ಶೀಘ್ರದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಟೆಕ್ನೋ ಕ್ಯಾಮನ್‌ 19 ಪ್ರೊ 5G !

|

ಟೆಕ್ನೋ ಕಂಪೆನಿ ತನ್ನ ಬಹುನಿರೀಕ್ಷಿತ ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈಗಾಗಲೇ ಜಾಗತಿಕ ಮಾರುಕಟ್ಟೆಗೆ ಎಂಟ್ರಿ ನೀಡಿರುವ ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ. ಇದೀಗ ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಲಾಂಚ್‌ ಕುರಿತು ಟೆಕ್ನೋ ಕಂಪೆನಿ ಟ್ವಿಟರ್‌ನಲ್ಲಿ ವೀಡಿಯೋ ಶೇರ್‌ ಮಾಡಿದೆ. ಈ ವೀಡಿಯೋದಲ್ಲಿ ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಕ್ಯಾಮೆರಾ ವಿಶೇಷತೆ ಬಗ್ಗೆ ತಿಳಿಸಲಾಗಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಲು ವೇದಿಕೆ ಸಿದ್ಧಪಡಿಸಿದೆ. ಈ ಸ್ಮಾರ್ಟ್‌ಫೋನ್‌ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಪ್ರೈಮೆರಿ ಕ್ಯಾಮೆರಾ ಹೊಂದಿರಲಿದೆ ಎಂದು ಟ್ವಿಟರ್‌ ವೀಡಿಯೊದಲ್ಲಿ ತಿಳಿದುಬಂದಿದೆ. ಅಲ್ಲದೆ ಈ ಕ್ಯಾಮೆರಾ ಮೂಲಕ ಕಡಿಮೆ ಬೆಳಕಿನ ಪರಿಸ್ಥಿತಿಗಳಲ್ಲಿಯೂ ಕೂಡ ಹೆಚ್ಚಿನ ಬ್ರೈಟ್‌ನೆಸ್‌ ಪಡೆದಿರುವ ಚಿತ್ರಗಳನ್ನು ಸೆರೆಹಿಡಿಯಲು ಸಾಧ್ಯವಾಗುತ್ತದೆ ಎಂದು ಹೇಳಲಾಗುತ್ತದೆ.

ಟೆಕ್ನೋ

ಇನ್ನು ಟೆಕ್ನೋ ಕಂಪೆನಿ ಈಗಾಗಲೇ ಭಾರತದಲ್ಲಿ ಟೆಕ್ನೋ ಕ್ಯಾಮನ್‌ 19 ಮತ್ತು ಕ್ಯಾಮನ್‌ 19 ನಿಯೋ ಅನ್ನು ಬಿಡುಗಡೆ ಮಾಡಿದೆ. ಇದೀಗ ಟೆಕ್ನೋ ಕ್ಯಾಮನ್‌ 19 ಪ್ರೊ 5G ಬಿಡುಗಡೆ ಮಾಡುವುದಕ್ಕೆ ಪ್ಲಾನ್‌ ಮಾಡಿದೆ. ಆದರೆ ಜಾಗತಿಕ ಮಾರುಕಟ್ಟೆಯಲ್ಲಿ ಟೆಕ್ನೋ ಕ್ಯಾಮನ್‌ 19 ಪ್ರೊ 5G ಫೋನ್‌ $320 (ಸುಮಾರು 25,350ರೂ) ಬೆಲೆಯಲ್ಲಿ ಎಂಟ್ರಿ ನೀಡಿದೆ. ಸದ್ಯ ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಬಗ್ಗೆ ಮಾತ್ರ ವೀಡಿಯೋದಲ್ಲಿ ತಿಳಿಸಲಾಗಿದೆ. ಭಾರತದಲ್ಲಿ ಇದರ ಲಭ್ಯತೆಯ ದಿನಾಂಕ ಅಥವಾ ಫೋನ್‌ನ ಬೆಲೆಯ ಬಗ್ಗೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಹಾಗಾದ್ರೆ ಜಾಗತಿಕ ಮಾರುಕಟ್ಟೆಯಲ್ಲಿ ಈ ಸ್ಮಾರ್ಟ್‌ಫೋನ್‌ ಫೀಚರ್ಸ್‌ ಹೇಗಿದೆ? ಭಾರತದಲ್ಲಿ ಏನನ್ನು ನಿರೀಕ್ಷಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 88.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 395 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಸಹ ನಿರೀಕ್ಷಿಸಲಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿರಲಿದೆ?

ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿರಲಿದೆ. ಇದನ್ನು ಡಬಲ್ ರಿಂಗ್ ವಿನ್ಯಾಸದಲ್ಲಿ ಇರಿಸಲಾಗಿದೆ ಎನ್ನಲಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, 'ಬ್ರೈಟ್ ನೈಟ್ ಪೋರ್ಟ್ರೇಟ್' ಗಾಗಿ RGBW+G+P 1/1.6 ಅಪರ್ಚರ್ ಲೆನ್ಸ್‌ನೊಂದಿಗೆ ಜೋಡಿಸಲಾಗಿದೆ. ಇನ್ನು ಎರಡು ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿರಲಿದೆ ಎನ್ನಲಾಗಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ 33W ಫ್ಲ್ಯಾಶ್ ಚಾರ್ಜ್ ತಂತ್ರಜ್ಞಾನ ಬೆಂಬಲಿಸುವ 5,000mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೊ ಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಗೈರೋಸ್ಕೋಪ್‌, ಸೈಡ್‌ ಮೌಂಟೆಡ್‌ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಹೊಂದಿರಲಿದೆ ಎಂದು ಅಂದಾಜಿಸಲಾಗಿದೆ.

ಟೆಕ್ನೋ

ಇನ್ನು ಟೆಕ್ನೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಟೆಕ್ನೋ ಕ್ಯಾಮನ್‌ 19 ಮತ್ತು ಕ್ಯಾಮನ್‌ 19 ನಿಯೋ ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಎರಡು ಸ್ಮಾರ್ಟ್‌ಫೋನ್‌ಗಳು ಕ್ಯಾಮೆರಾ ಕೇಂದ್ರಿತ ಫೋನ್‌ಗಳಾಗಿದ್ದು, ಮೆಮೊರಿ ಫ್ಯೂಷನ್ ಟೆಕ್ನಾಲಜಿಯೊಂದಿಗೆ ಬರುತ್ತವೆ. ಇನ್ನು ಈ ಎರಡೂ ಸ್ಮಾರ್ಟ್‌ಫೋನ್‌ಗಳು ಮೀಡಿಯಾಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿವೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿವೆ. ಆದರೆ ಮುಖ್ಯ ಕ್ಯಾಮೆರಾಗಳು ಮಾತ್ರ ಭಿನ್ನವಾಗಿವೆ.

ಟೆಕ್ನೋ ಕ್ಯಾಮನ್ 19

ಟೆಕ್ನೋ ಕ್ಯಾಮನ್ 19

ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ + ಎಲ್‌ಟಿಪಿಎಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರೈಮರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯ ಬ್ಯಾಟರಿಯನ್ನು ಹೊಂದಿದೆ. ಇದು 18W ಫ್ಲ್ಯಾಷ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಸಹ ಹೊಂದಿದೆ.

ಟೆಕ್ನೋ ಕ್ಯಾಮನ್‌ 19 ನಿಯೋ

ಟೆಕ್ನೋ ಕ್ಯಾಮನ್‌ 19 ನಿಯೋ

ಈ ಸ್ಮಾರ್ಟ್‌ಫೋನ್‌ 6.8-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ ಡ್ಯುಯಲ್ ಫ್ಲ್ಯಾಷ್‌ನೊಂದಿಗೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ನೀಡಲಾಗಿದೆ. ಈ ಸ್ಮಾರ್ಟ್‌ಫೋನ್ 18W ಫ್ಲ್ಯಾಷ್ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್, ವೈ-ಫೈ, ಜಿಪಿಎಸ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

Best Mobiles in India

Read more about:
English summary
Tecno Camon 19 Pro 5G launch in India has been teased by the company on Twitter.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X