ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಬಿಡುಗಡೆ! ಪ್ರೊಸೆಸರ್‌ ಯಾವುದು?

|

ಜನಪ್ರಿಯ ಟೆಕ್ನೋ ಕಂಪೆನಿ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇದು ಟೆಕ್ನೋ ಬ್ರಾಂಡ್‌ನ ಪ್ರೀಮಿಯಂ ಸ್ಮಾರ್ಟ್ಫೋನ್ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಟೆಕ್ನೋ

ಹೌದು, ಟೆಕ್ನೋ ಸಂಸ್ಥೆ ಹೊಸ ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ಸೆಲ್ಫಿ ಕ್ಯಾಮೆರಾಗಳನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ SoC ಪ್ರೊಸೆಸರ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೊನೆಟ್ ಸಮ್ಮರ್ ಮತ್ತು ಸ್ಟಾರ್ರಿ ನೈಟ್ ಬ್ಲೂ ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಸೂಪರ್ ಅಮೋಲೆಡ್ ಕರ್ವ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್

ಪ್ರೊಸೆಸರ್

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 SoC ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದು ಆಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ 120 ಡಿಗ್ರಿ ಕ್ಷೇತ್ರವನ್ನು ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 48 ಮೆಗಾಪಿಕ್ಸೆಲ್ ಮತ್ತು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್-ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಸೂಪರ್ ನೈಟ್ ವ್ಯೂ 3.0 ಮತ್ತು ಆಪ್ಟಿಕಲ್ ಮತ್ತು ಡಿಜಿಟಲ್ ಸಂಯೋಜನೆಯೊಂದಿಗೆ 20x ಜೂಮ್ ಸೇರಿವೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಫ್ಯಾಂಟಮ್ X ಸ್ಮಾರ್ಟ್‌ಫೋನ್‌ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಎಫ್‌ಎಂ ರೇಡಿಯೋ, ಬ್ಲೂಟೂತ್ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಲೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Best Mobiles in India

English summary
Tecno Phantom X features a dual-selfie camera setup that includes a 48-megapixel sensor and an 8-megapixel sensor.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X