ಭಾರತದಲ್ಲಿ ಟೆಕ್ನೋ ಕ್ಯಾಮನ್‌ 19 ಪ್ರೊ 5G ಲಾಂಚ್‌! ವಾವ್ಹ್ ಎನಿಸುವ ಫೀಚರ್ಸ್‌!

|

ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ ಟೆಕ್ನೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಭಿನ್ನವಾಗಿ ಗುರುತಿಸಿಕೊಂಡಿವೆ. ತಮ್ಮ ಬೆಲೆಯ ಕಾರಣಕ್ಕೆ ಸಖತ್‌ ಸೌಂಡ್‌ ಮಾಡುವ ಟೆಕ್ನೋ ಸ್ಮಾರ್ಟ್‌ಫೋನ್‌ಗಳು ಆಕರ್ಷಕ ಫೀಚರ್ಸ್‌ಗಳ ಮೂಲಕವೂ ಗಮನಸೆಳೆದಿವೆ. ಇದೇ ಕಾರಣಕ್ಕೆ ಸಾಮಾನ್ಯ ಗ್ರಾಹಕರು ಈ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಒಲವನ್ನು ತೋರಿಸಿದ್ದಾರೆ. ಸದ್ಯ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳ ಮೂಲಕ ಗ್ರಾಹಕರ ಮನಗೆದ್ದಿರುವ ಟೆಕ್ನೋ ಇದೀಗ ಹೊಸ ಟೆಕ್ನೋ ಕ್ಯಾಮನ್‌ 19 ಪ್ರೊ 5G ಲಾಂಚ್‌ ಮಾಡಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ತನ್ನ ಹೊಸ ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇಂಡಸ್ಟ್ರಿ-ಫಸ್ಟ್, ಕಸ್ಟಮರ್-ಡಿಸೈನ್ಡ್ 64 ಮೆಗಾಪಿಕ್ಸೆಲ್ RGBW+ (G+P) ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಮೆಮೊರಿ ಫ್ಯೂಷನ್ ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು? ಬೆಲೆ ಎಷ್ಟಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್‌ 6.8 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,460 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿರುವ LTPS ಡಿಸ್‌ಪ್ಲೇ ಆಗಿದೆ. ಜೊತೆಗೆ ಈ ಡಿಸ್‌ಪ್ಲೇ 88.2% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದ್ದು, 395 ಪಿಪಿಐ ಸಾಂದ್ರತೆಯನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಕ್ಯಾಮನ್ 19 ಪ್ರೊ 5G ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12-ಆಧಾರಿತ HiOS 8.6 ಬೆಂಬಲವನ್ನು ಪಡೆದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಮೆಮೊರಿ ಫ್ಯೂಷನ್ ಟೆಕ್ನಾಲಜಿ ಮೂಲಕ RAM ಅನ್ನು 13GB ವರೆಗೆ ವಿಸ್ತರಿಸಬಹುದಾಗಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಕ್ಯಾಮೆರಾ ಸೆಟ್‌ಅಪ್‌ ಎಷ್ಟಿದೆ?

ಟೆಕ್ನೋ ಕ್ಯಾಮನ್‌ 19ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ RGBW+ (G+P) ಸೆನ್ಸಾರ್‌ ಅನ್ನು ಹೊಂದಿದೆ. ಇದು 200% ಬ್ರೈಟ್‌ನೆಸ್‌ ಬೆಂಬಲಿಸಲಿದೆ. ತೀಕ್ಷ್ಣವಾದ ಮತ್ತು ಸ್ಥಿರವಾದ ಛಾಯಾಚಿತ್ರಗಳನ್ನು ಸೆರೆಹಿಡಿಯಲು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಮತ್ತು ಹೈಬ್ರಿಡ್ ಇಮೇಜ್ ಸ್ಟೆಬಿಲೈಸೇಶನ್ (HIS) ಅನ್ನು ಬಳಸುತ್ತದೆ. ಇನ್ನು ಎರಡನೇ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿವೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ, 5G , 4G LTE, OTG, NFC, ಬ್ಲೂಟೂತ್ v5.0, ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಇ-ದಿಕ್ಸೂಚಿ, ಗೈರೊ ಮತ್ತು ಸೈಡ್-ಮೌಂಟೆಡ್ ಆಂಟಿ-ಆಯಿಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಅನ್ನು ಒಳಗೊಂಡಿವೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಕ್ಯಾಮನ್‌ ಪ್ರೊ 5G ಸ್ಮಾರ್ಟ್‌ಫೋನ್‌ ಏಕೈಕ 8GB RAM + 128GB ಸ್ಟೋರೇಜ್ ರೂಪಾಂತರಕ್ಕೆ 21,999ರೂ. ಬೆಲೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಇದೇ ಆಗಸ್ಟ್ 12 ರಿಂದ ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳಲ್ಲಿ ಮಾರಾಟವಾಗಲಿದೆ. ಇದು ಸೀಡರ್ ಗ್ರೀನ್ ಮತ್ತು ಇಕೋ ಬ್ಲ್ಯಾಕ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ.

Best Mobiles in India

English summary
Tecno Camon 19 Pro 5G With Dimensity 810 SoC Launched in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X