Tecno: ಭಾರತದಲ್ಲಿ ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಸ್ಮಾರ್ಟ್‌ಫೋನ್ ಲಾಂಚ್! 50MP ಸೋನಿ ಕ್ಯಾಮೆರಾ...
ಭಾರತದಲ್ಲಿ ಹೊಸ ಹೊಸ ಪೋನ್‌ಗಳು ಲಾಂಚ್ ಆಗುತ್ತಲೇ ಇದ್ದು, ಈ ಸಾಲಿಗೆ ಈಗ ವಿಶೇಷ ಫೀಚರ್ಸ್ ಇರುವ ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G (Tecno Camon 30 Premier 5G) ಫೋನ್ ಸಹ ಸೇರಿಕೊಳ್ಳಲಿದೆ. ಈ ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸೋನಿ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.
ಹೌದು, ಭಾರತದಲ್ಲಿ ಟೆಕ್ನೋ ಕ್ಯಾಮನ್ 30 ಸರಣಿಯಲ್ಲಿ ಎರಡು ಫೋನ್‌ಗಳನ್ನು ಲಾಂಚ್ ಮಾಡಿದ್ದು, ಅದರಲ್ಲಿ ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ವಿಶೇಷ ಫೀಚರ್ಸ್ ಆಯ್ಕೆ ಪಡೆಯುವ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್ ಏನು?, ಭಾರತದಲ್ಲಿ ಇದರ ಬೆಲೆ ಎಷ್ಟು ಎಂಬ ಮಾಹಿತಿ ಇಲ್ಲಿದೆ ನೋಡಿ.

ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಡಿಸ್‌ಪ್ಲೇ ಮಾಹಿತಿ: ಈ ಸ್ಮಾರ್ಟ್‌ಫೋನ್ 6.77 ಇಂಚಿನ 1.5K LTPO ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 120Hz ರಿಫ್ರೆಶ್ ರೇಟ್ ಮತ್ತು 1264 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದರ ಜೊತೆಗೆ 120Hz ಅಡಾಪೇಟಿವ್ ರಿಫ್ರೆಶ್ ರೇಟ್, 2160Hz PWM ಡಿಮ್ಮಿಂಗ್ ರೇಟ್ ಮತ್ತು 360Hz ಟಚ್ 4 ಟಚ್ 1 ಸೌಲಭ್ಯ ಪಡೆದಿದ್ದು, ಗೊರಿಲ್ಲಾ ಗ್ಲಾಸ್ 5 ರಕ್ಷಣೆಯೊಂದಿಗೆ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.
ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಪ್ರೊಸೆಸರ್ ವಿವರ: ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 8200 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, 12GB LPDDR5x RAM ಮತ್ತು 512GB UFS 3.1 ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಕಂಡುಬಂದಿದೆ. ಈ ಮೂಲಕ ಗೇಮಿಂಗ್‌ನಲ್ಲಿ ಹಾಗೂ ವಿವಿಧ ಆಪ್‌ಗಳಲ್ಲಿ ಮನಬಂದಂತೆ ಸೇವೆ ಪಡೆಯಬಹುದಾಗಿದೆ. ಜೊತೆಗೆ ಆಂಡ್ರಾಯ್ಡ್ 14 ಆಧಾರಿತ HiOS 14 ನಲ್ಲಿ ಈ ಫೋನ್ ರನ್ ಆಗಲಿದೆ.

ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಕ್ಯಾಮೆರಾ ರಚನೆ: ಓಐಎಸ್ ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ IMX890 ಪ್ರಾಥಮಿಕ ಸೆನ್ಸರ್ ಆಯ್ಕೆಯೊಂದಿಗೆ ಟ್ರಿಪಲ್ ರಿಯರ್ ಆಯ್ಕೆ ಪಡೆದಿದ್ದು, 3x ಇನ್-ಸೆನ್ಸರ್ ಜೂಮ್‌ನೊಂದಿಗೆ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಮತ್ತು 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವಿಡಿಯೋ ಕರೆ ಅಗತ್ಯತೆಗಳನ್ನು ನಿರ್ವಹಿಸಲು ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಸೆಲ್ಫಿ ಆಟೋಫೋಕಸ್ ಸೆನ್ಸರ್ ಆಯ್ಕೆ ಪಡೆದುಕೊಂಡಿದೆ.
ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಬ್ಯಾಟರಿ ಹಾಗೂ ಇತರೆ: ಈ ಫೋನ್‌ನ ಬ್ಯಾಟರಿ ವಿಚಾರಕ್ಕೆ ಬಂದರೆ 70W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 5,000 mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿದೆ. ಉಳಿದಂತೆ ಈ ಫೋನ್ IP53 ಧೂಳು ಮತ್ತು ನೀರಿನ ಪ್ರತಿರೋಧ, NFC, ಎನ್‌ಎಫ್‌ಸಿ, ಐಆರ್ ಬ್ಲಾಸ್ಟರ್, ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ನೊಂದಿಗೆ ವಿವಿಧ ರೀತಿಯ ಕನೆಕ್ಟಿವಿಟಿ ಫೀಚರ್ಸ್ ಅನ್ನು ಈ ಫೋನ್‌ನಲ್ಲಿ ಕಾಣಬಹುದಾಗಿದೆ.

ಟೆಕ್ನೋ ಕ್ಯಾಮನ್ 30 ಪ್ರೀಮಿಯರ್ 5G ಬೆಲೆ ಹಾಗೂ ಲಭ್ಯತೆ: ಈ ಸ್ಮಾರ್ಟ್‌ಫೋನ್ 12GB RAM/512GB ನ ಒಂದೇ ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಲಭ್ಯ ಇದ್ದು, ಇದೀಗ ಈ ಫೋನ್‌ಗೆ 39,999 ರೂ.ಗಳ ಬೆಲೆ ನಿಗದಿ ಮಾಡಲಾಗಿದೆ. ಕಂಪನಿಯು ಈ ಫೋನ್ ಖರೀದಿಯ ಮೇಲೆ 3,000 ರೂ.ಗಳ ರಿಯಾಯಿತಿಯನ್ನು ಸಹ ನೀಡುತ್ತಿದೆ. ಇಷ್ಟೇ ಅಲ್ಲದೆ ಸರಿ ಸುಮಾರು 4,999 ರೂ.ಗಳ ಮೌಲ್ಯದ ಉಚಿತ ಪ್ರಯೋಜನಗಳನ್ನೂ ಸಹ ನೀಡಲಾಗುತ್ತಿದೆ.


Click it and Unblock the Notifications








