Just In
- 10 hrs ago
ಸೋನಿ ಸಂಸ್ಥೆಯಿಂದ ಹೊಸ ಸ್ಮಾರ್ಟ್ಟಿವಿ ಲಾಂಚ್! ಫೀಚರ್ಸ್ ಹೇಗಿದೆ ಗೊತ್ತಾ?
- 11 hrs ago
ಇದೇ ತಿಂಗಳು 5G ಸೇವೆ ಬರಲಿದೆ ಅಂತಾ ನಿರೀಕ್ಷಿಸುತ್ತಿದ್ದೀರಾ?..ಈ ಸುದ್ದಿಯನ್ನೊಮ್ಮೆ ಗಮನಿಸಿ!
- 12 hrs ago
ಅತೀ ಕಡಿಮೆ ಬೆಲೆಗೆ ಲಗ್ಗೆ ಇಟ್ಟ 'ಇನ್ಫಿನಿಕ್ಸ್ ಸ್ಮಾರ್ಟ್ 6 HD' ಫೋನ್!
- 13 hrs ago
ಸ್ಮಾರ್ಟ್ವಾಚ್ ಇಲ್ಲವೇ ಸ್ಮಾರ್ಟ್ಬ್ಯಾಂಡ್ ಖರೀದಿಸುವ ಪ್ಲ್ಯಾನ್ ಇದ್ರೆ, ಈ ಚಾನ್ಸ್ ಕಳ್ಕೋಬೇಡಿ!
Don't Miss
- News
ಸಿದ್ದರಾಮೋತ್ಸವದಿಂದ ಬಿಜೆಪಿಯಲ್ಲ ಕಾಂಗ್ರೆಸ್ನಲ್ಲೇ ನಡುಕ!
- Movies
Exclusive: ದರ್ಶನ್ ಬೆದರಿಕೆ ಹಾಕಿದ್ದು ಹೇಗೆ? ಏಕೆ? ವಿವರಿಸಿದ ನಿರ್ಮಾಪಕ ಭರತ್
- Sports
Asia Cup 2022: ಏಷ್ಯಾಕಪ್ಗೆ ಪ್ರಕಟವಾದ ತಂಡದಲ್ಲಿ ಬೌಲಿಂಗ್ ಅಸ್ತ್ರ ಬುಮ್ರಾ ಇಲ್ಲದಿರಲು ಇದೇ ಕಾರಣ
- Automobiles
ಹೊಸ ತಂತ್ರಜ್ಞಾನ ಪ್ರೇರಿತ ಹೋಂಡಾ ಸಿಬಿ300ಎಫ್ ಸ್ಟ್ರೀಟ್ಫೈಟರ್ ಬೈಕ್ ಬಿಡುಗಡೆ
- Lifestyle
Raksha Bandhan Horoscope 2022: ರಕ್ಷಾ ಬಂಧನದ ದಿನ ಯಾವ ರಾಶಿಗೆ ಅದೃಷ್ಟವಿದೆ, ಯಾರೆಲ್ಲಾ ಎಚ್ಚರಿಕೆಯಿಂದಿರಬೇಕು?
- Finance
ಕೇರಳ ಲಾಟರಿ: 'ವಿನ್ ವಿನ್ W-680' ಟಿಕೆಟ್ ವಿಜೇತರ ಪಟ್ಟಿ ಇಲ್ಲಿದೆ
- Travel
ಭಾರತದಲ್ಲಿರುವ ಕೆಲವು ಸ್ಥಳಗಳು ಅಸ್ತಮಾ ರೋಗಿಗಳಿಗೆ ಸಲ್ಪ ಮಟ್ಟದಲ್ಲಿ ಅಪಾಯಕಾರಿಯಾಗಬಹುದು!
- Education
CSB Recruitment 2022 : 66 ಸೈಂಟಿಸ್ಟ್-ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ ಅನಾವರಣ!..ಫೀಚರ್ಸ್ ಹೇಗಿವೆ?
ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿರುವ ಟೆಕ್ನೋ ಮೊಬೈಲ್ ಕಂಪೆನಿಯು ಎಂಟ್ರಿ ಲೆವೆಲ್ ಸ್ಮಾರ್ಟ್‌ಫೋನ್‌ಗಳ ಪಟ್ಟಿ ಸಹ ಹೊಂದಿದೆ. ಆ ಪಟ್ಟಿಗೆ ಟೆಕ್ನೋ ಕಂಪನಿಯು ಈಗ ಹೊಸದಾಗಿ ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ ಅನ್ನು ಸೇರ್ಪಡೆ ಮಾಡಿದೆ. ಈ ಫೋನ್ ಆರಂಭಿಕ ಹಂತದ ಸ್ಮಾರ್ಟ್‌ಫೋನ್ ಆಗಿದ್ದು, ತನ್ನ ವರ್ಗದಲ್ಲೇ ಉತ್ತಮ ಫೀಚರ್ಸ್‌ಗಳನ್ನು ಒಳಗೊಂಡಿದೆ.

ಹೌದು, ಟೆಕ್ನೋ ಮೊಬೈಲ್ ಕಂಪನಿಯು ನೂತನವಾಗಿ ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ ಅನ್ನು ಅನಾವರಣ ಮಾಡಿದೆ. ಈ ಫೋನ್ 16GB ಆಂತರೀಕ ಸಂಗ್ರಹ ಸಾಮರ್ಥ್ಯವನ್ನು ಒಳಗೊಂಡಿದ್ದು, ಆಂಡ್ರಾಯ್ಡ್ 10 ಓಎಸ್ ಬೆಂಬಲವನ್ನು ಪಡೆದಿದೆ. ಹಾಗೆಯೇ ಈ ಫೋನ್ 2,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಸಿಂಗಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ ಬ್ಲೂ ಮತ್ತು ಬ್ಲ್ಯಾಕ್ ಬಣ್ಣಗಳ ಆಯ್ಕೆ ಹೊಂದಿದೆ. ಹಾಗಾದರೇ ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ ಇತರೆ ಫೀಚರ್ಸ್‌ಗಳು ಏನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ 480x584 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 5 ಇಂಚಿನ FWVGA ಮಾದರಿಯ ಡಿಸ್‌ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇಯ ಮುಂಭಾಗದಲ್ಲಿ ತೆಳುವಾದ ಅಂಚನ್ನು ಹೊಂದಿದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 10 ಓಎಸ್ (ಗೋ ಆವೃತ್ತಿ) ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ ಈ ಫೋನ್ 16GB ಆಂತರೀಕ ಸಂಗ್ರಹ ಸಾಮರ್ಥ್ಯವನ್ನು ಪಡೆದಿದ್ದು, ಎಸ್‌ಡಿ ಕಾರ್ಡ್ ಮೂಲಕ ಬಾಹ್ಯ ಮೆಮೊರಿಯನ್ನು ವಿಸ್ತರಿಸುವ ಆಯ್ಕೆ ಸಹ ಒಳಗೊಂಡಿದೆ.

ಇನ್ನು ಸ್ಮಾರ್ಟ್‌ಫೋನ್ ಹಿಂಬದಿಯಲ್ಲಿ ಸಿಂಗಲ್ ರಿಯರ್ ಕ್ಯಾಮೆರಾ ರಚನೆಯನ್ನು ಹೊಂದಿದ್ದು, ಅದು 5 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಮುಂಭಾಗದಲ್ಲಿ ಸೆಲ್ಫಿ ಕ್ಯಾಮೆರಾವು 2 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇದರೊಂದಿಗೆ ಕ್ಯಾಮೆರಾವು AI ಫೇಸ್ ಬ್ಯೂಟಿ, HDR, ಸ್ಮೈಲ್ ಶಿಟ್, AI ಸ್ಟಿಕ್ಕರ್ ಮತ್ತು ಬೊಕೆ ಮೋಡ್ ಆಯ್ಕೆಗಳ ಬೆಂಬಲ ಸಹ ಪಡೆದಿದೆ.
