ಭಾರತದಲ್ಲಿ ಅಗ್ಗದ ಬೆಲೆಗೆ ಲಾಂಚ್ ಆಯ್ತು ಮತ್ತೊಂದು ಟೆಕ್ನೋ ಸ್ಮಾರ್ಟ್‌ಫೋನ್!

|

ಟೆಕ್ನೋ ಕಂಪೆನಿ ತನ್ನ ನೂತನ ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಪ್ರೈಸ್ ಟ್ಯಾಗ್‌ನಲ್ಲಿ ಲಾಂಚ್ ಆಗಿದ್ದು, ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿದೆ. ಮುಖ್ಯವಾಗಿ ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 2GB + 32GB ಸ್ಟೋರೇಜ್‌ ಆಯ್ಕೆಯನ್ನು ಪಡೆದಿದೆ.

ಕಾರ್ಯನಿರ್ವಹಿಸಲಿದ್ದು

ಹೌದು, ಟೆಕ್ನೋ ಕಂಪನಿಯು ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ದೇಶಿಯ ಮಾರುಕಟ್ಟೆಗೆ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಹೆಲಿಯೊ A22 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದ್ದು, ಇತ್ತೀಚಿನ ಆಂಡ್ರಾಯ್ಡ್‌ 12 ಗೋ ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದ್ದು, 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದೆ.

ಗಂಟೆಗಳ

ಈ ಫೋನ್ ಸಿಂಗಲ್‌ ಚಾರ್ಜ್‌ನಲ್ಲಿ 42 ಗಂಟೆಗಳ ವರೆಗೆ ಸ್ಟ್ಯಾಂಡ್‌ಬೈ ಬ್ಯಾಕ್‌ಅಪ್‌ ನೀಡಲಿದೆ. ಇದರೊಂದಿಗೆ ಈ ಫೋನ್ ಫೇಸ್‌ ಅನ್‌ಲಾಕ್ ಫೀಚರ್‌ ಅನ್ನು ಒಳಗೊಂಡಿದೆ. ಹಾಗಾದರೆ ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಇತರೆ ಫೀಚರ್ಸ್‌ಗಳೆನು? ಈ ಫೋನಿನ ಬೆಲೆ ಎಷ್ಟು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದ್ದು, ಜೊತೆಗೆ 720 x 1600 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 270ppi ಆಗಿದೆ. ಈ ಡಿಸ್‌ಪ್ಲೇ 480 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಹೊಂದಿದ್ದು, ವಾಟರ್‌ಡ್ರಾಪ್ ನಾಚ್ ವಿನ್ಯಾಸವನ್ನು ಹೊಂದಿದೆ.

ಯಾವ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ

ಯಾವ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಹೆಲಿಯೊ A22 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಆಂಡ್ರಾಯ್ಡ್‌ 12 ಗೋ ಆವೃತ್ತಿಯಲ್ಲಿ HiOS 8.6 ಸ್ಕಿನ್‌ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌

ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದು 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ AI ಲೆನ್ಸ್ ಮತ್ತು LED ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ ಸೆಲ್ಫಿಗಳು ಮತ್ತು ವೀಡಿಯೊ ಕರೆಗಳಿಗಾಗಿ 5 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ ಬೇಸಿಕ್ ಎಡಿಟಿಂಗ್ ಆಯ್ಕೆಗಳನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು

ಟೆಕ್ನೋ ಪಾಪ್‌ 6 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ ಬೆಂಬಲಿಸಲಿದೆ. ಇದಲ್ಲದೆ ಓಟಿಜಿ ಕನೆಕ್ಟಿವಿಟಿ, ಆಕ್ಸಿಲೆರೋಮೀಟರ್‌, ಪ್ರಾಕ್ಸಿಮಿಟಿ ಸೆನ್ಸಾರ್, ಗ್ಯಾವಿಟಿ ಸೆನ್ಸಾರ್‌ ಅನ್ನು ಹೊಂದಿದೆ. ಹಾಗೆಯೇ ಈ ಫೋನ್ 164.85 × 76.25 × 8.75mm ಸುತ್ತಳತೆಯನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್‌ 2GB + 32GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಯನ್ನು ಒಳಗೊಂಡಿದ್ದು, ಇದರ ಬೆಲೆಯು 6,099ರೂ. ಗಳು ಆಗಿದೆ. ಇನ್ನು ಈ ಫೋನ್ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಖರೀದಿಗೆ ಲಭ್ಯ.

ಈ ಫೋನಿಗೆ ಪರ್ಯಾಯ ಫೋನ್‌ಗಳು

ಈ ಫೋನಿಗೆ ಪರ್ಯಾಯ ಫೋನ್‌ಗಳು

ನೂತನ ಟೆಕ್ನೋ ಪಾಪ್ 6 ಪ್ರೊ ಸ್ಮಾರ್ಟ್‌ಫೋನ್‌ ತನ್ನ ವರ್ಗದಲ್ಲೇ ಆಕರ್ಷಕ ಲುಕ್ ಪಡೆದಿದೆ. ಇನ್ನು ಈ ಫೋನ್ ರೆಡ್ಮಿ A1 ಮತ್ತು ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ಗಳಿಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದೆ.

Best Mobiles in India

English summary
Tecno Pop 6 Pro with 5,000mAh Battery Launched in India: Price, Specifications.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X