ದೈತ್ಯ ಟೆಕ್ನೋ ಫ್ಯಾಂಟಮ್ X2 ಫೋನ್‌ಗಾಗಿ ಪ್ರೀ-ಬುಕಿಂಗ್‌ ಶುರು!..ಡಿಸ್ಕೌಂಟ್‌ ಏನಿದೆ?

|

ಟೆಕ್ನೋ ಕಂಪನಿಯು ನೂತನವಾಗಿ ಬಿಡುಗಡೆ ಮಾಡಿರುವ ಅಗ್ಗದ ಬೆಲೆಯ ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ಫೋನ್‌ ಭಾರತದಲ್ಲಿ ಇಂದು ಪ್ರಿ- ಆರ್ಡರ್‌ಗೆ ಲಭ್ಯವಾಗಲಿದೆ. ಜನಪ್ರಿಯ ಇ ಕಾಮರ್ಸ್‌ ತಾಣ ಅಮೆಜಾನ್‌ ಮೂಲಕ ಮಧ್ಯಾಹ್ನ 12 ರಂದು ಈ ಸ್ಮಾರ್ಟ್‌ಫೋನ್ ಗಾಗಿ ಮುಂಗಡ ಬುಕಿಂಗ್ ಮಾಡಬಹುದಾಗಿದೆ. ಇನ್ನು ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ.

ಸ್ಮಾರ್ಟ್‌ಫೋನ್‌

ಹೌದು, ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ಫೋನ್‌ ಗಾಗಿ ಗ್ರಾಹಕರು ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಇಂದಿನಿಂದ ಮುಂಗಡ ಬುಕಿಂಗ್ ಮಾಡಬಹುದಾಗಿದೆ. ಇನ್ನು ಟೆಕ್ನೋ ಫ್ಯಾಂಟಮ್ X2 ಅನ್ನು ಮುಂಗಡವಾಗಿ ಆರ್ಡರ್ ಮಾಡುವವರಿಗೆ ಫ್ಯಾಂಟಮ್ X3 ಗೆ ಉಚಿತ ಅಪ್‌ಗ್ರೇಡ್ ಮಾಡುವ ಭರವಸೆಯನ್ನು ಟೆಕ್ನೋ ನೀಡುತ್ತಿದೆ. ಈ ಫೋನ್ 8 GB RAM + 256 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಈ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸಲ್‌ ಆಗಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ಫೋನ್‌ 1,080 x 2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.8 ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಸೂಪರ್ ಅಮೋಲೆಡ್ ಕರ್ವ್‌ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದುಕೊಂಡಿದೆ.

ಪ್ರೊಸೆಸರ್ ಪವರ್ ಎಷ್ಟು

ಪ್ರೊಸೆಸರ್ ಪವರ್ ಎಷ್ಟು

ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ ಫೋನ್‌ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 9000 ಪ್ರೊಸೆಸರ್‌ ಬಲ ಪಡೆದುಕೊಂಡಿದೆ. ಇದು ಆಡ್ರಾಯ್ಡ್‌ 12 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8 GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ ಸೆನ್ಸಾರ್

ಕ್ಯಾಮೆರಾ ಸೆನ್ಸಾರ್

ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌, ಎರಡನೆ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ 120 ಡಿಗ್ರಿ ಕ್ಷೇತ್ರವನ್ನು ಹೊಂದಿದೆ ಮತ್ತು ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಪಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಬ್ಯಾಟರಿ ಮತ್ತು ಇತರೆ ಸೌಲಭ್ಯ

ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ಫೋನ್‌ 5160mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಎಲ್‌ಟಿಇ, ಜಿಪಿಎಸ್, ಎಫ್‌ಎಂ ರೇಡಿಯೋ, ಬ್ಲೂಟೂತ್ ಮತ್ತು ಯುಎಸ್‌ಬಿ ಟೈಪ್ ಸಿ ಪೋರ್ಟ್ ಬೆಂಬಲಿಸಲಿದೆ. ಇದು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ ಅನ್ನು ಹೊಂದಿದೆ.

ಎರಡು

ಟೆಕ್ನೋ ಫ್ಯಾಂಟಮ್ X2 ಸ್ಮಾರ್ಟ್‌ಫೋನ್‌ ಎರಡು ಬಣ್ಣ ಆಯ್ಕೆಗಳಲ್ಲಿ ಬರುತ್ತದೆ. ಅವುಗಳು ಕ್ರಮವಾಗಿ ಮೂನ್‌ಲೈಟ್ ಸಿಲ್ವರ್ ಮತ್ತು ಸ್ಟಾರ್‌ಡಸ್ಟ್ ಗ್ರೇ ಆಗಿವೆ. ಈ ಫೋನ್ 164.6 × 72.7 × 8.9mm ಅಳತೆ ಮತ್ತು 210 ಗ್ರಾಂ ತೂಕ ಪಡೆದಿದೆ.

Best Mobiles in India

English summary
Tecno Phantom X2 Set to Go for Pre-Order At 12 Noon Today Via Amazon India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X