ಟೆಕ್ನೋ ಸಂಸ್ಥೆಯಿಂದ ಮತ್ತೊಂದು ಅಗ್ಗದ ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ!

|

ಟೆಕ್ನೋ ಕಂಪೆನಿ ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್‌ ಮಾರುಕಟ್ಟೆಯಲ್ಲಿ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಅಗ್ಗದ ಬೆಲೆಯಲ್ಲಿ ಪರಿಚಯಿಸಿದೆ. ಅದರ ಮುಂದುವರಿದ ಭಾಗವಾಗಿ ಸಂಸ್ಥೆಯು ಇದೀಗ ತನ್ನ ಪಾಪ್‌ ಸರಣಿಯಲ್ಲಿ ಹೊಸ ಟೆಕ್ನೋ ಪಾಪ್‌ 5X ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಟೆಕ್ನೋ ಸಂಸ್ಥೆಯಿಂದ ಮತ್ತೊಂದು ಅಗ್ಗದ ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ!

ಹೌದು, ಟೆಕ್ನೋ ಕಂಪೆನಿ ಮೆಕ್ಸಿಕೋದಲ್ಲಿ ನೂತನವಾಗಿ ಟೆಕ್ನೋ ಪಾಪ್‌ 5X ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಪಡೆದಿದೆ. ಹಾಗೆಯೇ ಈ ಫೋನ್ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು ವಾಟರ್‌ ಡ್ರಾಪ್ ನಾಚ್‌ ವಿನ್ಯಾಸವನ್ನು ಪಡೆದಿದೆ. ಇನ್ನುಳಿದಂತೆ ಟೆಕ್ನೋ ಪಾಪ್‌ 5X ಸ್ಮಾರ್ಟ್‌ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಎನ್ನುವುದನ್ನು ಮುಂದಿನ ಸ್ಲೈಡ್‌ಗಳಲ್ಲಿ ತಿಳಿಯೋಣ.

ಟೆಕ್ನೋ ಸಂಸ್ಥೆಯಿಂದ ಮತ್ತೊಂದು ಅಗ್ಗದ ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ!

ಟೆಕ್ನೋ ಪಾಪ್‌ 5X ಸ್ಮಾರ್ಟ್‌ಫೋನ್‌ 720 x 1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ + ವಾಟರ್‌ ಡ್ರಾಪ್ ನಾಚ್‌ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 720x1,600 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಉತ್ತಮ ರೀಫ್ರೇಶ್ ರೇಟ್ ಸಹ ಪಡೆದಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಹಾಗೆಯೇ ಈ ಫೋನ್ 166x75.90x8.5mm ಅಳತೆ ಹೊಂದಿದ್ದು, 150ಗ್ರಾಂ ತೂಕ ಪಡೆದಿದೆ.

ಹಾಗೆಯೇ ಈ ಸ್ಮಾರ್ಟ್‌ಫೋನ್‌ 1.4GHz ಕ್ವಾಡ್ ಕೋರ್ SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸಲಿದ್ದು, ಅದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 10 ಓಎಸ್‌ ಬೆಂಬಲವನ್ನು ಒಳಗೊಂಡಿದೆ. ಇದರೊಂದಿಗೆ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಇತರೆ ಎರಡು QVGA ರೆಸಲ್ಯೂಶನ್ ಕ್ಯಾಮೆರಾಗಳನ್ನು ಹೊಂದಿದೆ. ಅದಲ್ಲದೇ ಮುಂಭಾಗದಲ್ಲಿ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಟೆಕ್ನೋ ಸಂಸ್ಥೆಯಿಂದ ಮತ್ತೊಂದು ಅಗ್ಗದ ಫೋನ್ ಲಾಂಚ್!..ಟ್ರಿಪಲ್ ಕ್ಯಾಮೆರಾ!

ಟೆಕ್ನೋ ಪಾಪ್‌ 5X ಸ್ಮಾರ್ಟ್‌ಫೋನ್‌ 32GB ಅಂತರ್ಗತ ಸಂಗ್ರಹಣೆಯೊಂದಿಗೆ ಬರುತ್ತದೆ. ಮೈಕ್ರೊ ಎಸ್‌ಡಿ ಕಾರ್ಡ್‌ ಸ್ಲಾಟ್ ಮೂಲಕ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi, ಬ್ಲೂಟೂತ್, ಜಿಪಿಎಸ್‌ ಮತ್ತು ಎಫ್‌ಎಮ್‌ ಆಯ್ಕೆಗಳು ಸೇರಿವೆ. ಹಾಗೆಯೇ ಈ ಫೋನ್ 4,000mAh ಬ್ಯಾಟರಿ ಬ್ಯಾಕ್‌ಅಪ್‌ ಸಪೋರ್ಟ್‌ ಅನ್ನು ಒಳಗೊಂಡಿದ್ದು, AI-ಆಧಾರಿತ ವಿದ್ಯುತ್ ನಿರ್ವಹಣೆಯು 10 ಪ್ರತಿಶತದಷ್ಟು ಸುಧಾರಿತ ಬ್ಯಾಟರಿ ಕಾರ್ಯಕ್ಷಮತೆಯನ್ನು ನೀಡುತ್ತದೆ ಎಂದು ಕಂಪನಿಯು ಹೇಳುತ್ತದೆ.

ಇನ್ನು ಇತ್ತೀಚಿಗೆ ಟೆಕ್ನೋ ಸಂಸ್ಥೆಯು ಭಾರತದಲ್ಲಿ ಟೆಕ್ನೋ ಪಾಪ್ 5 LTE ಸ್ಮಾರ್ಟ್‌ಫೋನ್‌ ಲಾಂಚ್ ಮಾಡಿದೆ. ಈ ಫೋನ್ 720x1,560 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.52 ಇಂಚಿನ HD+ IPS LCD ಡಿಸ್‌ಪ್ಲೇ ಹೊಂದಿದೆ. ಹಾಗೆಯೇ ಈ ಫೋನ್‌ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಜೊತೆಗೆ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ f/2.2 ಲೆನ್ಸ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ f/2.4 ಲೆನ್ಸ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ f/2.0 ಲೆನ್ಸ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

Best Mobiles in India

English summary
Tecno Pop 5X smartphone sports a 4,000mAh battery and a Micro-USB port.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X