ಟೆಕ್ನೊ ಪಾಪ್ 5P ಸ್ಮಾರ್ಟ್‌ಫೋನ್ ಬಿಡುಗಡೆ!..ವಿಶೇಷತೆ ಏನು?

|

ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇದರಲ್ಲಿ ಟೆಕ್ನೋ ಕಂಪೆನಿ ಕೂಡ ಒಂದಾಗಿದೆ. ಸದ್ಯ ಇದೀಗ ಟೆಕ್ನೋ ಕಂಪೆನಿ ಹೊಸ ಟೆಕ್ನೊ ಪಾಪ್ 5P ಸ್ಮಾರ್ಟ್‌ಫೋನ್ ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಾಟರ್‌ಡ್ರಾಪ್-ಶೈಲಿಯ ನಾಚ್ ಅನ್ನು ಹೊಂದಿದೆ. ಅಲ್ಲದೆ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ.

ಟೆಕ್ನೋ

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೊ ಪಾಪ್ 5P ಸ್ಮಾರ್ಟ್‌ಫೋನ್ ಅನ್ನು ನೈಜೀರಿಯಾದಲ್ಲಿ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.52 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇದು 1.3GHz ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಟೆಕ್ನೊ ಪಾಪ್ 5P ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪಾಪ್ 5P ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52-ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ ವಾಟರ್‌ಡ್ರಾಪ್-ಶೈಲಿಯ ನಾಚ್‌ನೊಂದಿಗೆ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ 1.3GHz ಆಕ್ಟಾ-ಕೋರ್ ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 (ಗೋ ಎಡಿಷನ್) ಆಧಾರಿತ HiOS ಸಾಫ್ಟ್‌ವೇರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಟೆಕ್ನೋ ಪಾಪ್ 5P ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಪಾಪ್ 5P ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 22 ಗಂಟೆಗಳ 3G ಕರೆ ಮಾಡುವಿಕೆ, 11 ಗಂಟೆಗಳ ವೀಡಿಯೋ ನೋಡುವಿಕೆ, 100 ಗಂಟೆಗಳ ಸಂಗೀತವನ್ನು ಕೇಳುವ ಮತ್ತು 790 ಗಂಟೆಗಳ 3G ಸ್ಟ್ಯಾಂಡ್‌ಬೈ ನೀಡುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವಾಯರ್‌ಲೆಸ್ ಎಫ್‌ಎಂ, ಜಿಎಸ್‌ಎಂ, ಡಬ್ಲ್ಯೂಸಿಡಿಎಂಎ, ವೈ-ಫೈ, ಬ್ಲೂಟೂತ್ ಮತ್ತು ಜಿಪಿಎಸ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಫೋನ್ ಫೇಸ್ ಅನ್‌ಲಾಕ್ ಅನ್ನು ಸಹ ಬೆಂಬಲಿಸುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೊ ಪಾಪ್ 5P ಸ್ಮಾರ್ಟ್‌ಫೋನ್‌ ಏಕೈಕ 2GB RAM + 32GB ಸಂಗ್ರಹ ಮಾದರಿಗೆ ಬೆಲೆ NGN 44,000 (ಸುಮಾರು 7,900ರೂ,) ಬೆಲೆಯನ್ನು ಹೊಂದಿದೆ. ಇನ್ನು ಈ ಫೋನ್ ಅನ್ನು ರೋಸ್ ಗೋಲ್ಡ್ ಮತ್ತು ಈಥರ್ ಬ್ಲಾಕ್ ಬಣ್ಣ ಆಯ್ಕೆಗಳಲ್ಲಿ ಪಟ್ಟಿ ಮಾಡಲಾಗಿದೆ. ಇದು ಈಗಾಗಲೇ Jumia.com ನಲ್ಲಿ ಮಾರಾಟದಲ್ಲಿದೆ. ಟೆಕ್ನೊ ಚಾರ್ಜರ್ ಮತ್ತು ಚಾರ್ಜಿಂಗ್ ಕೇಬಲ್ ಜೊತೆಗೆ, ಬಾಕ್ಸ್ ಒಳಗೆ ಉಚಿತ ಕೇಸ್ ಮತ್ತು ಇಯರ್‌ಫೋನ್‌ಗಳನ್ನು ಜೋಡಿಸುತ್ತದೆ.

Best Mobiles in India

English summary
Tecno Pop 5P smartphone has launched as the latest offering by the company.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X