ಟೆಕ್ನೋ ಪಾಪ್ 5C ಸ್ಮಾರ್ಟ್‌ಫೋನ್ 2,400mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಹಾಗೆಯೇ ಫೇಸ್ ರಿಕಗ್ನೈಸ್ ಬೆಂಬಲದೊಂದಿಗೆ ಬರುತ್ತದೆ. ಇನ್ನು ಈ ಫೋನ್ 145.20x74.05x9.85mm ಸುತ್ತಳತೆಯನ್ನು ಪಡೆದಿದ್ದು, 150 ಗ್ರಾಂ ತೂಕವನ್ನು ಹೊಂದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v4.2, ವೈ-ಫೈ 2.4GHz, ಜಿಪಿಎಸ್, ಜಿಎಸ್‌ಎಮ್, ನ್ಯಾನೋ ಸಿಮ್, ಮೈಕ್ರೋ USB ಪೋರ್ಟ್, ಜಿಪಿಆರ್‌ಎಸ್, ಎಫ್‌ಎಮ್ ಮತ್ತು ಇತರೆ ಫೀಚರ್ಸ್‌ಗಳು ಸೇರಿವೆ.

ಹಾಗೆಯೇ ಟೆಕ್ನೋ ಕಂಪೆನಿಯು ನೂತನವಾಗಿ ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್‌ಫೋನಿನ 3GB RAM ಆವೃತ್ತಿಯ/ ವೇರಿಯಂಟ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಇದು ಮೀಡಿಯಾ ಟೆಕ್ G25 SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಗೇಮಿಂಗ್‌ಗೆ ಪೂರಕ ಅನಿಸಲಿದೆ. ಈ ಹಿಂದಿನ 2GB RAM ವೇರಿಯಂಟ್ ಫೋನ್ ಮೀಡಿಯಾ ಟೆಕ್ ಹಿಲಿಯೋ A25 SoC ಪ್ರೊಸೆಸರ್ ಅನ್ನು ಒಳಗೊಂಡಿದೆ. ಹಾಗಾದರೇ ಟೆಕ್ನೋ ಸ್ಪಾರ್ಕ್ 8 ಹೊಸ ಆವೃತ್ತಿಯ ಇತರೆ ಫೀಚರ್ಸ್ ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಟೆಕ್ನೋ ಸ್ಪಾರ್ಕ್ 8 ಸ್ಮಾರ್ಟ್ ಫೋನ್ 6.52 ಹೆಚ್‌ಡಿ + ಡಾಟ್ ನಾಚ್ ಡಿಸ್‌ಪ್ಲೇ ಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120-Hz ಟಚ್ ರೆಸ್ಪಾನ್ಸ್ ರೇಟ್ ಅನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 88.6% ಬಾಡಿ ಟು ಅನುಪಾತವನ್ನು ಪಡೆದುಕೊಂಡಿದೆ. ಈ ಫೋನ್ ಮೀಡಿಯಾ ಟೆಕ್ G25 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಗೋ ಬೆಂಬಲ ದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 64 GB ಹಾಗೂ 3GB RAM + 32GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ.
ಹಾಗೆಯೇ ಈ ಫೋನ್ 16 ಮೆಗಾ ಪಿಕ್ಸೆಲ್ AI ಡ್ಯುಯಲ್ ಹೈ-ರೆಸಲ್ಯೂಶನ್ ಕ್ಯಾಮೆರಾ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಕ್ಯಾಮೆರಾ ಡ್ಯುಯೆಲ್ ಫ್ಲ್ಯಾಷ್ ಉತ್ತಮ ಗುಣಮಟ್ಟದ, ಸ್ಮರಣೀಯ ಛಾಯಾಚಿತ್ರಗಳನ್ನು ಸೆರೆಹಿಡಿಯಲು ಅನುವು ಮಾಡಿಕೊಡುತ್ತದೆ. ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, GPS, ಮೈಕ್ರೋ-USB, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
44,999
-
15,999
-
20,449
-
7,332
-
18,990
-
31,999
-
54,999
-
17,091
-
17,091
-
13,999
-
31,830
-
31,499
-
26,265
-
24,960
-
21,839
-
15,999
-
11,570
-
11,700
-
7,070
-
7,086