ಮಡಚುವ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಇಳಿಕೆ!..ಎರಡು ಡಿಸ್‌ಪ್ಲೇ ಇವೆ!
ಟೆಕ್ನೋ ಮೊಬೈಲ್ ಸಂಸ್ಥೆಯು ಅಗ್ಗದ ಹಾಗೂ ಬಜೆಟ್ ದರದ ಫೋನ್‌ಗಳ ಮೂಲಕ ಹೆಚ್ಚಾಗಿ ಗುರುತಿಸಿಕೊಂಡಿದೆ. ಅದಾಗ್ಯೂ, ಸಂಸ್ಥೆಯು ಟೆಕ್ನೋ ಫ್ಯಾಂಟಮ್ V ಫೋಲ್ಡ್ ಸ್ಮಾರ್ಟ್‌ಫೋನ್ ಮೂಲಕ ಹೈ ಎಂಡ್ ಮಾದರಿಯ ಫೋನ್ ಇಷ್ಟ ಪಡುವ ಗ್ರಾಹಕರ ಗಮನ ಸೆಳೆದಿದೆ. ಇದೀಗ ಈ ಫೋನ್ ಆಕರ್ಷಕ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ.
ಹೌದು, ಇ ಕಾಮರ್ಸ್ ದೈತ್ಯ ತಾಣ ಅಮೆಜಾನ್ ನಲ್ಲಿ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಶೇ. 36% ರಷ್ಟು ನೇರ ಡಿಸ್ಕೌಂಟ್ ದರದಲ್ಲಿ ಖರೀದಿಗೆ ಲಭ್ಯ ಇದೆ. ಆಫರ್‌ನಲ್ಲಿ ಈ ಫೋನಿನ 12GB RAM + 256GB ಸ್ಟೋರೇಜ್ ವೇರಿಯಂಟ್ 69,999ರೂ. ಗಳ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಇತರೆ ಕೆಲವು ಆಫರ್ ಸಹ ಗ್ರಾಹಕರಿಗೆ ಲಭ್ಯ ಆಗಲಿವೆ.

ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ 5,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದ್ದು, 120W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಒಳಗೊಂಡಿದೆ. ಹಾಗಾದರೇ ಟೆಕ್ನೋ ಫ್ಯಾಂಟಮ್ V ಫೋಲ್ಡ್ ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಹಾಗೂ ವಿನ್ಯಾಸದ ಮಾಹಿತಿ
ಈ ಫೋಲ್ಡಬಲ್ ಫೋನ್ 6.42 ಇಂಚಿನ LTPO ಔಟರ್ ಅಮೋಲೆಡ್ ಡಿಸ್‌ಪ್ಲೇ ಪಡೆದಿದ್ದು, ಇದು FHD+ ಪ್ಯಾನೆಲ್ ಆಗಿದೆ. ಹಾಗೆಯೇ 2296 X 2000 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ ಇದರೊಂದಿಗೆ 7.65 ಇಂಚಿನ 2K LTPO ಅಮೋಲೆಡ್ ಫೋಲ್ಡಬಲ್ ಡಿಸ್‌ಪ್ಲೇ ಇದ್ದು, ಅಟೋಮ್ಯಾಟಿಕ್ ಆಗಿ 10Hz ನಿಂದ 120Hz ನಡುವೆ ರಿಫ್ರೆಶ್ ರೇಟ್ ಅನ್ನು ಬದಲಾಯಿಸಿಕೊಳ್ಳುತ್ತದೆ.

ಪ್ರೊಸೆಸರ್ ಪವರ್ ಮಾಹಿತಿ
ಟೆಕ್ನೋ ಸಂಸ್ಥೆಯ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000+ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸುವ ಈ ಮೊಬೈಲ್ 12GB RAM ಮತ್ತು 512GB ಆಂತರೀಕ ಸ್ಟೋರೇಜ್ ಆಯ್ಕೆ ಪಡೆದುಕೊಂಡಿದೆ. ಇದರಲ್ಲಿ ಗಮನಿಸಬೇಕಾದ ವಿಷಯ ಎಂದರೆ ಫೋನ್ ಹೊಸದಾದರೂ ಈ ಸ್ಟೋರೇಜ್ ಆವೃತ್ತಿ ಮಾತ್ರ ಹಳೆಯದಾಗಿದೆ.

