ಟೆಕ್ನೋ ಕಂಪೆನಿಯ ಅಚ್ಚರಿಯ ಸ್ಮಾರ್ಟ್‌ಫೋನ್ ನೋಡಿ ಟೆಕ್ ವಲಯವೇ ಶಾಕ್!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕ ಟೆಕ್ನೋ ಕಂಪೆನಿ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಈವೆಂಟ್‌ನಲ್ಲಿ ಇಡೀ ಟೆಕ್ ವಲಯವೇ ಬೆರಗಾಗುವಂತ ನಡೆ ಪ್ರದರ್ಶಿಸಿದೆ. ಟೆಕ್ನೋ ಕಂಪೆನಿ ತನ್ನ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಅನ್ನು ಅನಾವರಣಗೊಳಿಸಿದೆ. ಇದನ್ನು ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಎಂದು ಹೆಸರಿಸಲಾಗಿದೆ.
ಹೌದು, ಟೆಕ್ನೋ ಕಂಪೆನಿ ತನ್ನ ಮೊದಲ ಫೋಲ್ಡಬಲ್ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ LTPO ಟೆಕ್ನಾಲಜಿಯನ್ನು ಬೆಂಬಲಿಸುವ ಎರಡು ದೊಡ್ಡ ಪ್ಯಾನೆಲ್‌ಗಳೊಂದಿಗೆ ಬರಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಕೂಡ ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ವಿಶೇಷತೆ ಏನು?
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಸ್ಮಾರ್ಟ್‌ಫೋನ್ ಅಚ್ಚರಿ ಎನಿಸುವ ಸ್ಪೆಕ್ಸ್ ಶೀಟ್ ಅನ್ನು ಹೊಂದಿದೆ. ಇದು 6.42 ಇಂಚಿನ LTPO AMOLED ಕವರ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1080 x 2550 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 7.85 ಇಂಚಿನ ಇನರ್‌ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಬೆಂಬಲಿಸಲಿದೆ. ಇದು 2000 x 2296 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ.
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಪ್ರೊಸೆಸರ್ ಯಾವುದು?
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಸ್ಮಾರ್ಟ್‌ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್ ಹೊಂದಿದ್ದು, 2x ಜೂಮ್‌ನೊಂದಿಗೆ ಬರಲಿದೆ. ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಹೊಂದಿದೆ. ಇದರೊಂದಿಗೆ ಕವರ್ ಪರದೆಯ ಮೇಲ್ಭಾಗದಲ್ಲಿ 32MP ಸೆಲ್ಫಿ ಕ್ಯಾಮೆರಾ ಹಾಗೂ ಸ್ಮಾರ್ಟ್‌ಫೋನ್ ಒಳಭಾಗದಲ್ಲಿ 16MP ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಬ್ಯಾಟರಿ ಬ್ಯಾಕ್‌ಅಪ್?
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಸ್ಮಾರ್ಟ್‌ಫೋನ್ 45W ವೇಗದ ಚಾರ್ಜಿಂಗ್ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, VolTE, 4G, ಮೊಬೈಲ್ ಹಾಟ್‌ಸ್ಪಾಟ್, ಬ್ಲೂಟೂತ್ v5.3, Wi-Fi 4 ಅನ್ನು ಬೆಂಬಲಿಸಲಿದೆ.

ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಬೆಲೆ ಮತ್ತು ಲಭ್ಯತೆ
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಸ್ಮಾರ್ಟ್‌ಫೋನ್ 12GB + 256GB ರೂಪಾಂತರದ ಆಯ್ಕೆಗೆ 89,999ರೂ. ಬೆಲೆಯನ್ನು ಹೊಂದಿದೆ. ಇದರ 12GB + 512GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 99,999ರೂ. ಬೆಲೆಯನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಲಾಂಚ್ ಆಫರ್‌ನಲ್ಲಿ 10,000ರೂ.ಗಳ ಡಿಸ್ಕೌಂಟ್ ಕೂಡ ದೊರೆಯಲಿದೆ. ಇದನ್ನು ನೀವು ಕಪ್ಪು ಮತ್ತು ಬಿಳಿ ಬಣ್ಣದ ಆಯ್ಕೆಯಲ್ಲಿ ಖರೀದಿಸಬಹುದು. ಈ ಸ್ಮಾರ್ಟ್‌ಫೋನ್ ಸೇಲ್ ಡೇಟ್ ಇನ್ನು ಕೂಡ ಬಹಿರಂಗವಾಗಿಲ್ಲ.


Click it and Unblock the Notifications








