ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿದೆ ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌!

|

ಟೆಕ್ನೋ ಕಂಪೆನಿ ತನ್ನ ಹೊಸ ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದಲ್ಲಿ ಲಾಂಚ್‌ ಆಗಲಿದೆ ಎಂದು ಅಮೆಜಾನ್‌ ಲ್ಯಾಂಡಿಂಗ್‌ ಪೇಜ್‌ನಲ್ಲಿ ತಿಳಿಸಿದೆ. ಅಮೆಜಾನ್‌ನಲ್ಲಿನ ಮೈಕ್ರೋಸೈಟ್‌ನಲ್ಲಿ ಶೀಘ್ರದಲ್ಲೇ ಲಾಂಚ್‌ ಆಗಲಿದೆ ಎಂದು ಕಾಣಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಇದು 480 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

 ಟೆಕ್ನೋ ಪಾಪ್‌ 6 ಪ್ರೊ

ಹೌದು, ಟೆಕ್ನೋ ಕಂಪೆನಿ ಹೊಸ ಟೆಕ್ನೋ ಪಾಪ್‌ 6 ಪ್ರೊ ಫೋನ್‌ ಸದ್ಯದಲ್ಲೇ ಲಾಂಚ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಟೆಕ್ನೋ ಪಾಪ್‌ 5 ಪ್ರೊ ಸ್ಮಾರ್ಟ್‌ಫೋನ್‌ ಉತ್ತರಾಧಿಕಾರಿಯಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದೆ ಎನ್ನಲಾಗಿದೆ. ಇದು ಕರ್ಣೀಯ ವಿನ್ಯಾಸದ ಮಾದರಿಯನ್ನು ಪಡೆದಿದೆ. ರೈಟ್‌ ಸೈಡ್‌ನಲ್ಲಿ ಪವರ್‌ ಬಟನ್‌ ಫಿಂಗರ್‌ಪ್ರಿಂಟ್‌ ಸ್ಕ್ಯಾನರ್‌ ಅನ್ನು ಸಹ ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇ‍ಷತೆ ಏನಿರಲಿದೆ ಅನ್ನೊದ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಡಿಸ್‌ಪ್ಲೇ ರಚನೆ ಹೇಗಿರಲಿದೆ?

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಈ ಡಿಸ್‌ಪ್ಲೇ 720 x 1600 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 480 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಅನ್ನು ನೀಡಲಿದೆ. ಇದು ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಹೆಲಿಯೊ A22 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 Go ಆವೃತ್ತಿಯಲ್ಲಿ HiOS 8.6 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದು 8 ಮೆಗಾಪಿಕ್ಸೆಲ್‌ ಸೆನ್ಸಾರ್‌ AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಬೆಂಬಲಿಸಲಿದೆ. ಇದಲ್ಲದೆ ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರರ, ಗ್ಯಾವಿಟಿ ಸೆನ್ಸಾರ್‌ ಅನ್ನು ಹೊಂದಿರಲಿದೆ ಎನ್ನಲಾಗಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್‌ ಸೆಪ್ಟೆಂಬರ್ 23 ರಿಂದ 28 ರ ನಡುವೆ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಇದು ಮುಂಬರುವ ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ಮಾರಾಟದ ಸಮಯದಲ್ಲಿ ಭಾರತದಲ್ಲಿ ಮಾರಾಟವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಟೆಕ್ನೋ

ಇದಲ್ಲದೆ ಟೆಕ್ನೋ ಕಂಪೆನಿ ಇತ್ತೀಚಿಗೆ ಭಾರತದಲ್ಲಿ ಹೊಸ ಟೆಕ್ನೋ ಕ್ಯಾಮನ್‌ 19 ಪ್ರೊ 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಇಂಡಸ್ಟ್ರಿ-ಫಸ್ಟ್, ಕಸ್ಟಮರ್-ಡಿಸೈನ್ಡ್ 64 ಮೆಗಾಪಿಕ್ಸೆಲ್ RGBW+ (G+P) ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್‌ ಡೈಮೆನ್ಸಿಟಿ 810 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ ಮೆಮೊರಿ ಫ್ಯೂಷನ್ ಫೀಚರ್ಸ್ ಅನ್ನು ಕೂಡ ಒಳಗೊಂಡಿದೆ.

Best Mobiles in India

English summary
Tecno Pop 6 Pro Smartphone teased on Amazon

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X