ಇಂದು ಟೆಕ್ನೋ ಫ್ಯಾಂಟಮ್‌ X2 ಫಸ್ಟ್‌ ಸೇಲ್‌! ಏನೆಲ್ಲಾ ಆಫರ್‌ ಲಭ್ಯ!

|

ಟೆಕ್ನೋ ಕಂಪೆನಿ ಇತ್ತೀಚಿಗೆ ಪರಿಚಯಿಸಿದ ಟೆಕ್ನೋ ಫ್ಯಾಂಟಮ್‌ X2 ಸ್ಮಾರ್ಟ್‌ಫೋನ್‌ ಸಾಕಷ್ಟು ಸದ್ದು ಮಾಡ್ತಿದೆ. ತನ್ನ ಆಕರ್ಷಕ ಫೀಚರ್ಸ್‌ಗಳಿಂದ ಸ್ಮಾರ್ಟ್‌ಫೋನ್‌ ಪ್ರಿಯರನ್ನು ಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಇಂದು (ಜನವರಿ 9) ಮಧ್ಯಾಹ್ನ 12 ರಿಂದ ಅಮೆಜಾನ್‌ ಇಂಡಿಯಾ ಮೂಲಕ ಫಸ್ಟ್‌ ಸೇಲ್‌ ನಡೆಸಲಿದೆ. ಇನ್ನು ತನ್ನ ಫಸ್ಟ್‌ ಸೇಲ್‌ ಪ್ರಯುಕ್ತ ವಿಶೇಷ ಆಫರ್‌ಗಳನ್ನು ಕೂಡ ಒಳಗೊಂಡಿದ್ದು, ಈ ಆಫರ್‌ಗಳು ಜನವರಿ 31 ರವರೆಗೆ ಲಭ್ಯವಾಗಲಿದೆ.

ಸ್ಮಾರ್ಟ್‌ಫೋನ್‌

ಹೌದು, ಟೆಕ್ನೋ ಫ್ಯಾಂಟಮ್‌ X2 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು ನಡೆಯಲಿದೆ. ಈ ಸೇಲ್‌ನಲ್ಲಿ ಎಕ್ಸ್‌ಚೇಂಜ್‌ ಆಫರ್‌, ಇಎಂಐನಂತಹ ಆಫರ್‌ಗಳು ಕೂಡ ದೊರೆಯಲಿವೆ. ಇನ್ನು ಟೆಕ್ನೊ ಫ್ಯಾಂಟಮ್‌ X2 ಸ್ಮಾರ್ಟ್‌ಫೋನ್‌ 4nm ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌ ಲಭ್ಯವಾಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌?

ಫಸ್ಟ್‌ ಸೇಲ್‌ನಲ್ಲಿ ಏನೆಲ್ಲಾ ಆಫರ್‌?

ಟೆಕ್ನೋ ಫ್ಯಾಂಟಮ್‌ X2 ಸ್ಮಾರ್ಟ್‌ಫೋನ್‌ ಫಸ್ಟ್‌ ಸೇಲ್‌ ಇಂದು (ಜನವರಿ 9) ಮಧ್ಯಾಹ್ನ 12 ರಿಂದ ಅಮೆಜಾನ್‌ ಪ್ಲಾಟ್‌ಫಾರ್ಮ್‌ ಮೂಲಕ ನಡೆಯಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 39,999ರೂ. ಆಗಿದ್ದು, ವಿಶೇಷ ಲಾಂಚ್‌ ಆಫರ್‌ ಕೂಡ ದೊರೆಯಲಿದೆ. ಇದರಲ್ಲಿ ಎಕ್ಸ್‌ಚೇಂಜ್‌ ಆಫರ್‌ನಲ್ಲಿ (ನಿಮ್ಮ ಡಿವೈಸ್‌ನ ಗುಣಮಟ್ಟದ ಆಧಾರದ ಮೇಲೆ)5,000 ರೂ.ವರೆಗೂ ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ. ಅಲ್ಲದೆ 12 ತಿಂಗಳ ಅಮೆಜಾನ್ ಪ್ರೈಮ್ ಸದಸ್ಯತ್ವವನ್ನು ಸಹ ಪಡೆಯಬಹುದು. ಹಾಗೆಯೇ 6,667ರೂ. ಗಳಿಂದ ಪ್ರಾರಂಭವಾಗುವ ನೋ ಕಾಸ್ಟ್‌ EMI ಕೂಡ ಲಭ್ಯವಿದೆ.

ಫೀಚರ್ಸ್‌ ಹೇಗಿದೆ?

ಫೀಚರ್ಸ್‌ ಹೇಗಿದೆ?

ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 6.8 ಇಂಚಿನ ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 93.3% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದ್ದು, 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು 120Hz ರಿಫ್ರೆಶ್‌ ರೇಟ್‌ ಬೆಂಬಲವನ್ನು ಒಳಗೊಂಡಿದೆ. ಇದು ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 4nm ಮೀಡಿಯಾಟೆಕ್‌ ಡೈಮೆನ್ಸಿಟಿ 9000 SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಜೊತೆಗೆ ಮಾಲಿ-G710 MC10 GPU ಸಪೋರ್ಟ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12-ಆಧಾರಿತ HiOS 12.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 256GB ಇನ್‌ಬಿಲ್ಟ್‌ ಸ್ಟೋರೇಜ್‌ ಅನ್ನು ಒಳಗೊಂಡಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ , ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಫ್ಯಾಂಟಮ್‌ X2 5G ಸ್ಮಾರ್ಟ್‌ಫೋನ್‌ 5,160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ, ಇದು 45W ವೇಗದ ಚಾರ್ಜಿಂಗ್‌ನೊಂದಿಗೆ ಬರುತ್ತದೆ. ಇದರಿಂದ ಫೋನ್‌ ಅನ್ನು ಕೇವಲ 20 ನಿಮಿಷಗಳಲ್ಲಿ 50% ಚಾರ್ಜ್ ಮಾಡಬಹುದು ಎಂದು ಕಂಪನಿ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 2.4G, 5G & Wi-Fi 6, ಬ್ಲೂಟೂತ್ 5.3, GPS, OTG, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್‌, ದಿಕ್ಸೂಚಿ, ಆರು-ಆಕ್ಸಿಸ್ ಗೈರೋ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Tecno Phantom X2 first sale in india today: price, specifications

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X