ಟೆಕ್ನೋ ಕ್ಯಾಮನ್ 20 ಸರಣಿ ಸ್ಮಾರ್ಟ್‌ಫೋನ್ ಫೀಚರ್ಸ್ ಬಹಿರಂಗ! ಲಾಂಚ್ ಯಾವಾಗ?
ಭಾರತದ ಮೊಬೈಲ್ ಮಾರುಕಟ್ಟೆಯಲ್ಲಿ ಟೆಕ್ನೋ ಕಂಪೆನಿ ತನ್ನದೇ ಆದ ಸ್ಥಾನವನ್ನು ಪಡೆದಿದೆ. ಬಜೆಟ್ ಮೊಬೈಲ್ ಪ್ರಿಯರ ಹಾಟ್ ಫೇವರಿಟ್ ಎನಿಸಿಕೊಂಡಿದೆ. ಇದೀಗ ತನ್ನ ಬಹು ನಿರೀಕ್ಷಿತ ಟೆಕ್ನೋ ಕ್ಯಾಮನ್ 20 ಸರಣಿಯನ್ನು ಪರಿಚಯಿಸಲು ತಯಾರಿ ನಡೆಸಿದೆ. ಈ ಸರಣಿಯು ಭಾರತದಲ್ಲಿ ಇದೇ ಮೇ 27 ರಂದು ಲಾಂಚ್ ಆಗೋದು ಪಕ್ಕಾ ಆಗಿದೆ.
ಹೌದು, ಟೆಕ್ನೋ ಕ್ಯಾಮನ್ 20 ಸರಣಿಯ ಭಾರತಕ್ಕೆ ಎಂಟ್ರಿ ನೀಡೋಕೆ ದಿನಗಣನೆ ಆರಂಭವಾಗಿದೆ. ಈ ಸರಣಿಯಲ್ಲಿ ಟೆಕ್ನೋ ಕ್ಯಾಮನ್ 20 ಮತ್ತು ಟೆಕ್ನೋ ಕ್ಯಾಮನ್ 20 ಪ್ರೊ 5G ಸ್ಮಾರ್ಟ್‌ಫೋನ್‌ಗಳು ಬರಲಿವೆ. ಇನ್ನು ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿರಲಿವೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳು ಯಾವೆಲ್ಲಾ ವಿಶೇಷತೆಗಳೊಂದಿಗೆ ಬರಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಕ್ಯಾಮನ್ 20 ಸರಣಿ ಫೀಚರ್ಸ್ ನಿರೀಕ್ಷೆ ಏನು: ಟೆಕ್ನೋ ಕ್ಯಾಮನ್ 20 ಸರಣಿಯು 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 120Hz ನ ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿವೆ. ಆದರೆ ಈ ಸರಣಿಯ ಸ್ಮಾರ್ಟ್‌ಫೋನ್‌ಗಳು ಭಿನ್ನವಾದ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಅದರಂತೆ ಟೆಕ್ನೋ ಕ್ಯಾಮನ್ 20 ಸ್ಮಾರ್ಟ್‌ಫೋನ್ 12nm ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಿದರೆ, ಟೆಕ್ನೋ ಕ್ಯಾಮನ್ 20 ಪ್ರೊ 5G ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8050 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಟೆಕ್ನೋ ಕ್ಯಾಮನ್ 20 ಸರಣಿಯು 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ಗಳು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ನಲ್ಲಿ ಬರಲಿವೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿರಲಿವೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಟೆಕ್ನೋ ಕ್ಯಾಮನ್ 20 ಸರಣಿ ಸ್ಮಾರ್ಟ್‌ಫೋನ್‌ಗಳು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದ್ದಯ, 33W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ ಎನ್ನಲಾಗಿದೆ. ಆದರೂ ಟೆಕ್ನೋ ಕ್ಯಾಮನ್ 20 ಬಾಕ್ಸ್‌ನಲ್ಲಿ 18W ಚಾರ್ಜರ್‌ನೊಂದಿಗೆ ಬರಲಿದೆ ಎನ್ನಲಾಗಿದೆ. ಇದು 30 ನಿಮಿಷಗಳಲ್ಲಿ ಫೋನ್ ಅನ್ನು 32% ಚಾರ್ಜ್ ಮಾಡಬಹುದು ಎಂದು ಟೆಕ್ನೋ ಹೇಳುತ್ತದೆ.
ಸದ್ಯ ಟೆಕ್ನೋ ಕ್ಯಾಮನ್ 20 ಸರಣಿಯ ಎರಡು ಸ್ಮಾರ್ಟ್‌ಫೋನ್‌ಗಳನ್ನು ಕಂಪೆನಿ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಇದರಲ್ಲಿ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ವಿವರಗಳು ಮಾತ್ರ ಬಹಿರಂಗವಾಗಿದೆ. ಆದರೆ ಇವರ ಬೆಲೆ ವಿವರಗಳು ಮಾತ್ರ ಇನ್ನು ಬಹಿರಂಗವಾಗಿಲ್ಲ.

ಇನ್ನು ಟೆಕ್ನೋ ಕಂಪೆನಿಯ ಇತ್ತೀಚಿನ ಸುದ್ದಿಗಳನ್ನು ಗಮನಿಸುವುದಾದರೆ ಟೆಕ್ನೋ ಪಾಪ್ 7 ಪ್ರೊ ಸ್ಮಾರ್ಟ್‌ಫೋನ್ ಬೆಲೆ ಭಾರತದಲ್ಲಿ ಇಳಿಕೆಯನ್ನು ಕಂಡಿದೆ. ಅಮೆಜಾನ್‌ನಲ್ಲಿ 15% ರಿಯಾಯಿತಿ ಪಡೆದಿದೆ. 2 GB RAM + 64GB ವೇರಿಯಂಟ್ 7,999ರೂ. ದರದಲ್ಲಿ ಕಾಣಸಿಕೊಂಡಿದ್ದು, ಆದ್ರೆ, ಗ್ರಾಹಕರು 6,799ರೂ. ಗಳಿಗೆ ಖರೀದಿಸಬಹುದಾಗಿದೆ. ಇದರೊಂದಿಗೆ ಆಯ್ದ ಬ್ಯಾಂಕ್‌ಗಳಿಂದ ಹೆಚ್ಚುವರಿ ಡಿಸ್ಕೌಂಟ್ ಸಹ ದೊರೆಯುತ್ತದೆ.
ಇನ್ನು ಈ ಸ್ಮಾರ್ಟ್‌ಫೋನ್ 6.56 ಇಂಚಿನ HD+ ಡಾಟ್ ನಾಚ್ IPS ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1612 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಕ್ವಾಡ್‌ಕೋರ್ ಮೀಡಿಯಾಟೆಕ್ ಹಿಲಿಯೋ A22 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ HiOS 11.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.


Click it and Unblock the Notifications








