Tecno:ಟೀಸರ್‌ನಲ್ಲೇ ಸನ್ಸೇಷನ್ ಕ್ರಿಯೆಟ್ ಮಾಡಿದ ಟೆಕ್ನೋ ಸ್ಪಾರ್ಕ್ 20: ಫೀಚರ್ಸ್ ನಿರೀಕ್ಷೆ ಏನು?
ಟೆಕ್ನೋ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ ವಲಯದಲ್ಲಿ ಉತ್ತಮ ಬೇಡಿಕೆಯಿದೆ. ಸ್ಟೈಲಿಶ್ ಲುಕ್ ಹಾಗೂ ಬೆಸ್ಟ್ ಫೀಚರ್ಸ್‌ಗಳಿಂದಾಗಿ ಟೆಕ್ನೋ ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತವೆ. ಇದೀಗ ಅದೇ ಹಾದಿಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ಟೆಕ್ನೋ ಸ್ಪಾರ್ಕ್ 20 ಫೋನ್ ಲಾಂಚ್ ಟೀಸರ್ ಬಿಡುಗಡೆ ಆಗಿದೆ. ಈ ಟೀಸರ್‌ನಲ್ಲಿ ಫೋನ್‌ನ ಫೀಚರ್ಸ್ ಲುಕ್ ಬಹಿರಂಗವಾಗಿದೆ.
ಹೌದು, ಟೆಕ್ನೋ ಸ್ಪಾರ್ಕ್ 20 ಇಂಡಿಯಾ ಲಾಂಚ್ ಟೀಸರ್ ಬಿಡುಗಡೆ ಆಗಿದೆ. ಇದರಲ್ಲಿ ಸ್ಮಾರ್ಟ್‌ಫೋನ್ ಬಿಡುಗಡೆಗೆ ತಯಾರಿ ನಡೆಸಿರುವುದರ ಬಗ್ಗೆ ಹಾಗೂ ಮೊಬೈಲ್ ಡಿಸೈನ್‌ನ ಕೆಲವು ವಿಚಾರಗಳನ್ನು ಬಹಿರಂಗಪಡಿಸಲಾಗಿದೆ. ಇನ್ನು ಈಗಾಗಲೇ ಬಹಿರಂಗವಾಗಿರುವಂತೆ ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಫೀಚರ್ಸ್ ವಿವರಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.

ಟೆಕ್ನೋ ಸ್ಪಾರ್ಕ್ 20 ಇಂಡಿಯಾ ಲಾಂಚ್ ಟೀಸರ್ ನಲ್ಲಿ ಏನಿದೆ?
ಟೆಕ್ನೋ ಕಂಪೆನಿ ಟೆಕ್ನೋ ಸ್ಪಾರ್ಕ್ 20 ಇಂಡಿಯಾ ಲಾಂಚ್ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಈ ಟೀಸರ್‌ನಲ್ಲಿ ಭಾರತದ ಮಾರುಕಟ್ಟೆಗೆ ಟೆಕ್ನೋ ಸ್ಪಾರ್ಕ್ 20 ಎಂಟ್ರಿ ನೀಡುವ ಸಮಯ ಸನ್ನಿಹಿತವಾಗಿದೆ ಅನ್ನೊದರ ಸುಳಿವು ನೀಡಿದೆ. ಜೊತೆಗೆ ಮೊಬೈಲ್‌ನ ಕೆಲವು ವಿನ್ಯಾಸ ಅಂಶಗಳನ್ನು ಸಹ ಪ್ರದರ್ಶಿಸುತ್ತದೆ.
ಟೆಕ್ನೋ ಸ್ಪಾರ್ಕ್ 20 ಡಿಸ್‌ಪ್ಲೇ ರಚನೆ ನಿರೀಕ್ಷೆ ಏನು?
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 6.56 ಇಂಚಿನ ಪುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಮೇ 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿರಲಿದೆ ಎನ್ನಲಾಗಿದೆ. ಜೊತೆಗೆ ಡಿಸ್‌ಪ್ಲೇ 84.6% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಒಳಗೊಂಡಿರಲಿದೆ. ಇದರೊಂದಿಗೆ ಡಿಸ್‌ಪ್ಲೇ 20:9 ರಚನೆಯ ಅನುಪಾತದಲ್ಲಿ ಬರಲಿದ್ದು, 267 ppi ಸಾಂದ್ರತೆಯನ್ನು ಹೊಂದಿರಲಿದೆ.

ಟೆಕ್ನೋ ಸ್ಪಾರ್ಕ್ 20 ಪ್ರೊಸೆಸರ್ ಯಾವುದು?
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G85 SoC ಪ್ರೊಸೆಸರ್ ವೇಗದಲ್ಲಿ ಬರಲಿದ್ದು, ಆಂಡ್ರಾಯ್ಡ್ 13 OS ಆಧಾರಿತ HiOS 13 ಕಸ್ಟಮ್ ಸ್ಕಿನ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್ ಸ್ಟೋರೇಜ್ ಸಾಮರ್ಥ್ಯದಲ್ಲಿರಲಿದೆ. ಇದು ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಕೂಡ ಅವಕಾಶ ಸಿಗಲಿದೆ ಎನ್ನಲಾಗಿದೆ.
ಟೆಕ್ನೋ ಸ್ಪಾರ್ಕ್ 20 ಕ್ಯಾಮೆರಾ ಸೆಟಪ್ ಏನಿರಲಿದೆ?
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 50 ಮೆಗಾಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ಮತ್ತು AI ಲೆನ್ಸ್ ಅನ್ನು ಪ್ಯಾಕ್ ಮಾಡುತ್ತದೆ. ಇದಲ್ಲದೆ ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾದೊಂದಿಗೆ ಬರಲಿದೆ.

ಟೆಕ್ನೋ ಸ್ಪಾರ್ಕ್ 20 ಬ್ಯಾಟರಿ ಮತ್ತು ಇತರೆ
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿರಲಿದೆ. ಇದು 18W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಬ್ಲೂಟೂತ್ ಅನ್ನು ಹೊಂದಿದೆ. ಇದರೊಂದಿಗೆ ಸ್ಮಾರ್ಟ್‌ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸೆಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಕಂಪಾಸ್ ಅನ್ನು ಹೊಂದಿರಲಿದೆ ಎಂದು ವರದಿಯಾಗಿದೆ.
ಟೆಕ್ನೋ ಸ್ಪಾರ್ಕ್ 20 ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 20 ಸ್ಮಾರ್ಟ್‌ಫೋನ್‌ನ ಇಂಡಿಯಾ ಲಾಂಚ್ ಟೀಸರ್ ಮಾತ್ರವೇ ಬಹಿರಂಗವಾಗಿದೆ. ಆದರೆ ಈ ಟೀಸರ್‌ನಲ್ಲಿ ಫೋನ್ ಬಿಡುಗಡೆಯ ದಿನಾಂಕ ಹಾಗೂ ಬೆಲೆ ವಿವರಗಳು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಲೆದರ್ ಬ್ಯಾಕ್ ಬಣ್ಣದ ರೂಪಾಂತರಗಳಲ್ಲಿ ಬರಲಿದೆ ಎನ್ನಲಾಗಿದೆ.


Click it and Unblock the Notifications








