Home
ಸುದ್ದಿಜಾಲ

ನೀವು ಬೇಡಾ ಅಂದ್ರೂ, ಈ ದೈತ್ಯ ಫೋನಿಗೆ ಭಾರೀ ಡಿಸ್ಕೌಂಟ್‌ ಲಭ್ಯ!

ಟೆಕ್ನೋ ಕಂಪನಿಯು ಇತ್ತೀಚಿಗೆ ಹೊಸದಾಗಿ 'ಟೆಕ್ನೋ ಫ್ಯಾಂಟಮ್‌ X2 5G' ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದ್ದು, ಭಿನ್ನ ಫೀಚರ್ಸ್‌ಗಳಿಂದ ಗ್ರಾಹಕರನ್ನು ಆಕರ್ಷಿಸಿದೆ. ಆದರೆ ಈ ಸ್ಮಾರ್ಟ್‌ಫೋನ್‌ ಇದೀಗ ಅಮೆಜಾನ್‌ ಇ ಕಾಮರ್ಸ್‌ ತಾಣದಲ್ಲಿ ಭರ್ಜರಿ ರಿಯಾಯಿತಿ ಪಡೆದಿದ್ದು, ಗ್ರಾಹಕರು ಖುಷಿ ಪಡುವಂತೆ ಮಾಡಿದೆ.

ಹೌದು, ಟೆಕ್ನೋ ತನ್ನ ಟೆಕ್ನೋ ಫ್ಯಾಂಟಮ್‌ X2 5G (Tecno Phantom X2 5G) ಸ್ಮಾರ್ಟ್‌ಫೋನ್‌ ಅಮೆಜಾನ್‌ ಇ ಕಾಮರ್ಸ್‌ ಮಾರುಕಟ್ಟೆಯಲ್ಲಿ ಈಗ 23% ರಷ್ಟು ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಸ್ಮಾರ್ಟ್‌ಫೋನ್ 256 GB ಸ್ಟೋರೇಜ್‌ನ ವೇರಿಯಂಟ್‌ 51,999 ರೂ. ಗಳ ಬೆಲೆಯನ್ನು ಹೊಂದಿದ್ದು, ಈಗ ಗ್ರಾಹಕರು 39,999ರೂ. ಗಳ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಖರೀದಿಸಬಹುದಾಗಿದೆ.

ನೀವು ಬೇಡಾ ಅಂದ್ರೂ, ಈ ದೈತ್ಯ ಫೋನಿಗೆ ಭಾರೀ ಡಿಸ್ಕೌಂಟ್‌ ಲಭ್ಯ!

ಈ ಸ್ಮಾರ್ಟ್‌ಫೋನ್‌ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 45W ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾ ಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ಪವರ್‌ ಅನ್ನು ಸಹ ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಪಡೆದಿದೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಮತ್ತು ರಚನೆ : ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 6.8 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 93.3% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120 Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಒಳಗೊಂಡಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ನೀವು ಬೇಡಾ ಅಂದ್ರೂ, ಈ ದೈತ್ಯ ಫೋನಿಗೆ ಭಾರೀ ಡಿಸ್ಕೌಂಟ್‌ ಲಭ್ಯ!

ಪ್ರೊಸೆಸರ್‌ ಪವರ್ ಯಾವುದು : ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 4nm ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಜೊತೆಗೆ ಮಾಲಿ-G710 MC10 GPU ಸಪೋರ್ಟ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ HiOS 12.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8 GB RAM ಮತ್ತು 256 GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಹೇಗಿದೆ : ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ , ಎರಡನೇ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ನೀವು ಬೇಡಾ ಅಂದ್ರೂ, ಈ ದೈತ್ಯ ಫೋನಿಗೆ ಭಾರೀ ಡಿಸ್ಕೌಂಟ್‌ ಲಭ್ಯ!

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 5,160 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 45W ವೇಗದ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇದರಿಂದ ಫೋನ್‌ ಅನ್ನು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4G, 5G & Wi-Fi 6, ಬ್ಲೂಟೂತ್ 5.3, GPS, OTG, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ದಿಕ್ಸೂಚಿ, ಆರು-ಆಕ್ಸಿಸ್ ಗೈರೋ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Tecno Phantom X2 5G available at big Discount price on amazon; Check Offer Price and Specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+