ಈ ದೈತ್ಯ ಮೊಬೈಲ್ ಬೆಲೆಯಲ್ಲಿ ಮತ್ತೆ ಡಿಸ್ಕೌಂಟ್!..ಗ್ರಾಹಕರು ಫಿದಾ!
ಮೊಬೈಲ್ ಮಾರುಕಟ್ಟೆಯಲ್ಲಿ ಟೆಕ್ನೋ ಕಂಪನಿಯು ಭಿನ್ನ ಫೋನ್‌ಗಳಿಂದ ಗುರುತಿಸಿಕೊಂಡಿದೆ. ಇನ್ನು ಸಂಸ್ಥೆಯು ಇತ್ತೀಚಿಗೆ ಬಿಡುಗಡೆ ಮಾಡಿರುವ 'ಟೆಕ್ನೋ ಫ್ಯಾಂಟಮ್ X2 5G' ದೈತ್ಯ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಮೊಬೈಲ್ ಈಗ ಅಮೆಜಾನ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಸಖತ್ ಡಿಸ್ಕೌಂಟ್ ಪಡೆದಿದ್ದು, ಗ್ರಾಹಕರು ಅಚ್ಚರಿಯಿಂದ ನೋಡುವಂತೆ ಆಗಿದೆ.
ಹೌದು, ಟೆಕ್ನೋ ಸಂಸ್ಥೆಯ ಹೈ ಎಂಡ್ ಮೊಬೈಲ್ ಆದ ಟೆಕ್ನೋ ಫ್ಯಾಂಟಮ್ X2 5G ಮೊಬೈಲ್ ಅಮೆಜಾನ್ ಇ ಕಾಮರ್ಸ್ ನಲ್ಲಿ ಈಗ 29% ರಷ್ಟು ರಿಯಾಯಿತಿ ಪ್ರೈಸ್‌ಟ್ಯಾಗ್ ಪಡೆದಿದೆ. ಈ ಮೊಬೈಲ್ 8GB RAM + 256GB ಸ್ಟೋರೇಜ್‌ನ ವೇರಿಯಂಟ್ 51,999 ರೂ. ಗಳ ದರವನ್ನು ಪಡೆದಿದ್ದು, ಆದರೆ ಕೊಡುಗೆಯಲ್ಲಿ ಗ್ರಾಹಕರು ಈ ಫೋನ್ ಅನ್ನು 36,999ರೂ. ಗಳ ವಿಶೇಷ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ.

ಅಂದಹಾಗೆ ಈ ದೈತ್ಯ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಪವರ್ ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಅಲ್ಲದೇ ಈ ಫೋನ್ 5,160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, 45W ಫಾಸ್ಟ್ ಚಾರ್ಜಿಂಗ್ ವ್ಯವಸ್ಥೆಯನ್ನು ಸಪೋರ್ಟ್ ಮಾಡುತ್ತದೆ. ಇನ್ನುಳಿದಂತೆ ಟೆಕ್ನೋ ಫ್ಯಾಂಟಮ್ X2 5G ಮೊಬೈಲ್‌ನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಫ್ಯಾಂಟಮ್ X2 5G ಡಿಸ್‌ಪ್ಲೇ ಮತ್ತು ರಚನೆ ಹೇಗಿದೆ : ಟೆಕ್ನೋ ಫ್ಯಾಂಟಮ್ X2 5G ಮೊಬೈಲ್ 6.8 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಅನ್ನು ಪಡೆದಿದ್ದು, ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಒಳಗೊಂಡಿದೆ.
ಅಲ್ಲದೇ ಡಿಸ್‌ಪ್ಲೇ 93.3% ಸ್ಕ್ರೀನ್ ಟು ಬಾಡಿ ಅನುಪಾತ ಅನ್ನು ಪಡೆದಿದ್ದು, 20:9 ರಚನೆಯ ಅನುಪಾತದ ರಚನೆ ಪಡೆದಿದೆ. ಇದರೊಂದಿಗೆ ಸ್ಕ್ರೀನ್ 120 Hz ರಿಫ್ರೆಶ್ ರೇಟ್ ಸಪೋರ್ಟ್ ಸಹ ಒಳಗೊಂಡಿದ್ದು, ಜೊತೆಗೆ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಒಳಗೊಂಡಿದೆ.
ಟೆಕ್ನೋ ಫ್ಯಾಂಟಮ್ X2 5G ಪ್ರೊಸೆಸರ್ ಕಾರ್ಯ ವೈಖರಿ : ಟೆಕ್ನೋ ಫ್ಯಾಂಟಮ್ X2 5G ಮೊಬೈಲ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 9000 SoC ಪ್ರೊಸೆಸರ್ ಬಲದಲ್ಲಿ ಕೆಲಸ ಮಾಡಲಿದೆ. ಇದರ ಜೊತೆಗೆ ಮಾಲಿ-G710 MC10 GPU ಬೆಂಬಲ ಸಹ ಪಡೆದಿದ್ದು, ಜೊತೆಗೆ ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಆಧಾರಿತ HiOS 12.0 ಓಎಸ್ ಸಪೋರ್ಟ್ ಇದೆ. ಹಾಗೆಯೇ ಈ ಫೋನ್ 8 GB RAM ಮತ್ತು 256 GB ಆಂತರೀಕ ಸ್ಟೋರೇಜ್ ಅನ್ನು ಪಡೆದುಕೊಂಡಿದೆ.
ಟೆಕ್ನೋ ಫ್ಯಾಂಟಮ್ X2 5G ಕ್ಯಾಮೆರಾ ರಚನೆ ವಿಶೇಷತೆ : ಟೆಕ್ನೋ ಫ್ಯಾಂಟಮ್ X2 5G ಮೊಬೈಲ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದ್ದು, ಪ್ರಾಥಮಿಕ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್, ಸೆಕೆಂಡರಿ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದರ ಜೊತೆಗೆ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಒದಗಿಸಲಾಗಿದೆ.
ಟೆಕ್ನೋ ಫ್ಯಾಂಟಮ್ X2 5G ಬ್ಯಾಟರಿ ಮತ್ತು ಇತರೆ ಆಯ್ಕೆಗಳ ಮಾಹಿತಿ : ಟೆಕ್ನೋ ಫ್ಯಾಂಟಮ್ X2 5G ಮೊಬೈಲ್ 5,160 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಪವರ್ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 45W ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4G, 5G & Wi-Fi 6, ಬ್ಲೂಟೂತ್ 5.3, GPS, OTG, NFC, ಮತ್ತು USB ಟೈಪ್-C ಪೋರ್ಟ್ ಸೌಲಭ್ಯಗಳನ್ನು ಇದು ಪಡೆದಿದೆ. ಜೊತೆಗೆ ಪ್ರಾಕ್ಸಿಮಿಟಿ ಸೆನ್ಸಾರ್, ದಿಕ್ಸೂಚಿ, ಆರು-ಆಕ್ಸಿಸ್ ಗೈರೋ ಸೆನ್ಸಾರ್ ಅನ್ನು ಹೊಂದಿದೆ.


Click it and Unblock the Notifications








