಕ್ಯಾಮನ್ 17 ಫೋನ್ 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.6 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಫೋನ್ ಡಿಸ್‌ಪ್ಲೇಯ ರೀಫ್ರೇಶ್ ರೇಟ್ 90Hz ಆಗಿದೆ. ಹಾಗೆಯೇ ಸ್ಕ್ರೀನಿನ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 267ppi ಆಗಿದೆ ಹಾಗೂ ಡಿಸ್‌ಪ್ಲೇಯು 450nits ಬ್ರೈಟ್ನೆಸ್ ಸಾಮರ್ಥ್ಯ ಪಡೆದಿದೆ. ಇದರೊಂದಿಗೆ ಈ ಫೋನ್ ಮೀಡಿಯಾ ಟೆಕ್ ಹಿಲಿಯೋ G85 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಕ್ಕೆ ಪೂರಕವಾಗಿ 8GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ. ಹಾಗೆಯೇ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಇದ್ದು, ಮುಖ್ಯ ಕ್ಯಾಮೆರಾವು 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಹಾಗೆಯೇ ಈ ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇನ್ನು ಈ ಫೋನ್ ಸಿಲ್ವರ್ ಮತ್ತು ಗ್ರೀನ್ ಬಣ್ಣಗಳ ಆಯ್ಕೆ ಪಡೆದಿದೆ.

Most Read Articles
Best Mobiles in India

English summary
Tecno Camon 17 Pro, Tecno Camon 17P, and Tecno Camon 17 phones have launched in the Nigerian market.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X