Just In
- 10 hrs ago
ಒಪ್ಪೋ ರೆನೋ 8T 5G ಫಸ್ಟ್ ಲುಕ್: ಪವರ್ಫುಲ್ ಫೀಚರ್ಸ್ ಜೊತೆಗೆ ಹೊಸ ಲುಕ್!
- 13 hrs ago
ಕ್ಯಾನನ್ ಕಂಪೆನಿಯಿಂದ ಹೊಸ ಪ್ರಿಂಟರ್ ಬಿಡುಗಡೆ! ಏನೆಲ್ಲಾ ಸೌಲಭ್ಯವಿದೆ ಗೊತ್ತಾ?
- 13 hrs ago
ನಿಮ್ಮ ರಕ್ಷಣೆಗೆ ನೆರವಾಗಲಿವೆ ಈ ಗ್ಯಾಜೆಟ್ಗಳು; ಮಹಿಳೆಯರಿಗಂತೂ ಅಗತ್ಯ!
- 15 hrs ago
Oppo Reno 8T 5G : ಭಾರತಕ್ಕೆ ಎಂಟ್ರಿ ಕೊಟ್ಟ ಒಪ್ಪೋ ರೆನೋ 8T 5G! ಕ್ಯಾಮೆರಾ ಹೇಗಿದೆ? ವಿಶೇಷತೆ ಏನು?
Don't Miss
- Sports
ಭಾರತ vs ಆಸ್ಟ್ರೇಲಿಯಾ: ಸುಂದರ್ ಸೇರಿ ನಾಲ್ವರು ಸ್ಪಿನ್ನರ್ಗಳು ನೆಟ್ ಬೌಲರ್ಗಳಾಗಿ ತಂಡಕ್ಕೆ ಸೇರ್ಪಡೆ
- Movies
Katheyondu Shuruvagide: ಕೋಪ ಮರೆತು ಬಹದ್ದೂರ್ ವಂಶದ ಮರ್ಯಾದೆ ಉಳಿಸುತ್ತಾಳಾ ಕೃತಿ..?
- News
ಕಾಂಗ್ರೆಸ್ ಸೇರ್ತಾರಾ ಸುದೀಪ್?; ನಟ ಸುದೀಪ್ ಕಾಂಗ್ರೆಸ್ ಗೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ
- Lifestyle
Horoscope Today 4 Feb 2023: ಶನಿವಾರ : ದ್ವಾದಶ ರಾಶಿಗಳ ರಾಶಿಫಲ ಹೇಗಿದೆ?
- Automobiles
ಹೊಸ ನವೀಕರಣಗಳೊಂದಿಗೆ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಜನಪ್ರಿಯ ಕಿಯಾ ಸೆಲ್ಟೋಸ್
- Finance
ಅದಾನಿ ಕಳೆದುಕೊಂಡಿದ್ದು ಎಷ್ಟು ಲಕ್ಷ ಕೋಟಿ? ಕುಸಿಯುತ್ತಿವೆ ಷೇರುಗಳು- ಭಾರತದ ಶ್ರೀಮಂತನಿಗೆ ಮಂದೇನು ಕಾದಿದೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಈ ಅಗ್ಗದ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಈಗ ಸಖತ್ ಡಿಸ್ಕೌಂಟ್!
ಟೆಕ್ನೋ ಕಂಪೆನಿಯು ಅಗ್ಗದ ಬೆಲೆಯಲ್ಲಿ ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಆ ಪೈಕಿ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಸಹ ಎಂಟ್ರಿ ಲೆವೆಲ್ ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್ ಇದೀಗ ಅಮೆಜಾನ್ ತಾಣದಲ್ಲಿ ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯ ಇದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ 25% ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದ್ದು, ಕೊಡುಗೆಯಲ್ಲಿ 5,999 ರೂ. ಗಳಿಗೆ ದೊರೆಯುತ್ತದೆ. ಇದರೊಂದಿಗೆ ಬ್ಯಾಂಕ್ ಆಫರ್‌ಗಳು ಲಭ್ಯವಿದ್ದು, ಜೊತೆಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆಗಳು ಗ್ರಾಹಕರಿಗೆ ಸಿಗಲಿವೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಒಳಗೊಂಡಿದ್ದು, 2GB RAM ಮತ್ತು 32GB ಇಂಟರ್ ಸ್ಟೋರೇಜ್ ವೇರಿಯಂಟ್ ಆಯ್ಕೆ ಪಡೆದಿದೆ.
ಟೆಕ್ನೋ ಕಂಪನಿಯು ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಹೆಲಿಯೊ A22 ಪ್ರೊಸೆಸರ್ ನಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿನ ಆಂಡ್ರಾಯ್ಡ್ 12 ಗೋ ಓಎಸ್ ಸಪೋರ್ಟ್ ಪಡೆದಿದೆ. ಈ ಫೋನ್ ಸಿಂಗಲ್ ಚಾರ್ಜ್‌ನಲ್ಲಿ 42 ಗಂಟೆಗಳ ವರೆಗೆ ಸ್ಟ್ಯಾಂಡ್‌ಬೈ ಬ್ಯಾಕ್‌ಅಪ್ ನೀಡಲಿದೆ. ಹಾಗಾದರೆ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಜೊತೆಗೆ 720 x 1600 ಪಿಕ್ಸೆಲ್ ಸ್ಕ್ರಿನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270ppi ಆಗಿದೆ. ಈ ಡಿಸ್‌ಪ್ಲೇ 480 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಯಾವ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ
ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಹೆಲಿಯೊ A22 ಪ್ರೊಸೆಸರ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಇದು ಆಂಡ್ರಾಯ್ಡ್ 12 ಗೋ ಆವೃತ್ತಿಯಲ್ಲಿ HiOS 8.6 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2 GB RAM ಮತ್ತು 32 GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.
ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್
ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದು 8 ಮೆಗಾ ಪಿಕ್ಸೆಲ್ ಸೆನ್ಸಾರ್ AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಒಳಗೊಂಡಿದೆ.
ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು
ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆ ಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ ಬೆಂಬಲಿಸಲಿದೆ. ಇದಲ್ಲದೆ ಓಟಿಜಿ ಕನೆಕ್ಟಿವಿಟಿ, ಆಕ್ಸಿಲೆರೋಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್, ಗ್ಯಾವಿಟಿ ಸೆನ್ಸಾರ್ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ 164.85 × 76.25 × 8.75mm ಸುತ್ತಳತೆಯನ್ನು ಒಳಗೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470