ಅಗ್ಗದ ಬೆಲೆಯ ಟೆಕ್ನೋ ಪಾಪ್‌ 5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ಟೆಕ್ನೋ ಸ್ಮಾರ್ಟ್‌ಫೋನ್‌ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಬಜೆಟ್‌ ಬೆಲೆಯಲ್ಲಿ ಪರಿಚಯಿಸಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಹೊಸ ಟೆಕ್ನೋ ಪಾಪ್‌ 5 ಪ್ರೊ ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಭಾರತದ 14 ಪ್ರಾದೇಶಿಕ ಭಾಷೆಗಳಿಗೆ ಬೆಂಬಲವನ್ನು ನೀಡಲಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ಭಾರತದಲ್ಲಿ ಟೆಕ್ನೋ ಪಾಪ್‌ 5 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಇದು ಸ್ಪ್ಲಾಶ್ ಪ್ರತಿರೋಧಕ್ಕಾಗಿ IPX2 ರೇಟಿಂಗ್ ಅನ್ನು ಹೊಂದಿದೆ. ಜೊತೆಗೆ ಈ ಫೋನ್‌ ಟೆಕ್ನೋ ಕಂಪನಿಯ HiOS ಸ್ಕಿನ್‌ನೊಂದಿಗೆ Android 11 Go ಆವೃತ್ತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ಟೆಕ್ನೋ ಪಾಪ್ 5 ಪ್ರೊ ಸ್ಮಾರ್ಟ್‌ಫೋನ್‌ 6.52 ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆ ಮತ್ತು 480 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದಲ್ಲದೆ ಈ ಡಿಸ್‌ಪ್ಲೇ 120Hz ನ ಟಚ್‌ ಸ್ಪಾಪ್ಲಿಂಗ್‌ ರೇಟ್‌ ಅನ್ನು ಸಹ ಬೆಂಬಲಿಸುತ್ತದೆ. ಇದು 90% ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಪಡೆದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಪ್ರೊಸೆಸರ್‌ ಸಾಮರ್ಥ್ಯವನ್ನು ಬಹಿರಂಗಪಡಿಸಿಲ್ಲ. ಆದರೆ ಇದು ಆಂಡ್ರಾಯ್ಡ್‌ 11 Go ಆವೃತ್ತಿಯನ್ನು ಆಧರಿಸಿ HiOS 7.6 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಯಾವುದು?

ಕ್ಯಾಮೆರಾ ಯಾವುದು?

ಟೆಕ್ನೋ ಪಾಪ್ 5 ಪ್ರೊ ಸ್ಮಾರ್ಟ್‌ಫೋನ್‌ ಎಐ ಲೆನ್ಸ್ ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಡ್ಯುಯಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಎಐ ಪೋಟ್ರೇಟ್ ಮೋಡ್, ಎಚ್‌ಡಿಆರ್ ಮೋಡ್ ಮತ್ತು ಫಿಲ್ಟರ್‌ಗಳನ್ನು ಬೆಂಬಲಿಸುತ್ತದೆ. ಇದಲ್ಲದೆ ಫ್ರಂಟ್ ಫೇಸಿಂಗ್ ಫ್ಲ್ಯಾಷ್‌ ಬೆಂಬಲಿಸುವ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಈ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಟೆಕ್ನೋ ಕಂಪನಿಯ ಪ್ರಕಾರ 54 ಗಂಟೆಗಳ ಟಾಕ್‌ಟೈಮ್ ಅಥವಾ 120 ಗಂಟೆಗಳ ಮ್ಯೂಸಿಕ್‌ ಪ್ಲೇಬ್ಯಾಕ್ ಟೈಂ ಅನ್ನು ನೀಡುತ್ತದೆ. ಇದಲ್ಲದೆ ಟೆಕ್ನೋ ಪಾಪ್ 5 ಪ್ರೊ ಬ್ಯಾಟರಿ ಲ್ಯಾಬ್ ಫೀಚರ್ಸ್‌ ಮತ್ತು ವಿಸ್ತೃತ ಬ್ಯಾಟರಿ ಬಾಳಿಕೆಗಾಗಿ ಅಲ್ಟ್ರಾ ಪವರ್ ಸೇವಿಂಗ್ ಮೋಡ್ ಸೇರಿದಂತೆ ಸಾಫ್ಟ್‌ವೇರ್ ಆಪ್ಟಿಮೈಸೇಶನ್‌ಗಳನ್ನು ಹೊಂದಿದೆ. ಜೊತೆಗೆ ವಾಲ್ಟ್ 2.0, ಸ್ಮಾರ್ಟ್ ಪ್ಯಾನೆಲ್ 2.0, ಕಿಡ್ಸ್ ಮೋಡ್, ಸಾಮಾಜಿಕ ಟರ್ಬೊ, ಡಾರ್ಕ್ ಥೀಮ್‌ಗಳು, ಪೀಕ್ ಪ್ರೂಫ್, ವಾಯ್ಸ್ ಚಾರ್ಜರ್ ಮತ್ತು ಆಂಟಿ-ಥೆಫ್ಟ್ ಅಲಾರಂ ಸೇರಿದಂತೆ HiOSನಂತಹ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ಟೆಕ್ನೋ ಪಾಪ್‌ 5 ಪ್ರೊ ಸ್ಮಾರ್ಟ್‌ಫೋನ್‌ 3GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಆಯ್ಕೆಗೆ 8,499ರೂ.ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಡೀಪ್‌ಸೀ ಲಸ್ಟರ್, ಐಸ್ ಬ್ಲೂ ಮತ್ತು ಸ್ಕೈ ಸಯಾನ್ ಬಣ್ಣ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನೂ ಕಂಪನಿಯ ವೆಬ್‌ಸೈಟ್‌ನಲ್ಲಿ ಅಥವಾ Amazon ಮತ್ತು Flipkart ನಂತಹ ಇ-ಕಾಮರ್ಸ್ ವೆಬ್‌ಸೈಟ್‌ಗಳಲ್ಲಿ ಇದರ ಮಾರಾಟದ ಬಗ್ಗೆ ಯಾವುದೇ ಮಾಹಿತಿ ಪಟ್ಟಿ ಮಾಡಿಲ್ಲ.

Best Mobiles in India

English summary
Tecno Pop 5 Pro price in India is set at Rs. 8,499 for the single 3GB RAM and 32GB inbuilt storage variant.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X