ಟ್ರಿಪಲ್ ಕ್ಯಾಮೆರಾ ಸೆನ್ಸಾರ್ ರಚನೆ
ಈ ಫೋನ್ ಮೂರು ಕ್ಯಾಮೆರಾ ರಚನೆ ಹೊಂದಿದ್ದು, 50 ಮೆಗಾಪಿಕ್ಸೆಲ್ ಮೊದಲ ಕ್ಯಾಮೆರಾ, 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್-ಆಂಗಲ್ ಸೆನ್ಸರ್ ಮತ್ತು 50 ಮೆಗಾಪಿಕ್ಸೆಲ್ 2x ಪೋಟ್ರೇಟ್ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದೆ. ಹಾಗೆಯೇ ಡಿವೈಸ್ ಅನ್ನು ಓಪನ್ ಮಾಡಿದಾಗ ಹೊರಗಿನ ಡಿಸ್‌ಪ್ಲೇನಲ್ಲಿ 32 ಮೆಗಾ ಪಿಕ್ಸೆಲ್ ಕ್ಯಾಮೆರಾ ಆಯ್ಕೆ ಒದಗಿಸಲಾಗಿದೆ, ಇನ್ನುಳಿದಂತೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಪಡೆದಿದೆ.
ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯ
ಟೆಕ್ನೋ ಕಂಪನಿಯ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದ್ದು, 45W ವೇಗದ ಚಾರ್ಜಿಂಗ್ ಗೆ ಬೆಂಬಲ ನೀಡಲಿದೆ. ಆದರೆ, ಈ ಹಿಂದೆ ಲಾಂಚ್ ಆಗಿರುವ ಸ್ಯಾಮ್‌ಸಂಗ್‌ನ ಫೋಲ್ಡಬಲ್ ಫೋನ್ 4,400mAh ಬ್ಯಾಟರಿ ಸಾಮರ್ಥ್ಯ ಹೊಂದಿದ್ದು, 25W ವೇಗದ ಚಾರ್ಜ್‌ಗೆ ಬೆಂಬಲ ಪಡೆದಿದೆ.
ಇತರೆ ಫೀಚರ್ಸ್ ಹಾಗೂ ಆಯ್ಕೆಗಳು
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಅನ್ನು ಪಡೆದುಕೊಂಡಿದ್ದು, ಇದರಲ್ಲಿನ ಸ್ಟೀರಿಯೋ ಸ್ಪೀಕರ್ ಬಳಕೆದಾರರಿಗೆ ಅತ್ಯುತ್ತಮವಾದ ಅನುಭವ ನೀಡುತ್ತದೆ. ಹಾಗೆಯೇ ಏರೋಸ್ಪೇಸ್-ಗ್ರೇಡ್ ನವೀನ ಡ್ರಾಪ್ ಆಕಾರದ ಹಿಂಜ್ ಅನ್ನು ಹೊಂದಿದ್ದು, ಈ ಮೂಲಕ ಮೃದುವಾಗಿ ಮಡಿಸಬಹುದಾಗಿದೆ.
ಕಲರ್ ಆಯ್ಕೆ ಹಾಗೂ ಮೆಮೊರಿ ಆಯ್ಕೆ
ಟೆಕ್ನೋ ಫ್ಯಾಂಟಮ್ V ಫೋಲ್ಡ್ ಸ್ಮಾರ್ಟ್‌ಫೋನ್ ಬ್ಲ್ಯಾಕ್ ಬಣ್ಣದ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಈ ಫೋನ್ 12 GB RAM + 256 GB ವೇರಿಯಂಟ್ ಆಯ್ಕೆ ಸಹ ಪಡೆದಿದೆ.


Click it and Unblock the Notifications








