Tecno: ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಫೀಚರ್ಸ್ ಬಹಿರಂಗ!..ಎದುರಾಳಿಗಳ ಎದೆಯಲ್ಲಿ ಕಂಪನ ಶುರು!
ಟೆಕ್ನೋ ಸ್ಪಾರ್ಕ್ 20 ಸರಣಿ ಈಗಾಗಲೇ ಜಾಗತಿಕ ಮಾರುಕಟ್ಟೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಇದೀಗ ಈ ಸರಣಿಯ ಟಾಪ್ ಎಂಡ್ ಮಾಡೆಲ್ ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಬವಿಡುಗಡೆಗೆ ಸಿದ್ಧವಾಗಿದೆ ಎಂದು ವರದಿಯಾಗಿದೆ. ಈ ಸ್ಮಾರ್ಟ್‌ಫೋನ್ ಶೀಘ್ರದಲ್ಲೇ ಬಿಡುಗಡೆ ಆಗುವ ಸಾಧ್ಯತೆಯಿದ್ದು, ಆನ್‌ಲೈನ್‌ನಲ್ಲಿ ಫೀಚರ್ಸ್ ಅನ್ನು ಬಹಿರಂಗಗೊಳಿಸಲಾಗಿದೆ.
ಹೌದು, ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ (Tecno Spark 20 Pro+) ಸ್ಮಾರ್ಟ್‌ಫೋನ್ ಸದ್ಯದಲ್ಲೇ ಬಿಡುಗಡೆ ಆಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯೊಂದಿಗೆ ಬರಲಿದೆ ಎಂದು ಟೆಕ್ನೋ ಕಂಪೆನಿ ಅಧಿಕೃತವಾಗಿ ದೃಢಪಡಿಸಿದೆ. ಇನ್ನು ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಡಿಸ್‌ಪ್ಲೇ ರಚನೆ ಸಾಧ್ಯತೆ?
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 6.82 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 1080 x 2460 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿರಲಿದೆ. ಇನ್ನು ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರುವ ನಿರೀಕ್ಷೆಯನ್ನು ಇಡಲಾಗಿದೆ. ಇದಲ್ಲದೆ ಡಿಸ್‌ಪ್ಲೇ 90.52% ಸ್ಕ್ರೀನ್ ಟು ಬಾಡಿ ನಡುವಿನ ಅನುಪಾತವನ್ನು ಹೊಂದಿರಲಿದ್ದು, 20.5:9 ರಚನೆಯ ಅನುಪಾತವನ್ನು ಹೊಂದಿದೆ ಎಂದು ವರದಿಯಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಪ್ರೊಸೆಸರ್ ನಿರೀಕ್ಷೆ ಏನಿದೆ?
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಹಿಲಿಯೋ G99SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಕ್ಯಾಮೆರಾ ಸೆಟಪ್ ಏನು?
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿರಲಿದೆ. ಇದರ ಎರಡನೇ ಕ್ಯಾಮೆರಾದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ ಎಂದು ವರದಿಯಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಬ್ಯಾಟರಿ ಮತ್ತು ಇತರೆ ಸೌಲಭ್ಯ
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ ಎಂದು ವರದಿಯಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ ಎಂದು ಹೇಳಲಾಗಿದೆ.
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಬೆಲೆ ಮತ್ತು ಲಭ್ಯತೆ
ಟೆಕ್ನೋ ಸ್ಪಾರ್ಕ್ 20 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಜನವರಿ 2024 ರಲ್ಲಿ ಬಿಡುಗಡೆ ಆಗಲಿದೆ ಎಂದು ಟೆಕ್ನೋ ಕಂಪೆನಿ ದೃಢಪಡಿಸಿದೆ. ಆದರೆ ಇದರ ಬೆಲೆ ವಿವರಗಳು ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಫೀಚರ್ಸ್‌ಗಳನ್ನು ಗಮನಿಸಿದರೆ ಈ ಫೋನ್ 12,000 ರಿಂದ 15,000ರೂ ಒಳಗಿನ ಬೆಲೆಯಲ್ಲಿ ಲಭ್ಯವಾಗುವ ನಿರೀಕ್ಷೆಯನ್ನು ಇಡಲಾಗಿದೆ.


Click it and Unblock the Notifications








