ದೇಶಿಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟ 'ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌'!

|

ಮಧ್ಯ ಶ್ರೇಣಿಯ ಮೊಬೈಲ್‌ ವಿಭಾಗದಲ್ಲಿ ಪೈಪೋಟಿ ನೀಡಲು ಟೆಕ್ನೋ ಮೊಬೈಲ್‌ ಸಂಸ್ಥೆಯು ಭಾರತದಲ್ಲಿ 'ಟೆಕ್ನೋ ಫ್ಯಾಂಟಮ್ X' ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈಗಾಗಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಸಹ ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ.

ಟೆಕ್ನೋ

ಟೆಕ್ನೋ ಸಂಸ್ಥೆ ದೇಶಿಯ ಮಾರುಕಟ್ಟೆಗೆ ಹೊಸದಾಗಿ ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸೆಲ್ಫಿ ಕ್ಯಾಮೆರಾಗಳನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೊನೆಟ್ ಸಮ್ಮರ್ ಮತ್ತು ಸ್ಟಾರ್ರಿ ನೈಟ್ ಬ್ಲೂ ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ಇನ್ನುಳಿದಂತೆ ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ 1,080 x 2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಸೂಪರ್ ಅಮೋಲೆಡ್ ಕರ್ವ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಬಲ ಯಾವುದು

ಪ್ರೊಸೆಸರ್ ಬಲ ಯಾವುದು

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದು ಆಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿಯನ್ನು 512GB ವರೆಗೂ ವಿಸ್ತರಿಸಲು ಅವಕಾಶ ನೀಡಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ 120 ಡಿಗ್ರಿ ಕ್ಷೇತ್ರವನ್ನು ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 48 ಮೆಗಾಪಿಕ್ಸೆಲ್ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್-ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ. ಹಾಗೆಯೇ ಡಿಜಿಟಲ್ ಸಂಯೋಜನೆಯೊಂದಿಗೆ 20x ಜೂಮ್ ಸೇರಿವೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಎಫ್‌ಎಂ ರೇಡಿಯೋ, ಬ್ಲೂಟೂತ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಭಾರತದಲ್ಲಿ 25,999ರೂ. ಗಳಿಗೆ ಬಿಡುಗಡೆ ಮಾಡಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ತನ್ನ ಮೊದಲ ಮಾರಾಟವನ್ನು ಮೇ 4, 2022 ರಂದು ಪ್ರಾರಂಭಿಸಲಿದೆ. ಖರೀದಿದಾರರು ಒಂದು-ಬಾರಿ ಸ್ಕ್ರೀನ್ ರಿಪ್ಲೇಸ್‌ಮೆಂಟ್ ಜೊತೆಗೆ ರೂ 2,999 ಮೌಲ್ಯದ ಕಾಂಪ್ಲಿಮೆಂಟರಿ ಬ್ಲೂಟೂತ್ ಸ್ಪೀಕರ್ ಅನ್ನು ಸಹ ಪಡೆಯುತ್ತಾರೆ.

Best Mobiles in India

English summary
Tecno Phantom X Launched in India, price set at Rs 25,999: Sale Date.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X