Home
ಸುದ್ದಿಜಾಲ

ಈ ಮಡಚುವ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ; ಆಫರ್‌ ತಿಳಿದ್ರೆ OMG ಅಂತೀರಾ!

ಮೊಬೈಲ್‌ ಮಾರುಕಟ್ಟೆಯಲ್ಲಿ ಟೆಕ್ನೋ ಸಂಸ್ಥೆಯು ಭಿನ್ನ ಶ್ರೇಣಿಯ ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸಂಸ್ಥೆಯು ಬಜೆಟ್‌ ಫೋನ್‌ಗಳ ಜೊತೆಗೆ ಹೈ ಎಂಡ್ ಮಾದರಿಯ ಫೋನ್‌ ಕೂಡಾ ಗಮನ ಸೆಳೆದಿದೆ. ಆ ಪೈಕಿ ಸಂಸ್ಥೆಯ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್‌ ಇದೀಗ ಬೊಂಬಾಟ್‌ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಮೊಬೈಲ್‌ ಶೇ. 19% ರಷ್ಟು ಡಿಸ್ಕೌಂಟ್‌ ಪಡೆದಿದೆ. 12 GB RAM + 256 GB ವೇರಿಯಂಟ್‌ ಫೋನ್‌ ಬೆಲೆಯು 1,09,999 ರೂ. ಗಳು ಆಗಿದ್ದು, ಆದರೆ ಸದ್ಯ ಆಫರ್‌ನಲ್ಲಿ ಈ ಮೊಬೈಲ್‌ 88,888ರೂ. ಗಳ ಬಿಗ್‌ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ.

ಈ ಮಡಚುವ ಫೋನ್‌ ಬೆಲೆಯಲ್ಲಿ ಭಾರೀ ಇಳಿಕೆ; ಆಫರ್‌ ತಿಳಿದ್ರೆ OMG ಅಂತೀರಾ!

ಇನ್ನು ಟೆಕ್ನೋ ಫ್ಯಾಂಟಮ್ V ಫೋಲ್ಡ್ ಮೊಬೈಲ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 9000+ ಚಿಪ್‌ಸೆಟ್‌ ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದೆ. ಜೊತೆಗೆ ಇದು 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಹಾಗಾದರೆ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನಿನ ಇನ್ನುಳಿದ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಟೆಕ್ನೋ ಫ್ಯಾಂಟಮ್ V ಫೋಲ್ಡ್ ಡಿಸ್‌ಪ್ಲೇ ಹೇಗಿದೆ :
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ 6.42 ಇಂಚಿನ LTPO ಔಟರ್‌ ಅಮೋಲೆಡ್‌ ಡಿಸ್‌ಪ್ಲೇ ಪಡೆದುಕೊಂಡಿದ್ದು, FHD+ ಪ್ಯಾನೆಲ್ ಹೊಂದಿದೆ. ಅಲ್ಲದೇ 2296 X 2000 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. 7.65 ಇಂಚಿನ 2K LTPO ಅಮೋಲೆಡ್‌ ಫೋಲ್ಡಬಲ್ ಡಿಸ್‌ಪ್ಲೇ ಇದ್ದು, ಅಟೋಮ್ಯಾಟಿಕ್‌ ಆಗಿ 10Hz ನಿಂದ 120Hz ನಡುವೆ ರಿಫ್ರೆಶ್‌ ರೇಟ್‌ ಅನ್ನು ಬದಲಾಯಿಸಿಕೊಳ್ಳುತ್ತದೆ.

ಟೆಕ್ನೋ ಫ್ಯಾಂಟಮ್ V ಫೋಲ್ಡ್ ಪ್ರೊಸೆಸರ್‌ ಹೇಗಿದೆ :
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಮೀಡಿಯಾ ಟೆಕ್‌ ಡೈಮೆನ್ಸಿಟಿ 9000+ ಚಿಪ್‌ಸೆಟ್‌ನಲ್ಲಿ ಕೆಲಸ ನಿರ್ವಹಿಸುವ ಈ ಮೊಬೈಲ್‌ 12GB RAM ಮತ್ತು 512GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದುಕೊಂಡಿದೆ. ಹಾಗೆಯೇ ಆಂಡ್ರಾಯ್ಡ್‌ 13 ಓಎಸ್‌ ಸಪೋರ್ಟ್‌ ಕೂಡಾ ಇದು ಪಡೆದಿದೆ.

ಟೆಕ್ನೋ ಫ್ಯಾಂಟಮ್ V ಫೋಲ್ಡ್ ಕ್ಯಾಮೆರಾ ಸೆನ್ಸಾರ್ :
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ, 13 ಮೆಗಾ ಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್‌ ಮತ್ತು 50 ಮೆಗಾಪಿಕ್ಸೆಲ್ 2x ಪೋಟ್ರೇಟ್ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದೆ. ಹಾಗೆಯೇ ಡಿವೈಸ್‌ ಅನ್ನು ಓಪನ್‌ ಮಾಡಿದಾಗ ಹೊರಗಿನ ಡಿಸ್‌ಪ್ಲೇನಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ನೀಡಲಾಗಿದೆ, ಇನ್ನುಳಿದಂತೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ.

ಟೆಕ್ನೋ ಫ್ಯಾಂಟಮ್ V ಫೋಲ್ಡ್ ಬ್ಯಾಟರಿ :
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದ್ದು, 45W ವೇಗದ ಚಾರ್ಜಿಂಗ್ ಗೆ ಸಪೋರ್ಟ್‌ ನೀಡಲಿದೆ. ಆದರೆ ಇದೇ ಮಾದರಿಯ ಸ್ಯಾಮ್‌ಸಂಗ್‌ನ ಫೋಲ್ಡಬಲ್ ಫೋನ್ 4,400mAh ಬ್ಯಾಟರಿ ಸಾಮರ್ಥ್ಯ ಪಡೆದಿದ್ದು, 25W ವೇಗದ ಚಾರ್ಜ್‌ಗೆ ಸಪೋರ್ಟ್ ಪಡೆದಿದೆ.

ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ನ ಇತರೆ ಫೀಚರ್ಸ್‌ ಮಾಹಿತಿ :
ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್‌ ಅನ್ನು ಒಳಗೊಂಡಿದ್ದು, ಇದರಲ್ಲಿನ ಸ್ಟೀರಿಯೋ ಸ್ಪೀಕರ್‌ ಬಳಕೆದಾರರಿಗೆ ಅತ್ಯುತ್ತಮವಾದ ಅನುಭವ ಒದಗಿಸುತ್ತದೆ. ಹಾಗೆಯೇ ಏರೋಸ್ಪೇಸ್-ಗ್ರೇಡ್ ನವೀನ ಡ್ರಾಪ್ ಆಕಾರದ ಹಿಂಜ್ ಅನ್ನು ಪಡೆದಿದ್ದು, ಈ ಮೂಲಕ ಸಾಫ್ಟ್‌ ಆಗಿ ಮಡಿಸಬಹುದಾಗಿದೆ.

Best Mobiles in India

English summary
Tecno Phantom V Fold 5G price drop on amazon. offer price, specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+